ಮೊದಲ ಅಧಿವೇಶನ ದಿನವೇ ವಿಧಾನಸೌಧ ಮುಂದೆ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು
ಇಂದು ವಿಧಾನಸಭೆ ವಿಶೇಷ ಅಧಿವೇಶನ ಆರಂಭಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಮುಂಭಾಗದಲ್ಲಿ ಗೋಮೂತ್ರ ಸಿಂಪಡಿಸಿ, ವಿಶೇಷ ಪೂಜೆ ನೆರವೇರಿಸಿದ್ದಾರೆ.
ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ (Assembly Special Session) ಆರಂಭವಾಗಿದೆ. ಅಧಿವೇಶನದ ಮೊದಲ ಎರಡು ದಿನ 224 ಕ್ಷೇತ್ರಗಳಲ್ಲಿ ಗೆದ್ದು ವಿಧಾನಸಭೆಗೆ ಪ್ರವೇಶ ಮಾಡಿರುವ ನೂತನ ಶಾಸಕರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ. ಇನ್ನು ಮೊದಲ ದಿನವಾದ ಇಂದು(ಮೇ 22) ಅಧಿವೇಶನ ಆರಂಭಕ್ಕೂ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರು (Congress Workers) ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಗೋಮೂತ್ರ ಸಿಪಂಡಿಸಿ ಅರ್ಚಕರ ಮೂಲಕ ವಿಶೇಷ ಪೂಜೆ ಮಾಡಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಶಾಸಕ
ಹೌದು..ಇವತ್ತು ವಿಶೇಷ ಅಧಿವೇಶನ ಆರಂಭಕ್ಕೂ ಮೊದಲೇ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ಯರು ಗೋಮೂತ್ರ ಸಿಂಪಡಿಸಿದರು. ಹೊಸದಾಗಿ ಚುನಾಯಿತವಾಗಿರುವ ಕಾಂಗ್ರೆಸ್ ಸರ್ಕಾರವು ತನ್ನ ಮೊದಲ ಅಧಿವೇಶನ ನಡೆಸಲು ಮುನ್ನ ವಿಧಾನಸೌಧವನ್ನು ಶುದ್ದೀಕರಿಸುತ್ತಿದ್ದೇವೆ. ಅಲ್ಲದೇ ಬಿಜೆಪಿ ಸರ್ಕಾರದ ಭ್ರಷ ದುರಾಡಳಿ ಕೊನೆಯಾಗಿದ್ದರಿಂದ ಗೋಮೂತ್ರ ಸಿಪಂಡಿಸಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ.
#WATCH | Bengaluru: Congress workers sprinkle cow urine and perform Pooja at the State Assembly in Bengaluru. They said that they are ‘purifying’ Vidhana Soudha. pic.twitter.com/SWapoH7vOL
— ANI (@ANI) May 22, 2023
ಈ ಹಿಂದೆ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳು ಹಲವೆಡೆ ಗೋಮೂತ್ರ ಸಿಂಪಡಿಸಿ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದರು. ಇದೀಗ ಕಾಂಗ್ರೆಸ್ ಕಾರ್ಯಕರ್ತರು ಸಹ ಬಿಜೆಪಿ ಮತ್ತು ಹಿಂದೂ ಪರ ಸಂಫಟನೆಗಳಿಗೆ ತಿರುಗೇಟು ನೀಡಿದ್ದಾರೆ.