ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡ ಕುಶಾಲ್​ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 25, 2024 | 1:14 PM

ಬೆಂಗಳೂರು, ಮಾರ್ಚ್​ 25: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ, ಕೇಂದ್ರ  ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ (Congress) ಮುಖಂಡ ಕುಶಾಲ್​ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 2656 ಪೋಲಿಂಗ್ ಬೂನ್ಸ್ ಒಳಪಡುವ ಸುಮಾರು 28-30 ಲಕ್ಷ ಜನ ಮತದಾರರು ಇದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ, ಜಾತಿ-ಮತ-ಪಂಥಗಳನ್ನು ಮೀರಿ ಜನರು ಸಹೋದರತ್ವದಿಂದ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ!

ಇಂತಹ ಶಾಂತಿ ಸೌಹಾರ್ದತೆಯ ಬೀಡು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದಿಂದ ಪ್ರಚೋದನಕಾರಿ ಭಾಷಳಿಗೆ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರಲ್ಲಿ ಆತಂಕ ಬಹಳಷ್ಟು ಮೂಡಿಸಿದೆ.

ಅವರ ರಾಜಕೀಯ ಇತಿಹಾಸದೂದ್ದಕ್ಕೂ ಶಾಂತಿ-ಸೌಹಾರ್ದತೆ ಕದಡುವಂತಹ ಕೋಮುಗಲಭೆಗೆ ಪ್ರಚೋದಿಸುವಂತಹ ಭಾಷಣಗಳಿಂದಲೇ ಕುಖ್ಯಾತಿ ಹೊಂದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರದಲ್ಲಿ ಭಾಷಣಕ್ಕೆ ಅವಕಾಶ ನೀಡದೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಾದ್ಯಂತ ಇಂತಹ ದುರ್ಘಟನೆಗಳು ಆಗದಂತ ಮುನ್ನೆಚ್ಚರಿಕೆ ವಹಿಸಿ ಶೋಭಾ ಕರಂದ್ಲಾಜೆ ಅವರ ಚುನಾವಣಾ ಭಾಷಣಗಳಿಗೆ ಅನುಮತಿ ನೀಡದೆ ನಿರ್ಬಂಧಿಸಬೇಕೆಂದು ಜಿಲ್ಲಾ ಕಾರ್ಯದರ್ಶಿ ಕುಶಾಲ್ ಹರುವೆಗೌಡ ಮತ್ತು ಸಂಜಯ್ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Mon, 25 March 24

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ