ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ QR ಕೋಡ್ ಜಟಾಪಟಿ ಶುರುವಾಗಿದೆ. 40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು. ಇದೀಗ SayCm ಎಂಬ ಹೊಸ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವಿರುದ್ಧ ಮತ್ತೊಂದು ಸುತ್ತಿನ ಅಭಿಯಾನ ಶುರು ಮಾಡಿದೆ.
ಚುನಾವಣೆಗೂ ಮೊದಲು ನೀಡಿದ ಭರವಸೆಗಳನ್ನು ಮರೆತು ವಚನ ಭ್ರಷ್ಟರಾದ ಬಿಜೆಪಿ, ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ. ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತಾಡಲು ಕೂಡ 40% ಕಮಿಷನ್ ನೀಡಬೇಕೇ ಬಸವರಾಜ ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಿದೆ.
Fact Check ಬಳ್ಳಾರಿ ಕಾಂಗ್ರೆಸ್ ಸಮಾವೇಶದಲ್ಲಿ ಇಷ್ಟೊಂದು ಜನ ಸೇರಿದ್ರಾ? ಫೋಟೋದ ಸತ್ಯಾಸತ್ಯತೆ ಇಲ್ಲಿದೆ ನೋಡಿ
90 ಪರ್ಸೆಂಟ್ ಅನ್ಡೆಲಿವರ್ಡ್ ಎಂದು ಪ್ರಶ್ನೆಎತ್ತಿದ ಕಾಂಗ್ರೆಸ್, ಹಗರಣಗಳ ತಲೆಗಳು, ಅಹಂಕಾರದ ಮುಖಗಳು. ಪ್ರಶ್ನೆಗಳಿಗೆ ಉತ್ತರಿಸದ ಹೇಡಿಗಳು ಎಂದು ಕಿಡಿಕಾರಿದ್ದು, ಒಂದು ಉತ್ತರಕ್ಕೆ ಇನ್ನೆಷ್ಟು ಪ್ರಶ್ನೆಗಳು ಬೇಕು? ಕೇವಲ 50 ಪ್ರಶ್ನೆಗಳಿಗೆ ಉತ್ತರಿಸಲಾಗದ ನಿಮಗೆ. 550 ಪ್ರಶ್ನೆಗಳಿಗೆ ಉತ್ತರಿಸುವ ತಾಕತ್ತಿದ್ಯಾ ಎಂದು ಅಭಿಯಾನ ‘ಪೇ ಸಿಎಂ’ ಅಭಿಯಾನದ ಬಳಿಕ ‘ಸೇ ಸಿಎಂ’ ಅಭಿಯಾನ ಶುರು ಮಾಡಿದೆ,
ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿದ್ದ 10% ಭರವಸೆ ಈಡೇರಿಸಿಲ್ಲ, ಬಿಜೆಪಿ (BJP) ಅವ್ರು ಪ್ರಣಾಳಿಕೆಯಲ್ಲಿ 600ಕ್ಕೂ ಹಚ್ಚು ಭರವಸೆ ನೀಡಿದ್ರು. ಆದ್ರೆ ಈಡೇರಿಸುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
#PayCM ಈಗ SayCM ಆಗಲಿ,
ರಾಜ್ಯದ ಜನತೆಗೆ ಉತ್ತರ ನೀಡಲಿ.ಚುನಾವಣೆಗೂ ಮೊದಲು ನೀಡಿದ ಭರವಸೆಗಳನ್ನು ಮರೆತು ವಚನಭ್ರಷ್ಟರಾದ @BJP4Karnataka ರಾಜ್ಯದ ಜನತೆಗೆ ಉತ್ತರ ನೀಡಬೇಕಿದೆ.
ತಮ್ಮದೇ ಪಕ್ಷದ ಪ್ರಣಾಳಿಕೆಯ ಭರವಸೆಗಳ ಬಗ್ಗೆ ಮಾತಾಡಲು ಕೂಡ 40% ಕಮಿಷನ್ ನೀಡಬೇಕೆ @BSBommai ಅವರೇ?#NimHatraIdyaUttara pic.twitter.com/0keKfjZcT2
— Karnataka Congress (@INCKarnataka) October 18, 2022
ಕಾಂಗ್ರೆಸ್ ಪಕ್ಷ ಅಭಿಯಾನದ ಮೂಲಕ ಇಂದು 50ನೇ ಪ್ರಶ್ನೆ ಕೇಳುತ್ತಿದ್ದು, ಇಲ್ಲಿಯವರೆಗೂ ಸರ್ಕಾರದಿಂದ ಯಾವುದೇ ಉತ್ತರ ಸಿಕ್ಕಿಲ್ಲ. ಪೇಸಿಎಂ ಅಭಿಯಾನದ ಜತೆಗೆ ನಾವು SayCM ಆಂದೋಲನವನ್ನು ನಡೆಸಬೇಕಿದೆ. ಸರ್ಕಾರ ಮೂಕ ಬಸವನ ರೀತಿ ಕೂತರೆ ಆಗುವುದಿಲ್ಲ. ನೀವು ಈ ಪ್ರಣಾಳಿಕೆ ಮೂಲಕ ಜನರಿಂದ ಮತ ಹಾಕಿಸಿಕೊಂಡಿದ್ದೀರಿ. ಹೀಗಾಗಿ ನೀವು ಜನರಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದರು.
ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದೆ. 40% accepted here ಎಂದು ಪೋಸ್ಟರ್‌ನಲ್ಲಿ ಒಕ್ಕಣೆ ಬರೆಯಲಾಗಿತ್ತು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಅಲ್ಲದೇ ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದರು.