ಬೆಂಗಳೂರು, (ಜುಲೈ 25): ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಕಾಂಗ್ರೆಸ್ (Congress)135 ಸ್ಥಾನಗಗೊಂದಿಗೆ ಅಭೂತಪೂರ್ವವಾಗಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದೆ. ಅಲ್ಲದೇ ಚನಾವಣೆ ಸಂದರ್ಭದಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಗಳನ್ನ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ, ಇದರ ಮಧ್ಯೆ ಕಾಂಗ್ರೆಸ್ ಸರ್ಕಾರದಲ್ಲಿ(congress government) ಅಸಮಾಧಾನ ಭುಗಿಲೆದ್ದಿದೆ. ಹೌದು..ಸಚಿವರ ಹಾಗೂ ತಮ್ಮದೇ ಪಕ್ಷದ ಕಾಂಗ್ರೆಸ್ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಸಚಿವರ ದುರಹಂಕಾರಕ್ಕೆ ಬುದ್ಧಿ ಹೇಳಿ ಎಂದು ಸಿಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕರು ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಶಾಸಕಾಂಗ ಸಭೆ ಕರೆಯಲೇಬೇಕು ಎಂದು ಕಾಂಗ್ರೆಸ್ ಹಿರಿಯ ಶಾಸಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಕಾರ್ಯತಂತ್ರ, ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಕಳೆದ ಶಾಸಕಾಂಗ ಸಭೆಯಲ್ಲೇ ಅಸಮಾಧಾನ ಸ್ಫೋಟಗೊಂಡಿತ್ತು. ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಶಾಸಕಾಂಗ ಸಭೆಯಲ್ಲೇ ಬೇಸರ ಹೊರಹಾಕಿದ್ದ ಶಾಸಕರು, ಇದೀಗ ಸಚಿವರ ವರ್ತನೆ ಬದಲಾಗದ ಹಿನ್ನೆಲೆಯಲ್ಲಿ ನೇರವಾಗಿ ಸಿಎಂಗೆ ದೂರು ನೀಡಿದ್ದಾರೆ. ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಪತ್ರ ಬರೆದು ಶಾಸಕಾಂಗ ಸಭೆಗೆ ಆಗ್ರಹಿಸಲಾಗಿದೆ. 20ಕ್ಕೂ ಹೆಚ್ಚು ಹಿರಿಯ ಶಾಸಕರು ಪತ್ರಕ್ಕೆ ಸಹಿ ಹಾಕಿ ಸಿಎಂಗೆ ರವಾನಿಸಿದ್ದು, ಸಚಿವರು ದುರಹಂಕಾರ ತೋರಿಸುತ್ತಿದ್ದಾರೆ. ತಮ್ಮ ಕೆಲಸ ಮಾಡಿಕೊಡುತ್ತಿಲ್ಲ ಎಂದು ಪತ್ರದಲ್ಲಿ ದೂರಿದ್ದಾರೆ.
ಶಾಸಕರ ಪತ್ರ ನೋಡಿ ಗಡಬಡಿಸಿ ಎದ್ದಿರುವ ಸಿಎಂ ಸಿದ್ದರಾಮಯ್ಯ ಶಾಸಕರ ಅಹವಾಲು ಆಲಿಸಲೆಂದೇ ಇದೇ ಜುಲೈ 27ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿದ್ದಾರೆ. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸಿಎಲ್‌ಪಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಚಿವರ ವಿರುದ್ದ ಕೇವಲ ಶಾಸಕರ ಮಾತ್ರವೇ ಅಲ್ಲ ಎಂಎಲ್‌ಸಿಗಳು ಅಸಮಾಧನಗೊಂಡಿದ್ದು, ಇದರಿಂದ ಶಾಸಕರ ಜೊತೆ ವಿಧಾನ ಪರಿಷತ್ ಸದಸ್ಯರು ಜೋಡಿಸಿದ್ದಾರೆ. ಸಚಿವರು ಶಾಸಕರಿಗೆ ಮತ್ತು ವಿಧಾನಪರಿಷತ್ ಸದಸ್ಯರಿಗೆ ಸಹಕಾರ ಕೊಡುತ್ತಿಲ್ಲ. ಅಭಿವೃದ್ದಿ ಕೆಲಸಗಳಿಗೆ ಅನುದಾನ ಇಲ್ಲ ಎಂದು ಹೇಳುತ್ತಿದ್ದಾರೆ. ಅಲ್ಲದೇ ನಮ್ಮ ಕ್ಷೇತ್ರದಲ್ಲಿ ಬಿಜೆಪಿಗೆ ಅನುಕೂಲವಾಗುವ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಪಕ್ಷ ಅಧಿಕಾರ ಬರುವಾಗ ಇವರು ಯಾರು ಇರಲಿಲ್ಲ ಎಂದು ಆರೋಪಿಸಿದ್ದಾರೆ.
ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಪತ್ರ ಬರೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದು, ಇಂಡಿಯಾ ಮೀಟಿಂಗ್ ದಿನವೇ ಗುರವಾರ ಶಾಸಕಾಂಗ ಸಭೆ ನಡೆಯಲಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 8:28 am, Tue, 25 July 23