AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bitcoin: ಬಿಟ್​ಕಾಯಿನ್ ಹಗರಣ ಎಫೆಕ್ಟ್​ -ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮತ್ತೆ ಮೊಹಮದ್ ನಲಪಾಡ್​ ‘ಕೈ’ಜಾರುವುದೇ?

Mohammed Nalapad,: ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿಯೇ ಬಿಟ್ ಕಾಯಿನ್ ವಿಚಾರ ವಿಚಾರ ಪ್ರಸ್ತಾಪಕ್ಕೆ ಪ್ಲ್ಯಾನ್ ಸಿದ್ಧವಾಗುತ್ತಿದೆ ಎನ್ನಲಾಗಿದೆ. ನಲಪಾಡ್ ಅಧ್ಯಕ್ಷನಾದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತೆ ಎಂದೇ ಆ ವಿಚಾರ ಹೈಕಮಾಂಡ್ ಮುಂದೆ ಪ್ರಸ್ತಾಪಿಸಲಾಗುವುದು. ಇದರೊಂದಿಗೆ ಬಿಟ್ ಕಾಯಿನ್ ಹಗರಣ ‘ಕೈ’ ಆಂತರಿಕ ಸಮರಕ್ಕೆ ಕಾರಣವಾಗಿ, ಡಿಕೆಶಿ ವರ್ಸಸ್ ಸಿದ್ದರಾಮಯ್ಯ ಸಮರಕ್ಕೆ ಕಾರಣವಾಗುತ್ತಾ? ಕಾದುನೋಡಬೇಕಿದೆ.

Bitcoin: ಬಿಟ್​ಕಾಯಿನ್ ಹಗರಣ ಎಫೆಕ್ಟ್​ -ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮತ್ತೆ ಮೊಹಮದ್ ನಲಪಾಡ್​ ‘ಕೈ’ಜಾರುವುದೇ?
ಮೊಹಮ್ಮದ್ ನಲಪಾಡ್
TV9 Web
| Updated By: ಸಾಧು ಶ್ರೀನಾಥ್​|

Updated on:Nov 13, 2021 | 10:08 AM

Share

ಬೆಂಗಳೂರು: ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಲು ಮೊಹಮದ್ ನಲಪಾಡ್ ಶತಪ್ರಯತ್ನ ಪಡುತ್ತಿದ್ದರೂ, ಆರಂಭದಿಂದಲೂ ಅಡೆತಡೆಗಳು ಒಂದೊಂದಾಗಿ ಕಾಣಿಸಿಕೊಳ್ಳುತ್ತಲೇ ಇವೆ. ಇದೀಗ ಬಿಟ್​ಕಾಯಿನ್ (Bitcoin) ಹೆಸರಲ್ಲಿ ಕಾಂಗ್ರೆಸ್‌ನಲ್ಲಿಯೇ ಶೀತಲ ಸಮರ ಶುರುವಾದಂತಿದ್ದು, ನಲಪಾಡ್​ಗೆ ಅಧ್ಯಕ್ಷ ಸ್ಥಾನ ದೂರದ ಕನಸು ಎಂಬಂತೆ ಭಾಸವಾಗುತ್ತಿದೆ.

ಇದೀಗ ಬಿಟ್​ಕಾಯಿನ್ ಹೆಸರಲ್ಲಿ ಕಾಂಗ್ರೆಸ್‌ನಲ್ಲಿ ಒಳ ರಾಜಕೀಯ ಮೇಲುಗೈ ಆಗಿದ್ದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಈ ವಾರ್‌ಗೆ ಕಾರಣವಾಗಿದೆ. ನಲಪಾಡ್-ರಕ್ಷಾ ರಾಮಯ್ಯ ನಡುವಣ ಯುವ ಕಾಂಗ್ರೆಸ್ ಅಧ್ಯಕ್ಷಗಿರಿ (KPCC) ಫೈಟ್ ಇದಕ್ಕೆ ಹೇತುವಾಗಿದೆ. ಬಿಟ್​ಕಾಯಿನ್ ಹಗರಣದಲ್ಲಿ ಶಾಂತಿನಗರ ಕಾಂಗ್ರೆಸ್​ ಶಾಸಕ ಹ್ಯಾರಿಸ್​ (Nalapad Ahmed Haris) ಅವರ ಪುತ್ರ, ವಿವಾದಿತ ಮೊಹಮದ್ ನಲಪಾಡ್ ಹೆಸರು ಕೇಳಿ ಬರ್ತಿದೆ. ಇಂತಾ ಸಮಯದಲ್ಲಿ ನಲಪಾಡ್ ಅಧ್ಯಕ್ಷನಾದರೆ ತೊಂದರೆಯಾದೀತು. ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತೆಂದು ಆಂತರಿಕವಾಗಿ ಚರ್ಚೆ ತೇಲಿಬಿಡಲಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಬಣದಿಂದ ಈ ಗಂಭೀರ ಚರ್ಚೆ ನಡೆದಿದೆ. ಆದ್ರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಲಪಾಡ್ ಪರವಾಗಿ ಬ್ಯಾಟ್ ಬೀಸುತ್ತಿದ್ದಾರೆ.

ಧಮ್ ಇದ್ದರೆ ಕ್ರಮ ಕೈಗೊಳ್ಳಿ ಎಂದೂ ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ ಎನ್ನಲಾಗಿದೆ. ಈ ಮೂಲಕ ನಲಪಾಡ್ ಪರ ಡಿ.ಕೆ.ಶಿ ನಿಂತಿರುವುದು ಸ್ಪಷ್ಟವಾಗುತ್ತಿದ್ದಂತೆ ಸಿದ್ದರಾಮಯ್ಯ ಬಣದಿಂದ ಮತ್ತೊಂದು ಪ್ಲ್ಯಾನ್ ತೇಲಿಬಂದಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ವಿಚಾರದಲ್ಲಿ ಸಿದ್ದರಾಮಯ್ಯ ರಕ್ಷಾ ರಾಮಯ್ಯ ಪರ ಇದ್ದಾರೆ. ಹಾಲಿ ರಕ್ಷಾ ರಾಮಯ್ಯ ಅವರನ್ನೇ ಮುಂದುವರಿಸಲು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.

ಜೊತೆಗೆ ಬಿಟ್ ಕಾಯಿನ್ ವಿಚಾರ ಪ್ರಸ್ತಾಪಿಸುವುದಕ್ಕೆ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿಯೇ ವಿಚಾರ ಪ್ರಸ್ತಾಪಕ್ಕೆ ಪ್ಲ್ಯಾನ್ ಸಿದ್ಧವಾಗುತ್ತಿದೆ ಎನ್ನಲಾಗಿದೆ. ನಲಪಾಡ್ ಅಧ್ಯಕ್ಷನಾದರೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತೆ ಎಂದೇ ಆ ವಿಚಾರ ಹೈಕಮಾಂಡ್ ಮುಂದೆ ಪ್ರಸ್ತಾಪಿಸಲು ಪ್ಲ್ಯಾನ್ ಹಾಕಿಕೊಳ್ಳಲಾಗಿದೆ. ಇದರೊಂದಿಗೆ ಬಿಟ್ ಕಾಯಿನ್ ಹಗರಣ ‘ಕೈ’ ಆಂತರಿಕ ಸಮರಕ್ಕೆ ಕಾರಣವಾಗಿ, ಡಿಕೆಶಿ ವರ್ಸಸ್ ಸಿದ್ದರಾಮಯ್ಯ ಸಮರಕ್ಕೆ ಕಾರಣವಾಗುತ್ತಾ? ಕಾದುನೋಡಬೇಕಿದೆ.

Cold War In Congress: ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್​ನಲ್ಲೇ ಕೋಲ್ಡ್​ವಾರ್!

ಇದನ್ನೂ ಓದಿ: Best Performing Cryptocurrencies: ಬಿಟ್​ಕಾಯಿನ್, ಎಥೆರಮ್, ಶಿಬು ಇನು ಹೇಗಿದೆ ಇವುಗಳ ರಿಟರ್ನ್?

(karnataka congress youth presidentship again elusive for mohammed nalapad due to bitcoin case)

Published On - 9:22 am, Sat, 13 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ