AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಖರ್ಗೆ ಕುರಿತ ಮೋದಿ ಹೇಳಿಕೆ ಕೀಳು ಮಟ್ಟದ ಪ್ರಚಾರ; ಎಂಬಿ ಪಾಟೀಲ್ ಕಿಡಿ

ವಿಧಾನಸಭಾ ಚುನಾವಣೆಗೆ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅಭಿವೃದ್ಧಿ ಎಂಬುದೇ ನಮ್ಮ ಮುಖ್ಯ ಘೋಷಣೆಯಾಗಿದೆ. ಈ ಐದು ಅಂಶಗಳೊಂದಿಗೆ ಪ್ರಚಾರ ಆರಂಭಿಸುತ್ತೇವೆ ಎಂದು ಎಂಬಿ ಪಾಟೀಲ್ ತಿಳಿಸಿದರು.

Karnataka Politics: ಖರ್ಗೆ ಕುರಿತ ಮೋದಿ ಹೇಳಿಕೆ ಕೀಳು ಮಟ್ಟದ ಪ್ರಚಾರ; ಎಂಬಿ ಪಾಟೀಲ್ ಕಿಡಿ
ಎಂಬಿ ಪಾಟೀಲ್
Ganapathi Sharma
|

Updated on: Feb 28, 2023 | 6:53 PM

Share

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಛತ್ತೀಸ್​ಗಢ ಅಧಿವೇಶನದಲ್ಲಿ ಕೊಡೆ ಹಿಡಿದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿರುವುದು ಕೀಳು ಮಟ್ಟದ ಪ್ರಚಾರದ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ಟೀಕಿಸಿದರು. ಬಿಜೆಪಿ ಹಿರಿಯ ನಾಯಕ ಎಲ್​​ಕೆ ಅಡ್ವಾಣಿ ಅವರು ಕೈ ಮುಗಿದು ನಿಂತಾಗ, ಅವರ ಎದುರಿಗೇ ಹಾದುಹೋದ ಮೋದಿ ಕೈ ಮುಗಿದಿರಲಿಲ್ಲ. ಅಡ್ವಾಣಿ ಅವರಿಗೆ ಅಪಮಾನ ಮಾಡಿದ್ದರು. ಇನ್ನು ಅದೇ ಪರಿಸ್ಥಿತಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬರಲಿದೆ ಎಂದು ಪಾಟೀಲ್ ಹೇಳಿದರು.

‘ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅಭಿವೃದ್ಧಿ ಕಾಂಗ್ರೆಸ್ ಘೋಷಣೆ’

ವಿಧಾನಸಭಾ ಚುನಾವಣೆಗೆ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಅಭಿವೃದ್ಧಿ ಎಂಬುದೇ ನಮ್ಮ ಮುಖ್ಯ ಘೋಷಣೆಯಾಗಿದೆ. ಈ ಐದು ಅಂಶಗಳೊಂದಿಗೆ ಪ್ರಚಾರ ಆರಂಭಿಸುತ್ತೇವೆ ಎಂದು ಎಂಬಿ ಪಾಟೀಲ್ ತಿಳಿಸಿದರು. ಉಚಿತ ಘೋಷಣೆಗಳನ್ನು ಮನೆ ಮನೆಗೆ ತೆಗೆದುಕೊಂಡು ಹೋಗುತ್ತೇವೆ. ಬಿಜೆಪಿ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡುತ್ತಿದೆ. ಆದರೆ, ನಾವು ರಾಜ್ಯದ ಜನರಿಗೆ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಸ್ಟಾರ್ ಪ್ರಚಾರಕರ ಕೊರತೆ ಇಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಅಧಿಕಾರದ ರಿಮೋಟ್ ಪರಿವಾರದ ಕೈಯಲ್ಲಿ; ಪ್ರಧಾನಿ ಮೋದಿ ವಾಗ್ದಾಳಿ ​ ಸಿದ್ದರಾಮಯ್ಯ, ಡಿಕೆಶಿ, ‌ಪ್ರಿಯಾಂಕಾ, ರಾಹುಲ್ ಸ್ಟಾರ್‌ ಪ್ರಚಾರಕರೇ. ರಾಜ್ಯ ಬಿಜೆಪಿ ನಾಯಕರಿಗೆ ಅವರು ಸೋಲುತ್ತಾರೆ ಎಂಬುದು ಚೆನ್ನಾಗಿ ಗೊತ್ತಾಗಿದೆ. ಅದೇ ಕಾರಣಕ್ಕೆ ಪದೇಪದೆ ರಾಜ್ಯಕ್ಕೆ ಮೋದಿ, ಅಮಿತ್ ಶಾ ಬರ್ತಿದ್ದಾರೆ. ರಾಜ್ಯದಲ್ಲಿ ನರೇಂದ್ರ ಮೋದಿ ಮ್ಯಾಜಿಕ್ ನಡೆಯಲ್ಲ ಎಂದು ಅವರು ಹೇಳಿದರು.

‘ಮೋದಿ ನಾಟಕ ಎಲ್ಲರಿಗೂ ಅರ್ಥವಾಗಿದೆ’​

ಕಾಂಗ್ರೆಸ್​ ನಾಯಕ, ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್​ಗೆ ಕಾಂಗ್ರೆಸ್ ಪಕ್ಷ​ ಅಪಮಾನ ಮಾಡಿತ್ತು ಎಂಬ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಎಂಬಿ ಪಾಟೀಲ್, ವೀರೇಂದ್ರ ಪಾಟೀಲ್​​​​ಗೆ ಅನಾರೋಗ್ಯ ಆಗಿತ್ತು. ಆದರೆ ಬಿಎಸ್​ ಯಡಿಯೂರಪ್ಪ ಅವರಿಗೆ ಏನಾಗಿತ್ತು ಎಂದು ಪ್ರಶ್ನಿಸಿದರು. ಸಿಎಂ ಸ್ಥಾನದಿಂದ ಬಿಎಸ್​ವೈಯನ್ನು ಯಾಕೆ ಇಳಿಸಿದರು? ಅವರನ್ನು ಹುದ್ದೆಯಿಂದ ಕೆಳಗಿಳಿಸಿ ಇನ್ನೊಬ್ಬ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡಿದರು. ತಿರುಗುಬಾಣ ಆಗುತ್ತದೆ ಎಂದು ಲಿಂಗಾಯತರನ್ನು ಸಿಎಂ ಮಾಡಿದರು. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿದರು. ಅಂಥವರು ಈ ಬಾರಿ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಮಾಡುತ್ತೇವೆ ಎನ್ನುತ್ತಾರೆ. ಲಿಂಗಾಯತರ ಮನವೊಲಿಸಲು ಮೋದಿ ಪ್ರಯತ್ನ ಮಾಡುತ್ತಿದ್ದಾರೆ. ಮೋದಿ ನಾಟಕ ಎಲ್ಲರಿಗೂ ಅರ್ಥ ಆಗಿದೆ ಎಂದು ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು