ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು

ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ ಎಂದು ಸತೀಶ್​ ಜಾರಕಿಹೊಳಿ ಹೇಳಿದರು.

ಮತ್ತೆ ಮುನ್ನೆಲೆಗೆ ಬಂದ ದಲಿತ ಸಿಎಂ ವಿಚಾರ; ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಿಷ್ಟು
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
Edited By: ವಿವೇಕ ಬಿರಾದಾರ

Updated on: Oct 28, 2023 | 11:24 AM

ಬೆಂಗಳೂರು ಅ.28: ದಲಿತ ನಾಯಕನನ್ನು ಸಿಎಂ (CM) ಮಾಡುವ ವಿಚಾರ ರಾಜ್ಯ ಕಾಂಗ್ರೆಸ್​ನಲ್ಲಿ ಚುನಾವಣೆ ಪೂರ್ವದಿಂದಲೂ ಚರ್ಚೆಯಾಗುತ್ತಿದೆ. ಕಾಂಗ್ರೆಸ್​ನಲ್ಲಿ (Congress) ದಲಿತ ಸಿಎಂ ವಿಚಾರ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಈ ಹಿಂದೆ ಕಾಂಗ್ರೆಸ್​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ (BK Hariprasad) ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಇದೇ ಸಂದರ್ಭದಲ್ಲಿ ಸಚಿವ ಸತೀಶ್​ ಜಾರಕಿಹೊಳಿ (Satish Jarkiholi) ಕೂಡ ಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಹೇಳಿದ್ದರು. ಇದಾದ ಬಳಿಕ ಬೂದಿ ಮುಚ್ಚಿದ ಕೆಂಡದಂತಿದ್ದ ಈ ವಿಚಾರ ಶುಕ್ರವಾರ ನಡೆದ ಸಿಎಂ, ಡಿಸಿಎಂ ಮತ್ತು ಸಚಿವರ ಸಭೆ ಬಳಿಕ ಮುನ್ನೆಲೆಗೆ ಬಂದಿದೆ. ಹೌದು ದಲಿತ ನಾಯಕನನ್ನು ಮುಖ್ಯಮಂತ್ರಿ ಮಾಡುವ ವಿಚಾರವಾಗಿ ಸಚಿವ ಸತೀಶ್​ ಜಾರಕಿಹೊಳಿ ಮಾತನಾಡಿ ದಲಿತ ಸಿಎಂ ವಿಚಾರ ನಮ್ಮ ವ್ಯಾಪ್ತಿಯಲ್ಲಿ ಬರಲ್ಲ ಎಂದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾಗುತ್ತಾರೋ, ಮುಂದುವರಿಯುತ್ತಾರೋ ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ನಮ್ಮ ಮಟ್ಟದಲ್ಲಿ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಆಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಫೈನಲ್​ ಆಯ್ತು ನಿಗಮ ಮಂಡಳಿಗೆ ನೇಮಕವಾಗುವ ಹೆಸರು; 3 ಕ್ಕಿಂತ ಹೆಚ್ಚು ಭಾರಿ ಗೆದ್ದ ಶಾಸಕರಿಗೆ ಮಣೆ? ಇಲ್ಲಿದೆ ಪಟ್ಟಿ

ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಸಭೆ ನಡೆಸಿರುವ ವಿಚಾರವಾಗಿ ಮಾತನಾಡಿದ ಅವರು ಗೃಹ ಸಚಿವರು ತಮ್ಮ ನಿವಾಸದಲ್ಲಿ ಔತಣಕೂಟ ಇಟ್ಟುಕೊಂಡಿದ್ದರು. ಮುಂದಿನ ಬಾರಿ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ನಮ್ಮ ಮನೆಗೆ ಆಹ್ವಾನಿಸುತ್ತೇನೆ. ಎಲ್ಲರನ್ನೂ ಕರೆದು ಊಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಎರಡೂ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ. ಇನ್ನು ಗೃಹ ಸಚಿವ ಜಿ ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರವಾಗಿ ಮಾತನಾಡಿ ರಾಜಕೀಯ ವಿಚಾರದ ಬಗ್ಗೆ ನಾವು ಚರ್ಚೆ ಮಾಡಿದೆವು. ರಾಜಕೀಯ ವಿಚಾರ ಬಿಟ್ಟು ಬೇರೆ ಏನು ಚರ್ಚೆ ಮಾಡಲು ಸಾಧ್ಯ? ನಮ್ಮ ಚರ್ಚೆ ಹೊಸದೇನಲ್ಲ, ಮೇಷ್ಟ್ರು ಬರೀತಾನೆ, ಅಳಿಸುತ್ತಾನೆ. ರಾಜಕಾರಣಿಗಳು, ಶಾಸಕರು ಕೂತರೇ ರಾಜಕೀಯ ಚರ್ಚೆ ಆಗುತ್ತೆ. ಗೃಹ ಸಚಿವ ಪರಮೇಶ್ವರ್​ ಊಟಕ್ಕೆ ಕರೆದಿದ್ದರು ಹೋಗಿದ್ದೆವು ಅಷ್ಟೇ. ಔತಣಕೂಟದ ಜೊತೆ ಕೆಲವು ರಾಜಕೀಯ ವಿಚಾರ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
Loading...
Unable to load recommendations.
Follow Us