AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಸ್ವರೂಪ ಪಡೆದುಕೊಂಡ ಅಕ್ಕಿ ರಾಜಕೀಯ: ರಾಜ್ಯಾದ್ಯಂತ ಇಂದು ಕಾಂಗ್ರೆಸ್‌, ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಮತ್ತೊಂದು ಪ್ರಮುಖ ಗ್ಯಾರಂಟಿಯಾಗಿರುವ ಅನ್ನಭಾಗ್ಯ(10 ಕೆ.ಜಿ ಅಕ್ಕಿ ಉಚಿತ) ಯೋಜನೆ ಸಂಬಂಧಿಸಿದಂತೆ ರಾಜಕೀಯ ಕಿತ್ತಾಟ ಶುರುವಾಗಿದ್ದು, ಇಂದು ಪರಸ್ಪರ ಪ್ರತಿಭಟನೆಗೆ ಮುಂದಾಗಿವೆ.

ತೀವ್ರ ಸ್ವರೂಪ ಪಡೆದುಕೊಂಡ ಅಕ್ಕಿ ರಾಜಕೀಯ: ರಾಜ್ಯಾದ್ಯಂತ ಇಂದು ಕಾಂಗ್ರೆಸ್‌, ಬಿಜೆಪಿ ಪ್ರತಿಭಟನೆ
ಬಿಜೆಪಿ, ಕಾಂಗ್ರೆಸ್​
ರಮೇಶ್ ಬಿ. ಜವಳಗೇರಾ
|

Updated on: Jun 20, 2023 | 6:55 AM

Share

ಬೆಂಗಳೂರು: ಸಿದ್ದರಾಮನವರ(Siddaramaiah) ನೇತೃತ್ವದ ಕಾಂಗ್ರೆಸ್​  (Congress) ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಕಕ್ಕೆ(anna bhagya scheme) ಕೇಂದ್ರ ಸರ್ಕಾರ ಅಕ್ಕಿ ನೀಡದೇ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು (ಜೂ.20) ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿ ಜನಜಾಗೃತಿ ಮೂಡಿಸಲು ಕಾಂಗ್ರೆಸ್‌ ಮುಂದಾಗಿದೆ. ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರೆಂಟಿ(Congress guarantee)ಗಳ ಪೈಕಿ ಬಿಪಿಎಲ್‌ ಕುಟುಂಬ(BPL Family)ದ ಪ್ರತಿ ವ್ಯಕ್ತಿಗೂ 10 ಕೆ.ಜಿ. ಅಕ್ಕಿ(Free rice scheme) ಉಚಿತವಾಗಿ ನೀಡುವ ‘ಅನ್ನಭಾಗ್ಯ’ಕ್ಕೆ ಕೇಂದ್ರ ಆಹಾರ ನಿಗಮವು ಮೊದಲು ಅಕ್ಕಿ ನೀಡುವುದಾಗಿ ಹೇಳಿತ್ತು. ಆದರೆ ರಾಜಕೀಯ ಒತ್ತಡದಿಂದಾಗಿ ಬಳಿಕ ಅಕ್ಕಿ ನೀಡುವುದಿಲ್ಲ ಎಂದು ಯೂಟರ್ನ್‌ ಹೊಡೆದಿದ್ದು ಇದರಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಲಿದೆ.

ಇದನ್ನೂ ಓದಿ: Anna Bhagya: ರಾಜ್ಯದಲ್ಲಿ ಅಕ್ಕಿ ಇದ್ದರೇ ಟೆಂಡರ್​ ಮೂಲಕ ಖರೀದಿ: ಸಿಎಂ ಸಿದ್ದರಾಮಯ್ಯ

ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಇದರಲ್ಲಿ ಜನಪ್ರತಿನಿಧಿಗಳು, ಸಾವಿರಾರು ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಜಿಲ್ಲಾ ಕೇಂದ್ರಗಳಲ್ಲೂ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಮಟ್ಟದ ಹೋರಾಟದ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರಿಗೆ ವಹಿಸಲಾಗಿದೆ.

ಕೇಂದ್ರ ಸರ್ಕಾರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಕಾಂಗ್ರೆಸ್ ಮುಂದಾಗಿದೆ. ಹಣ ನೀಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಅಕ್ಕಿ ನೀಡದೆ ದ್ವೇಷದ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಷಡ್ಯಂತ್ರವನ್ನು ನಾಡಿನ ಜನತೆಗೆ ತಿಳಿಸುವ ಅಗತ್ಯವಿದೆ. ತೆಲಂಗಾಣ, ಆಂಧ್ರಪ್ರದೇಶಗಳ ಜೊತೆ ಚರ್ಚಿಸಿದರೂ ಅಲ್ಲಿ ಅಗತ್ಯ ದಾಸ್ತಾನಿಲ್ಲ. ಛತ್ತೀಸ್‌ಗಢವು ಅಕ್ಕಿ ನೀಡಲು ಸಿದ್ಧವಿದ್ದು ಸಾಗಣೆ ವೆಚ್ಚ ಅಧಿಕ ಆಗುವುದರಿಂದ ಆರ್ಥಿಕವಾಗಿ ಹೊರೆಯಾಗುತ್ತದೆ. ಏನೇ ಆದರೂ ಉಚಿತವಾಗಿ ಅಕ್ಕಿ ನೀಡುವುದರಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್‌ ನಿರ್ಧರಿಸಿದ್ದು, ಈ ಮೂಲಕ ಮುಂದಿನ ಲೋಕಸಭಾ ಚುನಾವಣೆ ಇರುವುದರಿಂದ ಕೇಂದ್ರ ಸರ್ಕಾರದ ನಡೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವುದರೊಂದಿಗೆ ಬಿಜೆಪಿಗೆ ಇರಿಸುಮುರಿಸು ಉಂಟುಮಾಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.

ಕಾಂಗ್ರೆಸ್​ನ ಲೆಕ್ಕಾಚಾರಗಳು

  1. . ಕೇಂದ್ರ ಸರ್ಕಾರ ಬಡವರ ವಿರೋಧಿ ಎಂದು ಬಿಂಬಿಸುವುದು
  2.  ಆ ಮೂಲಕ ಬಿಜೆಪಿ ವರ್ಚಸ್ಸು ಕಳೆಗುಂದುವಂತೆ ಮಾಡುವುದು
  3.  ಗ್ಯಾರಂಟಿ ಸ್ಕೀಂ ಮುಂದಿನ ಲೋಕಸಭೆ ಚುನಾವಣೆ ತನಕ ಜೀವಂತ ಇಡುವುದು
  4.  ಗ್ಯಾರಂಟಿ ಸ್ಕೀಂಗೆ ಇರುವ ಅಡ್ಡಿ ಆತಂಕಗಳಿಗೆ ಬಿಜೆಪಿಯೇ ಹೊಣೆಗಾರಿಕೆ ಎಂದು ಬಿಂಬಿಸುವುದು
  5.  ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಕ್ತ ಸಹಕಾರ ನೀಡುತ್ತಿಲ್ಲ ಎಂದು ಜನರ ಮನಸ್ಸಿಗೆ ನಾಟುವಂತೆ ಪ್ರಯತ್ನಿಸುವುದು
  6.  ಬಡವರ ಅನ್ನದ ವಿಚಾರವನ್ನು ಬಿಜೆಪಿ ರಾಜಕೀಯ ದ್ವೇಷಕ್ಕೆ ಬಳಸುತ್ತಿದೆ ಎಂಬ ಸಂದೇಶ ರವಾನೆ

ಬಿಜೆಪಿಯಿಂದಲೂ ಪ್ರತಿಭಟನೆ

ಇತ್ತ ಜು.1ರಿಂದ ಅಕ್ಕಿ ನೀಡದಿದ್ದರೆ ಜನತೆ ಸುಮ್ಮನಿರುವುದಿಲ್ಲ ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ಗ್ಯಾರಂಟಿ ಯೋಜನೆಯಡಿ ಬಡವರಿಗೆ 10 ಕೆ.ಜಿ. ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್​ಗೆ ಪ್ರತಿಯಾಗಿ ಬಿಜೆಪಿ ಸಹ ಇಂದು(ಮಂಗಳವಾರ) ಪ್ರತಿಭಟನೆಗೆ ಮುಂದಾಗಿದೆ. ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಒಟ್ಟು ಮೂರು ಹಂತದಲ್ಲಿ ಹೋರಾಟ ಹಮ್ಮಿಕೊಂಡಿದೆ. ಈ ಪೈಕಿ ಮೊದಲ ಹಂತವಾಗಿ ಬಿಜೆಪಿ ವತಿಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಹತ್ತು ಸಂಘಟನಾತ್ಮಕ ವಿಭಾಗ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ.

ಒಟ್ಟಿನಲ್ಲಿ ಒಟ್ಟಿನಲ್ಲಿ ಅಕ್ಕಿ ರಾಜಕೀಯ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಂದೆ ಯಾವ ಹಂತಕ್ಕೆ ಹೋಗಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!