ವಿಧಾನಸೌಧದಲ್ಲಿ 10 ಲಕ್ಷ ರೂ. ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್, ಸಚಿವರ ಹೆಸರು ಬಹಿರಂಗ

ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಜಗದೀಶ್ ಎನ್ನುವರು ಅನಾಧಿಕೃತವಾಗಿ ವಿಧಾನಸೌಧದಲ್ಲಿ 10 ಲಕ್ಷ ರೂ. ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಬಾಂಬ್ ಸಿಡಿಸಿದೆ.

ವಿಧಾನಸೌಧದಲ್ಲಿ 10 ಲಕ್ಷ ರೂ. ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್, ಸಚಿವರ ಹೆಸರು ಬಹಿರಂಗ
ಪಿಡಬ್ಲ್ಯೂಡಿ ಎಇ ಜಗದೀಶ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 06, 2023 | 6:54 PM

ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಸಿಕ್ಕ 10 ಲಕ್ಷ ರೂ. ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಇದೀಗ ಹೊಸ ಬಾಂಬ್ ಸಿಡಿಸಿದೆ. 10 ಲಕ್ಷ ರೂ. ತಂದಿದ್ದ ಜಗದೀಶ್ ಫೋನಿನಲ್ಲಿ ಕೊನೆಯದಾಗಿ 3 ಬಾರಿ ಹೊರಹೋದ ಹಾಗೂ 2 ಬಾರಿ ಒಳಬಂದ ಕರೆ ಸಚಿವರೊಬ್ಬರ ಪಿಎಯದ್ದು ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

ಇಂಜಿನಿಯರ್ 10.5 ಲಕ್ಷ ರೂ. ವಿಧಾನಸೌಧಕ್ಕೆ ತಂದಿದ್ದೇಕೆ? ಲಂಚ ಪಡೆದ ಹಣವೋ, ಮಂತ್ರಿಗೆ ಕೊಡಲು ತಂದ ಹಣವೋ? ಕೈ ಪ್ರಶ್ನೆ

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಜಗದೀಶರನ್ನ ಬಿಟ್ಟು ಕಳಿಸುವಂತೆ ಪೊಲೀಸರಿಗೆ ಕರೆ ಮಾಡಿದ ಸಚಿವ ಯಾರು? ಬಸವರಾಜ ಬೊಮ್ಮಾಯಿ ಅವರೇ, ಈ ರಹಸ್ಯವನ್ನ ನೀವು ಹೇಳುವಿರಾ, ನಾವು ಹೇಳಬೇಕೆ? ಎಂದು ಪ್ರಶ್ನಿಸಿದೆ.

ವಿಧಾನಸೌಧಕ್ಕೆ 10 ಲಕ್ಷ ತಂದಿದ್ದು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್. ಆ ಸಮಯದಲ್ಲಿ ವಿಧಾನಸೌಧದಲ್ಲಿದ್ದಿದ್ದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್. ಬಸವರಾಜ ಬೊಮ್ಮಾಯಿ ಅವರೇ 40% ಕಮಿಷನ್ ಹಣದ ಮೂಲದ ರಹಸ್ಯ ಕಾಪಾಡುತ್ತಿರುವುದೇಕೆ ಸರ್ಕಾರ? ಇದು ನಿಮ್ಮ PayCM ಖಾತೆಗೆ ಜಮೆಯಾಗಲು ಬಂದ ಹಣವೇ ಅಥವಾ ಸಚಿವರ ಕಮಿಷನ್ ಪಾಲೇ? ಎಂದು ಪ್ರಶ್ನಿಸಿದೆ. ಎಂದು ಟ್ವೀಟ್ ಮಾಡುವ ಮೂಲಕ ಪರೋಕ್ಷವಾಗಿ 10 ಲಕ್ಷ ರೂ. ಹಣವನ್ನು ಸಚಿವ ಸಿಸಿ ಪಾಟೀಲ್ ಗೆ ಕೊಡಲು ತಂದಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಲಂಚ ಕೊಡಬೇಕೆಂದು ತೆಗೆದುಕೊಂಡು ಹೋಗ್ತಿದ್ದ ಹಣ ಅಲ್ಲ: PWD ಎಇ ಜಗದೀಶ್ ಪರ ವಕೀಲ ಹೇಳಿಕೆ

ಶಕ್ತಿ ಸೌಧಕ್ಕೆ 10.5 ಲಕ್ಷ ರೂ. ನಗದು ಸಾಗಿಸುತ್ತಿದ್ದಾಗ ಪಿಡಬ್ಲ್ಯೂಡಿ  ಸಹಾಯಕ ಇಂಜಿನಿಯರ್ ಸಿಕ್ಕಿಬಿದ್ದಿದ್ದರು. ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬುಧವಾರ ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್(Assistant Engineer of Public Works Department)  ಜಗದೀಶ್​​ ಎಂಬುವವರು ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದರು.

PWD ಎಇ ಜಗದೀಶ್ ಪರ ವಕೀಲ ಹೇಳಿಕೆ

ವಿಧಾನಸೌಧದಲ್ಲಿ 10 ಲಕ್ಷ ಹಣ ಜಪ್ತಿ ಮಾಡಿದ ಪ್ರಕರಣ ಸಂಬಂಧ ಆರೋಪಿ ಪಿಡಬ್ಲ್ಯೂಡಿ ಎಇ ಜಗದೀಶ್ (Assistant Engineer of Public Works Department) ಪರ ವೀಕಲ ಸ್ಪಷ್ಟನೆ ನೀಡಿದ್ದು, ಜಗದೀಶ್ ಲಂಚ ಕೊಡಬೇಕೆಂದು ತೆಗೆದುಕೊಂಡು ಹೋಗುತ್ತಿದ್ದ ಹಣ ಅಲ್ಲ, ಜಗದೀಶ್ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು, ಪ್ರಕರಣದ ಇತ್ಯರ್ಥಕ್ಕಾಗಿ ಬೆಂಗಳೂರಿಗೆ ಹಣ ತಂದಿದ್ದರು. ಈ ವೇಳೆ ಅರ್ಜೆಂಟ್ ಆಗಿ ಅಧಿಕಾರಿಯೊಬ್ಬರನ್ನು ಭೇಟಿ ಮಾಡಬೇಕಿತ್ತು. ಹೀಗಾಗಿ ವಿಧಾನಸೌಧಕ್ಕೆ ತೆರಳಿದ್ದರು. ಅಷ್ಟೇ ಹೊರತು ಯಾರಿಗೋ ಹಣ ನೀಡಬೇಕೆಂದು ಹೋಗಿಲ್ಲ ಎಂದರು. ಹಣದ ಬಗ್ಗೆ ಪೊಲೀಸರಿಗೆ ಎಲ್ಲಾ ಮಾಹಿತಿ ನೀಡಲಾಗಿದೆ. ಆದರೂ ಯಾಕೆ ಜಗದೀಶ್​ರನ್ನು ಬಂಧಿಸಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ