ಪದಗ್ರಹಣಕ್ಕೆ ಬಿಜೆಪಿಯ ನಾಯಕರು ಗೈರು: ವಿಜಯೇಂದ್ರ ಕೇವಲ ಬಿಎಸ್​ವೈ ಬಣಕ್ಕೆ ಮಾತ್ರ ಅಧ್ಯಕ್ಷರೇ?; ಕಾಂಗ್ರೆಸ್​

ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ನೇಮಕವಾಗಿದ್ದಾರೆ. ಇಂದು ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಪಕ್ಷದ ಹಲವು ಬಿಜೆಪಿ ನಾಯಕರು ಗೈರಾಗಿದ್ದರು. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ಟ್ವೀಟ್​ ಮಾಡಿ ಕಾಲೆಳೆದಿದೆ.

ಪದಗ್ರಹಣಕ್ಕೆ ಬಿಜೆಪಿಯ ನಾಯಕರು ಗೈರು: ವಿಜಯೇಂದ್ರ ಕೇವಲ ಬಿಎಸ್​ವೈ ಬಣಕ್ಕೆ ಮಾತ್ರ ಅಧ್ಯಕ್ಷರೇ?; ಕಾಂಗ್ರೆಸ್​
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Nov 15, 2023 | 3:14 PM

ಬೆಂಗಳೂರು ನ.15: ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ (BY Vijayendra) ನೇಮಕವಾಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು (ನ.15) ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಮಕ್ಕೆ ಬಿಜೆಪಿ ಹಲವು ಹಿರಿಯ ನಾಯಕರು ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್​ ಬಣದ ಹಲವು ನಾಯಕರು ಗೈರಾಗಿದ್ದರು. ಇದು ಅಸಹಜವಾಗಿಯೇ ವಿಜಯೇಂದ್ರ ನೇಮಕದಿಂದ ಹಲವು ಹಿರಿಯ ತಲೆಗಳು ಅಸಮಾಧಾನಗೊಂಡಿದ್ದಾರೆ ಎಂಬುವುದು ಮೇಲ್ನೋಟಕ್ಕೆ ಕಂಡುಬಂತು. ಬಿಜೆಪಿಯಲ್ಲಿನ ಅಸಮಾಧಾನ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್​ ಮಾಡಿ “ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ” ಎಂದು ಕಾಲೆಳೆದಿದೆ.

“ಅದೇ ಸಂತೋಷ ಕೂಟದ ಭಾಗವಾಗಿರುವ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ, ಪದಗ್ರಹಣವೂ ಆಗಿದೆ, ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ! ಬಿಜೆಪಿ ಪಕ್ಷ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ವಿಜಯೇಂದ್ರ ಕೇವಲ BSY ಬಣಕ್ಕೆ ಮಾತ್ರ ಅಧ್ಯಕ್ಷರೇ?” ಎಂದು ಟ್ವೀಟ್​ ಮೂಲಕ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪರಿಚಯ, ನಡೆದು ಬಂದ ರಾಜಕೀಯ ಹಾದಿ ಹೀಗಿದೆ

ಸಿ.ಟಿ.ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ.ಸುಧಾಕರ್​, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕರು ವಿಜಯೇಂದ್ರ ಕಾರ್ಯಕ್ರಮದಿಂದ ದೂರು ಉಳಿದಿದ್ದರು. ಇದರೊಂದಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಆರಂಭದಲ್ಲೇ ಬಂಡಾಯದ ಬಿಸಿ ತಟ್ಟಿದೆ.

ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್​.ಯಡಿಯೂರಪ್ಪ, ಡಿವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ