AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ, ತಮ್ಮದೇ ಸಚಿವರ ವಿರುದ್ದ ಸಿಎಂಗೆ ದೂರು ನೀಡಿದ ಶಾಸಕರು

ಸಚಿವರ ಬಗ್ಗೆ ಕಾಂಗ್ರೆಸ್ ಶಾಸಕರಿಂದಲೇ ದೊಡ್ಡ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಬಹುದೊಡ್ಡ ಗೊಂದಲ ಒಳಗಿಂದೊಳಗೆ ಶುರುವಾಗಿದೆ. ಇದೀಗ ಸಚಿವರು-ಶಾಸಕರ ನಡುವಿನ ಜಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗಳ ತಲುಪಿದೆ.

ಕಾಂಗ್ರೆಸ್​ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ, ತಮ್ಮದೇ ಸಚಿವರ ವಿರುದ್ದ ಸಿಎಂಗೆ ದೂರು ನೀಡಿದ ಶಾಸಕರು
ಫೈಲ್​ ಫೋಟೋ
ಪ್ರಸನ್ನ ಗಾಂವ್ಕರ್​
| Edited By: |

Updated on:Jul 25, 2023 | 8:36 AM

Share

ಬೆಂಗಳೂರು, (ಜುಲೈ 25): ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್​ (Congress)135 ಸ್ಥಾನಗಗೊಂದಿಗೆ ಅಭೂತಪೂರ್ವವಾಗಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಅಲ್ಲದೇ ಚನಾವಣೆ ಸಂದರ್ಭದಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಗಳನ್ನ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ, ಇದರ ಮಧ್ಯೆ ಕಾಂಗ್ರೆಸ್ ಸರ್ಕಾರದಲ್ಲಿ(congress government)  ಅಸಮಾಧಾನ ಭುಗಿಲೆದ್ದಿದೆ. ಹೌದು..ಸಚಿವರ ಹಾಗೂ ತಮ್ಮದೇ ಪಕ್ಷದ ಕಾಂಗ್ರೆಸ್​ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಸಚಿವರ ದುರಹಂಕಾರಕ್ಕೆ ಬುದ್ಧಿ ಹೇಳಿ ಎಂದು ಸಿಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕರು ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಶಾಸಕಾಂಗ ಸಭೆ ಕರೆಯಲೇಬೇಕು ಎಂದು ಕಾಂಗ್ರೆಸ್ ಹಿರಿಯ ಶಾಸಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಕಾರ್ಯತಂತ್ರ, ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

ಕಳೆದ ಶಾಸಕಾಂಗ ಸಭೆಯಲ್ಲೇ ಅಸಮಾಧಾನ ಸ್ಫೋಟಗೊಂಡಿತ್ತು. ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಶಾಸಕಾಂಗ ಸಭೆಯಲ್ಲೇ ಬೇಸರ ಹೊರಹಾಕಿದ್ದ ಶಾಸಕರು, ಇದೀಗ ಸಚಿವರ ವರ್ತನೆ ಬದಲಾಗದ ಹಿನ್ನೆಲೆಯಲ್ಲಿ ನೇರವಾಗಿ ಸಿಎಂಗೆ ದೂರು ನೀಡಿದ್ದಾರೆ. ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಪತ್ರ ಬರೆದು ಶಾಸಕಾಂಗ ಸಭೆಗೆ ಆಗ್ರಹಿಸಲಾಗಿದೆ. 20ಕ್ಕೂ ಹೆಚ್ಚು ಹಿರಿಯ ಶಾಸಕರು ಪತ್ರಕ್ಕೆ ಸಹಿ ಹಾಕಿ ಸಿಎಂಗೆ ರವಾನಿಸಿದ್ದು, ಸಚಿವರು ದುರಹಂಕಾರ ತೋರಿಸುತ್ತಿದ್ದಾರೆ. ತಮ್ಮ ಕೆಲಸ ಮಾಡಿಕೊಡುತ್ತಿಲ್ಲ ಎಂದು ಪತ್ರದಲ್ಲಿ ದೂರಿದ್ದಾರೆ.

ಶಾಸಕರ ಪತ್ರ ನೋಡಿ ಗಡಬಡಿಸಿ ಎದ್ದಿರುವ ಸಿಎಂ ಸಿದ್ದರಾಮಯ್ಯ ಶಾಸಕರ ಅಹವಾಲು ಆಲಿಸಲೆಂದೇ ಇದೇ ಜುಲೈ 27ರಂದು ಕಾಂಗ್ರೆಸ್​ ಶಾಸಕಾಂಗ ಸಭೆ ಕರೆದಿದ್ದಾರೆ. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸಿಎಲ್‌ಪಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸಚಿವರ ವಿರುದ್ದ ಕೇವಲ ಶಾಸಕರ ಮಾತ್ರವೇ ಅಲ್ಲ ಎಂಎಲ್‌ಸಿಗಳು ಅಸಮಾಧನಗೊಂಡಿದ್ದು, ಇದರಿಂದ ಶಾಸಕರ ಜೊತೆ ವಿಧಾನ ಪರಿಷತ್ ಸದಸ್ಯರು ಜೋಡಿಸಿದ್ದಾರೆ. ಸಚಿವರು ಶಾಸಕರಿಗೆ ಮತ್ತು ವಿಧಾನಪರಿಷತ್ ಸದಸ್ಯರಿಗೆ ಸಹಕಾರ ಕೊಡುತ್ತಿಲ್ಲ. ಅಭಿವೃದ್ದಿ ಕೆಲಸಗಳಿಗೆ ಅನುದಾನ ಇಲ್ಲ ಎಂದು ಹೇಳುತ್ತಿದ್ದಾರೆ. ಅಲ್ಲದೇ ನಮ್ಮ ಕ್ಷೇತ್ರದಲ್ಲಿ ಬಿಜೆಪಿಗೆ ಅನುಕೂಲವಾಗುವ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಪಕ್ಷ ಅಧಿಕಾರ ಬರುವಾಗ ಇವರು ಯಾರು ಇರಲಿಲ್ಲ ಎಂದು ಆರೋಪಿಸಿದ್ದಾರೆ.

ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಪತ್ರ ಬರೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದು, ಇಂಡಿಯಾ ಮೀಟಿಂಗ್ ದಿನವೇ ಗುರವಾರ ಶಾಸಕಾಂಗ ಸಭೆ ನಡೆಯಲಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:28 am, Tue, 25 July 23

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ