ನಮಗೆ ಟಿಪ್ಪು ಸುಲ್ತಾನ್ ಪರ ಎನ್ನುವವರು ಬ್ರಿಟಿಷರ ಬೂಟು ನೆಕ್ಕೋರು: ಬಿಕೆ ಹರಿಪ್ರಸಾದ್

| Updated By: ರಮೇಶ್ ಬಿ. ಜವಳಗೇರಾ

Updated on: Dec 24, 2023 | 12:49 PM

ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರು ಬಿಜೆಪಿ ಹಾಗೂ ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದು, ನಮ್ಮನ್ನು ಟಿಪ್ಪು ಸುಲ್ತಾನ್ ಪರ ಎನ್ನುವವರು ಬ್ರಿಟಿಷರ ಬೂಟು ನೆಕ್ಕುವವರು ಎಂದು ಗುಡುಗಿದ್ದಾರೆ.

ನಮಗೆ ಟಿಪ್ಪು ಸುಲ್ತಾನ್ ಪರ ಎನ್ನುವವರು ಬ್ರಿಟಿಷರ ಬೂಟು ನೆಕ್ಕೋರು: ಬಿಕೆ ಹರಿಪ್ರಸಾದ್
ಬಿ.ಕೆ.ಹರಿಪ್ರಸಾದ್
Follow us on

ಹುಬ್ಬಳ್ಳಿ (ಡಿಸೆಂಬರ್ 24): ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನನ್ನು ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಇವರಿಂದ ನಾವು ಕಲಿಬೇಕಾಗಿಲ್ಲ. ನಾವು ಟಿಪ್ಪು ಸುಲ್ತಾನ ಪಾರ್ಟ್ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ. ನಮಗೆ ಟಿಪ್ಪು ಸುಲ್ತಾನ್ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು ಎಂದು ಪರೋಕ್ಷವಾಗಿ ಬಿಜೆಪಿಯವರು ಬೂಟು ನೆಕ್ಕೋರು ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್​ (bk hariprasad ) ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಬಿಕೆ ಹರಿಪ್ರಸಾದ್, ಬಿಜೆಪಿಗೆ ರೈತರು, ಮಹಿಳೆಯರ ಶೋಷಣೆ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡುತ್ತೇವೆ. ನಮ್ದು ಜ್ಯಾತ್ಯಾತೀತ ರಾಷ್ಟ್ರ. ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು. ಕಾಂಗ್ರೆಸ್ ತುಷ್ಟೀಕರಣ ಮಾಡತಿಲ್ಲ. ಬಹು ಸಂಖ್ಯಾತರ ತುಷ್ಟೀಕರಣ ಮಾಡುತ್ತಿರುವುದು ಬಿಜೆಪಿ. ಹಿಂಸೆ ಸುಳ್ಳನ್ನು ಪ್ರಚಾರ ಮಾಡುತ್ತಿರುವುದು ಬಿಜೆಪಿ. ಅಲ್ಪ ಸಂಖ್ಯಾತರು,ಮೀಸಲಾತಿ ವಿಚಾರದಲ್ಲಿ ಇವರು ವಿರೋಧ. ನಾಗಪುರದಲ್ಲಿ ಇರೋ ಇವರ ಸುತ್ರಧಾರರು ಜಾತಿ ಗಣತಿ ವಿರೋಧಿಗಳು. ಇವರಿಂದ ನಾವ ಕಲಿಬೇಕಾಗಿಲ್ಲ. ನಾವು ಟಿಪ್ಪು ಸುಲ್ತಾನ್ ಪಾರ್ಟ್ ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ. ನಮಗೆ ಟಿಪ್ಪು ಸುಲ್ತಾನ್ ಪರ ಎನ್ನುವರು ಬ್ರಿಟಿಷರ ಬೂಟು ನೆಕ್ಕೋರು. ಇವರು ನಮಗೆ ಟಿಪ್ಪು ಸುಲ್ತಾನ್ ಫಾಲೋ ಮಾಡ್ತಿವೋ ಬಿಡ್ತಿವೋ ಅನ್ಮೋದನ್ನ ಹೇಳೋದ ಬೇಡ ಎಂದು ವಾಗ್ದಾಳಿ ನಡೆಸಿದರು.

ಅಹಾರ, ಉಡುಪಿನ ಹಕ್ಕು ಎಲ್ಲರ ವೈಯಕ್ತಿಕ. ಬಿಜೆಪಿಗೆ ರೈತರು, ಮಹಿಳೆಯರ ಶೋಷಣೆ ಬಗ್ಗೆ ಕಾಳಜಿ ಇಲ್ಲ. ಈ ವಿಚಾರ ಮಾತಾಡ್ತೀದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡ್ತೀವಿ. ನಮ್ದು ಜ್ಯಾತ್ಯಾತೀತ ರಾಷ್ಟ್ರ. ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು,ಕಾಂಗ್ರೆಸ್ ತುಷ್ಟೀಕರಣ ಮಾಡತಿಲ್ಲ. ಬಹು ಸಂಖ್ಯಾತರ ತುಷ್ಟೀಕರಣ ಮಾಡ್ತಿರೋದು ಬಿಜೆಪಿ. ಹಿಂಸೆ ಸುಳ್ಳನ್ನು ಪ್ರಚಾರ ಮಾಡ್ತಿರೋದು ಬಿಜೆಪಿ. ಅಲ್ಪ ಸಂಖ್ಯಾತರು, ಮೀಸಲಾತಿ ವಿಚಾರದಲ್ಲಿ ಇವರು ವಿರೋಧ. ನಾಗಪುರದಲ್ಲಿ ಇರೋ ಇವರ ಸುತ್ರಧಾರರು ಜಾತಿ ಗಣತಿ ವಿರೋಧಿಗಳು ಎಂದರು.

ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳುವುದಕ್ಕೆ ಇರುವುದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಎನ್ನುವುದು ಸಂಪೂರ್ಣ ದೇಹ ಮುಚ್ಚಿಕೊಳ್ಳುವುದು. ಶಾಲಾ ಕಂಪೌಂಡ್ ವರೆಗೂ ಬುರ್ಖಾ ಆ ನಂತರ ಹಿಜಾಬ್ ಇರಬೇಕು ಎನ್ನುವುದು ನನ್ನ ಕಲ್ಪನೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ