AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ 2,000 ರೂ; ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಗೃಹಲಕ್ಷ್ಮೀ ಯೋಜನೆ ಘೋಷಿಸಿದ ಡಿಕೆಶಿ

ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಯ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ₹2000 ಹಣ ವಿತರಣೆ ಮಾಡುವುದಾಗಿ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್ ಘೋಷಣೆ.

ಮಹಿಳೆಯರಿಗೆ 2,000 ರೂ; ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ಗೃಹಲಕ್ಷ್ಮೀ ಯೋಜನೆ ಘೋಷಿಸಿದ ಡಿಕೆಶಿ
ಪ್ರಿಯಾಂಕಾ ಗಾಂಧಿ ವಾದ್ರಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 16, 2023 | 7:55 PM

Share

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಯ ಮಹಿಳೆಯರಿಗೆ ಬೇಷರತ್ತಾಗಿ 2,000 ರೂ. ನೀಡಲಾಗುವುದು. ಇದಕ್ಕಾಗಿ ಗೃಹಲಕ್ಷ್ಮೀ ಯೋಜನೆ (Griha Laxmi yojana) ರೂಪಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಘೋಷಣೆ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರ ಬಳಿ ಕಾಂಗ್ರೆಸ್​ ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಸಮ್ಮುಖದಲ್ಲಿ ಅವರು ಈ ಘೋಷಣೆ ಮಾಡಿದರು. ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವ ಬಗ್ಗೆಯೂ ಅವರು ಭರವಸೆ ನೀಡಿದರು. ಇದಕ್ಕೆ ಪ್ರಿಯಾಂಕಾ ಗಾಂಧಿ ದನಿಗೂಡಿಸಿದರು.

ಬೆಲೆ ಏರಿಕೆಯ ಸಂಕಷ್ಟದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಹೀಗಾಗಿ ಇಡೀ ಕುಟುಂಬದ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮಹಿಳೆಯರಿಗಾಗಿ ಈ ಕೊಡುಗೆ ನೀಡುತ್ತಿದ್ದೇವೆ. ಯೋಜನೆಯ ಭರವಸೆಯೊಂದಿಗೆ ಗ್ಯಾರಂಟೀ ಚೆಕ್ ಅನ್ನು ಈಗಲೇ ನೀಡುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ಬಿಜೆಪಿ ವಿರುದ್ಧ ಪ್ರಿಯಾಂಕಾ ಕಿಡಿನುಡಿ

ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಆಡಳಿತಾರೂಢ ಬಿಜೆಪಿ ವಿರುದ್ಧ ಕಿಡಿಕಾರಿದರು. ದೇಶಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೊಡುಗೆ ಸಾಕಷ್ಟಿದೆ. ಅವರು ಬಡವರು, ಮಹಿಳೆಯರು, ರೈತರಿಗೆ ಸಾಕಷ್ಟು ಯೋಜನೆಗಳು ನೀಡಿದ್ದರು. ಕಾಂಗ್ರೆಸ್​ ಆಡಳಿತಾವಧಿಯಲ್ಲಿ ಸಾಕಷ್ಟು ಜನಪರ ಕೆಲಸಗಳನ್ನು ಮಾಡಲಾಗಿತ್ತು. ಆದರೆ, ಇಂದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನಸಾಮಾನ್ಯರ ಹಿತ ಕಡೆಗಣಿಸಿದೆ ಎಂದು ಪ್ರಿಯಾಂಕಾ ಹೇಳಿದರು.

ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮತ್ತೆ ಹೆಚ್ಚಳ; ‘ನಾ ನಾಯಕಿ ಸಮಾವೇಶ’ದಲ್ಲಿ ಸಿದ್ದರಾಮಯ್ಯ

‘ಬೆಲೆ ಏರಿಕೆಯಿಂದ ಇಂದು ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟ್​​ ಕಮಿಷನ್​ ಆರೋಪವಿದೆ. ಪಿಎಸ್​ಐ ನೇಮಕಾತಿ ಹಗರಣ ಸೇರಿ ಹಲವು ಭ್ರಷ್ಟಾಚಾರ ಆರೋಪಗಳಿವೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಕೊವಿಡ್ ವೇಳೆ ಜನರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಉದ್ಯೋಗ ನೀಡುವಲ್ಲಿ ವಿಫಲವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು, ಬಡವರ ಸಮಸ್ಯೆಗಳಿಗೆ ಕೇಂದ್ರ, ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಶ್ರೀಮಂತರ ಪರ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:39 pm, Mon, 16 January 23

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್