ಮಂಡ್ಯದಲ್ಲಿ ರೌಡಿ ಶೀಟರ್​ ಎದುರು ಕೈ ಮುಗಿದು ನಿಂತ ಮೋದಿ: ಫೋಟೋ ವೈರಲ್, ಕಾಂಗ್ರೆಸ್ ವಾಗ್ದಾಳಿ

ಫೈಟರ್ ರವಿ ಬಿಜೆಪಿಗೆ ಸೇರ್ಪಡೆಯಾದ ವೇಳೆ ದೊಡ್ಡಮಟ್ಟದ ಸುದ್ದಿಯಾಗಿತ್ತು. ಇದೀಗ ರೌಡಿ ಶೀಟರ್​ಗೆ ಮೋದಿ ನಮಸ್ಕರಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮಂಡ್ಯದಲ್ಲಿ ರೌಡಿ ಶೀಟರ್​ ಎದುರು ಕೈ ಮುಗಿದು ನಿಂತ ಮೋದಿ: ಫೋಟೋ ವೈರಲ್, ಕಾಂಗ್ರೆಸ್ ವಾಗ್ದಾಳಿ
ರೌಡಿ ಶೀಟರ್ ಫೈಟರ್ ರವಿ, ಮೋದಿ
Follow us
ರಮೇಶ್ ಬಿ. ಜವಳಗೇರಾ
|

Updated on: Mar 13, 2023 | 9:00 AM

ಬೆಂಗಳೂರು/ಮಂಡ್ಯ: ನಿನ್ನೆ ಅಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯಗೆ ಭೇಟಿ ನೀಡಿ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಉದ್ಘಾಟಿಸಿ ಹೋಗಿದ್ದಾರೆ. ಆದ್ರೆ, ಮೋದಿ ಓರ್ವ ರೌಡಿ ಶೀಟರ್​ಗೆ ಕೈಮುಗಿದಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು..ಮೋದಿ ಮಂಡ್ಯ ಹೆಲಿಪ್ಯಾಡ್‍ಗೆ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಸ್ವಾಗತಕೋರಿದ್ದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ರೌಡಿ ಶೀಟರ್  ಫೈಟರ್ ರವಿ (Fighter Ravi) ಸಹ ಕಾಣಿಸಿಕೊಂಡಿದ್ದು, ಮೋದಿಗೆ ಕೈ ಮುಗಿದು ಸ್ವಾಗತಕೋರಿದ್ದಾರೆ. ಇದಕ್ಕೆ ಮೋದಿ ಸಹ ಫೈಟರ್ ರವಿ ಎದುರು ಕೈ ಮುಗಿದು ನಿಂತಿದ್ದು, ಈ ಫೋಟೋ ಭಾರೀ ವೈರಲ್ ಆಗುತ್ತಿದೆ. ಇನ್ನು ಇದೇ ವಿಚಾರವನ್ನಿಟ್ಟುಕೊಂಡು ಕಾಂಗ್ರೆಸ್, ಬಿಜೆಪಿ ಹಾಗೂ ಮೋದಿ ವಿರುದ್ಧ ಕಿಡಿಕಾರಿದೆ.

ಇದನ್ನೂ ಓದಿ: ಮುಂದುವರೆದ ರೌಡಿಶೀಟರ್ ಜತೆಗಿನ ಬಿಜೆಪಿ ನಂಟು: ​ಪುರಸಭೆ ಸದಸ್ಯನಾಗಿ ರೌಡಿಯನ್ನು ನಾಮನಿರ್ದೇನ ಮಾಡಿದ ಸರ್ಕಾರ

ಫೈಟರ್​ ರವಿ ಹಾಗೂ ನರೇಂದ್ರ ಮೋದಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಪ್ರಧಾನಿ ಹುದ್ದೆಗೆ ಕಳಂಕ ತಂದಿದ್ದಾರೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದೆ.

ಮೋದಿ ಅವರು ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣದಿಂದ ಮಂಡ್ಯ ಪಿಇಎಸ್ ಹೆಲಿಪ್ಯಾಡ್‍ಗೆ ಹೆಲಿಕಾಪ್ಟರ್​ಲ್ಲಿ ಬಂದಿಳಿದ ವೇಳೆ ಬಿಜೆಪಿ ಮುಖಂಡರು ಮೋದಿ ಅವರಿಗೆ ಗಾರ್ಲೆಂಡ್ ಮಾಡಿ ಸ್ವಾಗತಕೋರಿದರು. ಈ ವೇಳೆ ಬಿಜೆಪಿ ಮುಖಂಡರ ಜೊತೆ ಫೈಟರ್ ರವಿ ಸಹ ಮೋದಿ ಅವರಿಗೆ ಸ್ವಾಗತಕೋರಿದ್ದಾರೆ. ಈ ಹಿಂದೆ ಫೈಟರ್ ರವಿ ಬಿಜೆಪಿಗೆ ಸೇರ್ಪಡೆಯಾದ ವೇಳೆ ದೊಡ್ಡಮಟ್ಟದ ಸುದ್ದಿಯಾಗಿತ್ತು. ಅಲ್ಲದೇ ಕಾಂಗ್ರೆಸ್ ಬಿಜೆಪಿ ರೌಡಿಶೀಟರ್​ಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ರಾಜ್ಯದಲ್ಲಿ ರೌಡಿ ರಾಜಕೀಯ ಮಾಡಲು ಮುಂದಾಗಿದೆ ಎಂದು ವಾಗ್ದಾಳಿ ಮಾಡಿತ್ತು.

ಇದನ್ನೂ ಓದಿ: ಜಮೀರ್ ಹಣಿಯಲು ‘ಸೈಲೆಂಟ್’ ಅಸ್ತ್ರ: ಸೈಲೆಂಟ್ ಸುನೀಲ್ ಮೂಲಕ ಸೋಲಿಸಲು ರಣತಂತ್ರ…!

ಅಪರಾಧ ಹಿನ್ನೆಲೆಯುಳ್ಳ ಫೈಟರ್ ರವಿ ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಅಲ್ಲದೇ ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕ್ರಿಕೆಟ್ ಬುಕ್ಕಿಂಗ್‌ನಲ್ಲಿ ಕುಖ್ಯಾತಿ ಪಡೆದಿದ್ದಾನೆ. 2010 ರಿಂದಲೂ ಕ್ರಿಕೆಟ್ ಬುಕ್ಕಿಯಾಗಿದ್ದ ರವಿ, ಹಲವು ಬಾರಿ ಕ್ರಿಕೆಟ್ ಬುಕ್ಕಿ ಕೇಸಲ್ಲಿ ಅರೆಸ್ಟ್ ಆಗಿ, ಜಾಮೀನು ತಗೊಂಡು ಹೊರಗಡೆ ಬಂದಿದ್ದ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ