AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆಗಾಗಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ, ಡಿಕೆಶಿಗೆ ಪತ್ರ ರವಾನೆ

ಮಲ್ಲಿಕಾರ್ಜುನ ಖರ್ಗೆಗಾಗಿ ವಿ.ಆರ್ ಸುದರ್ಶನ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಅಧ್ಯಕ್ಷ ಡಿಕೆಶಿಗೆ ರವಾನಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಗಾಗಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ್ ರಾಜೀನಾಮೆ, ಡಿಕೆಶಿಗೆ ಪತ್ರ ರವಾನೆ
VR Sudarshan
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 04, 2022 | 9:45 PM

Share

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ್ (VR Sudarshan) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಇಂದು(ಅ.04) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಕಳುಹಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪರವಾಗಿ ಪ್ರಚಾರ ಮಾಡಲು ಸುದರ್ಶನ್ ಅವರು ತಮ್ಮ ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ( KPCC chief Spokesperson Post) ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Mallikarjun Kharge: ಕಾಂಗ್ರೆಸ್​ ಪಾಲಿನ ನಾಟೌಟ್ ಬ್ಯಾಟ್ಸ್​ಮನ್ ಮಲ್ಲಿಕಾರ್ಜುನ ಖರ್ಗೆ 

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಇನ್ ಚಾರ್ಜ್ ಸೆಕ್ರೆಟರಿ, ಜಂಟಿ ಕಾರ್ಯದರ್ಶಿ, ಪ್ರದೇಶ ಕಮಿಟಿ ಅಧ್ಯಕ್ಷಕರು, ಕಾಂಗ್ರೆಸ್ ಲೆಜಿಸ್ಲೇಟೀವ್ ಪಾರ್ಟಿ , ಪ್ರಮುಖ ಜವಾಬ್ದಾರಿ ಹೊತ್ತಿರುವ ಪಕ್ಷದ ನಾಯಕರು ಅಭ್ಯರ್ಥಿಗಳ ಪ್ರಚಾರ ಮಾಡುವಂತಿಲ್ಲ. ಒಂದು ವೇಳೆಪ್ರಚಾರ ಮಾಡಬೇಕು ಎಂದಿದ್ದರೆ, ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಪ್ರಚಾರದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.

ಈಗಾಗಲೇ ಮಲ್ಲಿಕಾರ್ಜುನ ಅವರ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಹಿರಿಯ ನಾಯಕ ಶಶಿತರೂರ್ ಅಧ್ಯಕ್ಷೀಯ ಚುನಾವಣೆಯ ಅಖಾಡದಲ್ಲಿದ್ದಾರೆ. ಇದರಿಂದ ಪಕ್ಷದ ಒಂದು ಹುದ್ದೆಯಲ್ಲಿದ್ದುಕೊಂಡು ಓರ್ವ ಅಭ್ಯರ್ಥಿ ಪರ ಕೆಲಸ ಅಥವಾ ಪ್ರಚಾರ ಮಾಡುವಂತಿಲ್ಲ. ಆದ್ದರಿಂದ ಸುದರ್ಶನ್ ಅವರು ಖರ್ಗೆ ಪರ ಕ್ಯಾಂಪೇನ್ ಮಾಡಲು ತಮ್ಮ ಮುಖ್ಯ ವಕ್ತಾರ ಸ್ಥಾನಕ್ಕೆ ರಿಸೈನ್ ಮಾಡಿದ್ದಾರೆ ಅಷ್ಟೇ. ಇನ್ನು ಡಿಕೆ ಶಿವಕುಮಾರ್ ಅವರಿಗೆ ರವಾನಿಸುವ ರಾಜೀನಾಮೆ ಪತ್ರದಲ್ಲಿ ಸುದರ್ಶನ ಏನೆಲ್ಲಾ ಉಲ್ಲೇಖಿಸಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

ಸುದರ್ಶನ ರಾಜೀನಾಮೆ ಪತ್ರ ಇಂತಿದೆ ಅಖಿಲ ಭಾರತ ಕಾಂಗ್ರೆಸ್ ನ ಪರಂಪರೆ, ಪ್ರಯತ್ನ, ಸಾಧನೆಗಳ ಈ ಹಿನ್ನೆಲೆಯಲ್ಲಿ ಸುಮಾರು 24 ವರ್ಷಗಳ ನಂತರ ಆಂತರಿಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಸಲುವಾಗಿ ಎಐಸಿಸಿ ಅಧ್ಯಕ್ಷ ಪದವಿಗೆ ಚುನಾವಣೆ ನಡೆಸುತ್ತಿರುವುದು ಸ್ವಾಗತರ್ಹ. ಈ ಸಂದರ್ಭದಲ್ಲಿ ಭವಿಷ್ಯದಲ್ಲಿ ಭರವಸೆ ಮೂಡಿಸಿರುವ ಶ್ರೀ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರಗೆ ಪಾದಯಾತ್ರೆ ಮಾಡುತ್ತಿರುವುದು ಉತ್ತಮ ಪ್ರಯತ್ನ ಹಾಗೂ ಬೆಳವಣಿಗೆ.

ಎಐಸಿಸಿ ಅಧ್ಯಕ್ಷ ಪದವಿಗೆ ಸ್ಪರ್ಧಿಸಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆ ಹಿರಿಯ ಅನುಭವಿ ನಾಯಕ ಅವರಿಗೆ ಅಭಿನಂಧನೆಗಳು ಹಾಗೂ ಶುಭಾಶಯಗಳು. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ, ಕರ್ನಾಟಕ ವಿಧಾನಸಭಾ ವಿರೋಧ ಪಕ್ಷದ ನಾಯಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ , CWC ಸದಸ್ಯರಾಗಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಸಚಿವರಾಗಿ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಪರಿಣಾಮಕಾರಿಯಾಗಿ ಮತ್ತು ಜವಾಬ್ದಾರಿಯಾಗಿ ಕರ್ತವ್ಯ ನಿರ್ವಹಿಸಿ, ಅಪಾರ ಅನುಭವ ಹೊಂದಿದ್ದಾರೆ.

ಈ ಅನುಭವ ಮತ್ತು ಹಿರಿತನ ಪಕ್ಷಕ್ಕೆ ಭವಿಷ್ಯದಲ್ಲಿ ಸಂಘಟನೆಗೆ ಪ್ರಯೋಜನೆಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ದೇಶದ ಎಲ್ಲಾ ಕಾಂಗ್ರೆಸ್ ಸದಸ್ಯರು ಅವರ ಅಭ್ಯರ್ಥಿ ಆಯ್ಕೆ ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ.

ಹಾಗೇಯೆ ಎಐಸಿಸಿ ಕೇಂದ್ರ ಚುನಾವಣಾ ಮಂಡಳಿ ಅಧ್ಯಕ್ಷರಾದ ಶ್ರೀ ಮಧುಸೂದನ್ ಮಿಸ್ತ್ರಿ ಅವರು ಚುನಾವಣಾ ಹಿನ್ನೆಲೆಯಲ್ಲಿ ಉತ್ತಮ ನಿಯಮಗಳನ್ಯಮಗಳನ್ನು ಪಾಲನೆ ಮಾಡಲು ತಿಳಿಸಿರುತ್ತಾರೆ. ಅದು ಕೂಡ ಸ್ವಾಗರ್ತಾ ಮತ್ತು ಅವರಿಗೆ ಅಭಿನಂದನೆಗಳು. ಶ್ರೀ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸುವ ಮತ್ತು ಪ್ರಚಾರ ಮಾಡುವ ಹಿನ್ನೆಲೆಯಲ್ಲಿ ನಾನು ಕೆಪಿಸಿಸಿ ಮುಖ್ಯ ವಕ್ತಾರರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಈಗಾಗಲೇ ನಾಮಪ ಪತ್ರ ಸಲ್ಲಿಸಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು ಅ.8ರವರೆಗೆ ಅವಕಾಶ ಇರುತ್ತದೆ. ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಅಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುತ್ತೆ. ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದರೆ ಅ.17ರಂದು ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:17 pm, Tue, 4 October 22