AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟ್ಟದಾಟ: ತೀವ್ರ ಕುತೂಹಲ ಮೂಡಿಸಿದ ‘ಹೈ’ ಮೀಟಿಂಗ್; ಬ್ರೇಕ್​ಫಾಸ್ಟ್ ಸಭೆ ಬಗ್ಗೆ ಜೋಶಿ ವ್ಯಂಗ್ಯ

ಹೈಕಮಾಂಡ್ ಮಧ್ಯಪ್ರವೇಶ ಬೆನ್ನಲ್ಲೇ ಸದ್ಯ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಜಟಾಪಟಿಗೆ ತಾತ್ಕಾಲಿಕ ಬ್ರೇಕ್​ ಬಿದ್ದಿದೆ. ಇಂದು ಸಂಜೆ ದೆಹಲಿಯಲ್ಲಿ ಹೈಕಮಾಂಡ್​ ಮಹತ್ವದ ಸಭೆ ನಡೆಯಲಿದೆ. ಶೀಘ್ರದಲ್ಲೇ ಸಿಎಂ, ಡಿಸಿಎಂಗೆ ಬುಲಾವ್ ಸಾಧ್ಯತೆ ಇದೆ.

ಪಟ್ಟದಾಟ: ತೀವ್ರ ಕುತೂಹಲ ಮೂಡಿಸಿದ ‘ಹೈ’ ಮೀಟಿಂಗ್; ಬ್ರೇಕ್​ಫಾಸ್ಟ್ ಸಭೆ ಬಗ್ಗೆ ಜೋಶಿ ವ್ಯಂಗ್ಯ
37
ಗಂಗಾಧರ​ ಬ. ಸಾಬೋಜಿ
|

Updated on: Nov 30, 2025 | 1:39 PM

Share

ಬೆಂಗಳೂರು, ನವೆಂಬರ್​ 30: ರಾಜ್ಯ ಕಾಂಗ್ರೆಸ್ (Congress) ಪಾಳೆಯದಲ್ಲಿ​​ ಪಟ್ಟದಾಟಕ್ಕೆ ಸದ್ಯಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಧಿವೇಶನ ಮುಗಿದ ಬಳಿಕ ಮತ್ತೆ ಕುರ್ಚಿ ಕಿಚ್ಚು ಭುಗಿಲೇಳುವ ಸಾಧ್ಯತೆ ಇದೆ. ಅಷ್ಟರಲ್ಲಿ ಕಿತ್ತಾಟಕ್ಕೆ ಮದ್ದರೆಯಲು ಹೈಕಮಾಂಡ್ ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಹೈಕಮಾಂಡ್ ಪಾರಾಗಿದ್ದು, ಇದೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನ ದೆಹಲಿಗೆ ಕರೆಸಿ ಮಾತಾಡುವ ಸಾಧ್ಯತೆ ಇದೆ. ಇದೆಲ್ಲವೂ ಇಂದು ನಡೆಯುವ ಹೈಕಮಾಂಡ್ ನಾಯಕರ ಸಭೆ ಬಳಿಕ ನಿರ್ಧಾರವಾಗಲಿದೆ.

ತೀವ್ರ ಕುತೂಹಲ ಮೂಡಿಸಿದ ‘ಹೈ’ ಮೀಟಿಂಗ್

ಇಂದು ಸಂಜೆ 5 ಗಂಟೆಗೆ ಸೋನಿಯಾ ಗಾಂಧಿ ನಿವಾಸದಲ್ಲಿ ಕಾಂಗ್ರೆಸ್ ಸಂಸದೀಯ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಸುರ್ಜೇವಾಲ ಭಾಗಿಯಾಗಲಿದ್ದಾರೆ. ರಾಜ್ಯದ ವಿದ್ಯಮಾನಗಳ ಬಗ್ಗೆ ನಾಯಕರ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: ಬ್ರೇಕ್​ಫಾಸ್ಟ್ ಸಭೆ ಬೆನ್ನಲ್ಲೇ ದೆಹಲಿಯಲ್ಲಿ ಗರಿಗೆದರಿದ ರಾಜಕಾರಣ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮಹತ್ವದ ಸಭೆ

ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಸ್ಥಿತಿಗತಿಗಳ ಬಗ್ಗೆ ವರದಿ ತರಿಸಿಕೊಂಡಿರುವ ಹೈಕಮಾಂಡ್, ಜಾತಿವಾರು ಸಮೀಕರಣ ಸೇರಿ ಹಲವು ಮಾಹಿತಿಯನ್ನ ಸಂಗ್ರಹಿಸಿದೆ. ಸ್ವಲ್ಪ ಯಾಮಾರಿದರೂ ಕಾಂಗ್ರೆಸ್‌ಗೆ ಹೊಡೆತ ಬೀಳುತ್ತೆ ಅಂತಾ ಲೆಕ್ಕಾಚಾರ ಹಾಕಿರುವ ಕಾಂಗ್ರೆಸ್, ತಮಿಳುನಾಡು, ಕೇರಳ ರಾಜ್ಯಕ್ಕೂ ಎಫೆಕ್ಟ್ ಆಗುತ್ತೆ ಅಂತಾ ಬದಲಾವಣೆ ಮಾಡುವುದಕ್ಕೆ ಹಿಂದೇಟು ಹಾಕ್ತಿದೆ ಎನ್ನಲಾಗ್ತಿದೆ. ಹೀಗಾಗಿ ನಾಯಕತ್ವ ಬದಲಾವಣೆ ಮಾಡಬೇಕಾ? ಕೆಪಿಸಿಸಿ ಮತ್ತು ಸಂಪುಟಕ್ಕೆ ಸರ್ಜರಿಯಷ್ಟೇ ಮಾಡಬೇಕಾ? ಅಂತಾ ಸದ್ಯದ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ನಾಯಕರು ಇಂದು ಚರ್ಚೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಹೈಕಮಾಂಡ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.

ನಾನು ಬೆನ್ನಿಗೆ ಚೂರಿ ಹಾಕುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಇನ್ನು ಈ ವೇಳೆ ದೆಹಲಿಗೆ ಹೋಗುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ನಾನು ಯಾವತ್ತೂ ಗುಂಪುಗಾರಿಕೆ ಮಾಡಲ್ಲ ಅಂತಾ ಮತ್ತೊಮ್ಮೆ ಪುನರುಚ್ಛರಿಸಿದರು. ಏಳೆಂಟು ಶಾಸಕರನ್ನ ದೆಹಲಿಗೆ ಕರೆದುಕೊಂಡು ಹೋಗುವುದು ದೊಡ್ಡ ಕೆಲಸವಲ್ಲ. ಆದರೆ ಅದು ಪ್ರಯೋಜನ ಇಲ್ಲ. ನಾನು ಪಾರ್ಟಿ ಪ್ರೆಸಿಡೆಂಟ್ 140 ಶಾಸಕರನ್ನ ಕರೆದುಕೊಂಡು ಒಟ್ಟಿಗೆ ಕರೆದುಕೊಂಡು ಹೋಗ್ತೀನಿ ಎಂದಿದ್ದಾರೆ. ಹಾಗೆಯೇ ನನ್ನ ಹಾಗೂ ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಂತಾ ಮತ್ತೊಮ್ಮೆ ಹೇಳಿದ್ದಾರೆ.

ಹೈಕಮಾಂಡ್ ಅಂತಾ ಹೇಳೋಕೆ ಅರ್ಧ ಇಡ್ಲಿ ತಿನ್ನಬೇಕಿತ್ತಾ? ಕೇದ್ರ ಸಚಿವ ಪಲ್ಹಾದ್​​​ ಜೋಶಿ ಲೇವಡಿ

ಬ್ರೇಕಾ ಫಾಸ್ಟ್ ಮೀಟಿಂಗ್‌ ಬಗ್ಗೆ ಲೇವಡಿ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಒಗ್ಗಟ್ಟು ಏನು ಇಲ್ಲ. ಬಾವಿಗೆ ತಳ್ಳಲು ಒಬ್ಬರಿಗೊಬ್ಬರು ನೋಡುತ್ತಿದ್ದಾರೆ. ಹೈಕಮಾಂಡ್ ಎನ್ನಲು ಅರ್ಧ ಇಡ್ಲಿ ತಿನ್ನಬೇಕಿತ್ತಾ ಅಂತಾ ಕಾಲೆಳೆದಿದ್ದಾರೆ. ವಿರಾಮಬಿದ್ದಿಲ್ಲ, ಮುಸುಕಿನ ಗುದ್ದಾಟ ನಡೆದಿದೆ. ಸಿಎಂ ಹಾಗೂ ಡಿಸಿಎಂ ಒಬ್ಬರಿಗೊಬ್ಬರು ಷಡ್ಯಂತ್ರ ಮಾಡುತ್ತಿದ್ದಾರೆ. ಹೈಕಮಾಂಡ್ ಯಾರು ಅನ್ನೋದು ಖರ್ಗೆ ಅವರಿಗೆ ಗೊತ್ತಿದೆ ಎಂದು ಕಿಡಿಕಾರಿದ್ದಾರೆ.

ವರದಿ: ಬ್ಯುರೋ ರಿಪೋರ್ಟ್ ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ