ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ

ಕಾಂಗ್ರೆಸ್​ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಕೂಗು ಕೇಳಿಬಂದಿವೆ

ಕರ್ನಾಟಕ ಮಹಿಳಾ ಕಾಂಗ್ರೆಸ್​ಗೆ ಭುಗಿಲೆದ್ದ ಅಸಮಾಧಾನ: ಪುಷ್ಪಾ ಅಮರನಾಥ್​ರನ್ನ ಕೆಳಗಿಳಿಸುವಂತೆ ಆಗ್ರಹ
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 27, 2022 | 3:05 PM

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಅಸಮಾಧಾನಗಳು ಸ್ಫೋಟಗಳ್ಳುತ್ತಲ್ಲೇ ಇವೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಬಸ್ ಯಾತ್ರೆ ಸಂಬಂಧ ಬಣ ರಾಜಕೀಯಕ್ಕೆ ಹೈಕಮಾಂಡ್ ಬ್ರೇಕ್​ ಹಾಕಿದ ಬೆನ್ನಲ್ಲೇ ಇದೀಗ ಮಹಿಳಾ ಕಾಂಗ್ರೆಸ್​ನಲ್ಲಿ ಬಿನ್ನಮತ ಭುಗಿಲೆದ್ದಿದೆ.

ಹೌದು….ಕರ್ನಾಟಕ ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ದ ಭಿನ್ನಮತ ಸ್ಫೋಟಗೊಂಡಿದ್ದ, ಅವರನ್ನು ಕಾಂಗ್ರೆಸ್​ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸುವಂತೆ ಮಹಿಳಾ ನಾಯಕಿಯರು ಆಗ್ರಹಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವಾಸಕ್ಕೆ ಗುರುವಾರ ಬೆಳಗ್ಗೆ ಆಗಮಿಸಿದ ಮಹಿಳಾ ಕಾಂಗ್ರೆಸ್​ ಕಾರ್ಯಕರ್ತೆಯರು, ಅಧ್ಯಕ್ಷೆ ಸ್ಥಾನದಿಂದ ಪುಷ್ಪಾ ಅವರನ್ನ ಕೆಳಗಿಳಿಸಿ ಪ್ರಾಮಾಣಿಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಬಣ ಬಡಿದಾಟ: ದಿಲ್ಲಿಯಲ್ಲಿ ರಾಜೀ ಸಂಧಾನ, 50:50 ಫಾರ್ಮುಲಾ

ಕಳೆದ ಕೆಲ ದಿನಗಳ ಹಿಂದೆ ಏಕಾಏಕಿ ಜಿಲ್ಲಾ ಘಟಕಗಳ ಅಧ್ಯಕ್ಷೆಯರನ್ನು ಪುಷ್ಪಾ ಅಮರನಾಥ್ ಬದಲಾಯಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಅವರಿಗೂ ಮಾಹಿತಿ ನೀಡದೆ ಮಹಿಳಾ ಘಟಕಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪುಷ್ಪಾ ಅಮರನಾಥ್​ರನ್ನು ಕೆಳಗಿಳಿಸುವಂತೆ ಆಗ್ರಹಿಸಿದ್ದಾರೆ.

ಒಂದೆಡೆ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮತ್ತೊಂದು ಮಹಿಳಾ ಕ್ರಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯಗೆ ದೊಡ್ಡತಲೆನೋವಾಗಿದೆ. ಒಂದು ವೇಳೆ ಪುಷ್ಪಾ ಅಮರನಾಥ್ ಅವರನ್ನು ಕೆಳಗಿಳಿಸಿದರೆ, ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಯಾರು ಎನ್ನುವುದು ಸಹ ಕುತೂಹಲ ಮೂಡಿಸಿದೆ.

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್