ಕೆಲ ಕಾಂಗ್ರೆಸ್​ ಶಾಸಕರಿಗೆ, ಕಾರ್ಯಕರ್ತರಿಗೆ ಸಂಕ್ರಾಂತಿ ಗಿಫ್ಟ್: ಏನದು? ಡಿಕೆಶಿ ಹೇಳಿದ್ದಿಷ್ಟು

ಕಾಂಗ್ರೆಸ್‌ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಸಂಕ್ರಾಂತಿಯ ಈ ದಿನವೇ ಶುಭ ಸುದ್ದಿ ಸಿಗಲಿದೆಯೇ? ಹೌದು ಎಂದು ಹೇಳುತ್ತಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ .‌ ಏನದು? ಡಿಕೆಶಿ ಕೊಟ್ಟ ಸುಹಿ ಸುದ್ದಿ ಇಲ್ಲಿದೆ.

ಕೆಲ ಕಾಂಗ್ರೆಸ್​ ಶಾಸಕರಿಗೆ, ಕಾರ್ಯಕರ್ತರಿಗೆ ಸಂಕ್ರಾಂತಿ ಗಿಫ್ಟ್: ಏನದು? ಡಿಕೆಶಿ ಹೇಳಿದ್ದಿಷ್ಟು
ಡಿಸಿಎಂ ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 15, 2024 | 2:59 PM

ಬೆಂಗಳೂರು, (ಜನವರಿ 15): ಸಂಕ್ರಾಂತಿಯೊಳಗೆ ನಿಗಮ-ಮಂಡಳಿ (corporation and board ) ಪಟ್ಟಿಯನ್ನು ಇಂದು (ಜನವರಿ 15) ಸಂಜೆಯೊಳಗೆ ಪ್ರಕಟಿಸುವುದಾಗಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಘೋಷಿಸಿದ್ದರು. ಹಾಗಾಗಿ ಪಟ್ಟಿ ಫೈನಲ್‌ ಆಗಿದ್ದು, ಘೋಷಣೆಯೊಂದೇ ಬಾಕಿ ಇದೆ ಎಂಬ ಸುಳಿವನ್ನು ಸಹ ಕೊಟ್ಟಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ನ (Congress Karnataka) ಕೆಲ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಸಂಕ್ರಾಂತಿಯ ಈ ದಿನವೇ ಶುಭ ಸುದ್ದಿ ಸಿಗುವುದು ಖಚಿತವಾದಂತಾಗಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ ಮಂಡಳಿ ಪಟ್ಟಿ ಬಿಡುಗಡೆಯು ಸಂಕ್ರಾಂತಿಗಿಂತ ಮುಂದಕ್ಕೆ ಹೋಗುವುದಿಲ್ಲ. ಅದರ ಒಳಗಡೆಯೇ ಆಗಲಿದೆ. ಸಾಯಂಕಾಲದ ಒಳಗಡೆ ಇದರ ಸಲುವಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತೇನೆ. ಇನ್ನು ಚುನಾವಣೆ ಸಂದರ್ಭದಲ್ಲಿ ನಾವು ಕೊಟ್ಟಿದ್ದ ಮಾತನ್ನು ನಡೆಸಿಕೊಡುತ್ತೇವೆ ಎಂದು ಹೇಳಿದರು. ಈ ಮೂಲಕ ಇಂದು ಸಂಜೆ ವೇಳೆ ನಿಗಮ ಮಂಡಳಿ ಪಟ್ಟಿ ಪ್ರಕಟವಾಗುವ ಸುಳಿವು ನೀಡಿದರು.

ಜನವರಿ 19ರಂದು ಚುನಾವಣಾ ಸಮಿತಿ ಸಭೆ

ಇದೇ ಜನವರಿ 19ರಂದು ಸಂಜೆ 4 ಗಂಟೆಗೆ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಎಲೆಕ್ಷನ್ ಕಮಿಟಿ ಸಭೆ ಕರೆಯುತ್ತಿದ್ದೇನೆ. ಇದಕ್ಕೆ ನಮ್ಮ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬರುತ್ತಿದ್ದಾರೆ. ನಮ್ಮ ಪಕ್ಷದಿಂದ ಲೋಕಸಭೆ ಅಭ್ಯರ್ಥಿಗಳನ್ನು ಫೈನಲ್ ಮಾಡುವ ಸಂಬಂಧ ಈ ಸಭೆಯನ್ನು ನಡೆಸಲಾಗುತ್ತಿದೆ. ಹಾಗೆಯೇ ಜನವರಿ 21ರಂದು ದಕ್ಷಿಣ ಕನ್ನಡದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್‌ ಮಾಹಿತಿ ನೀಡಿದರು.

ಇನ್ನು ಇದೇ ವೇಳೆ ಸಂಕ್ರಾಂತಿ ಶುಭಾಯಶ ಕೋರಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷವಾದರೂ ಸಮರ್ಪಕ ಮಳೆ ಬಂದು, ಮುಂದಿನ ವರ್ಷ ಒಳ್ಳೆಯ ಬೆಳೆ ಆಗುತ್ತದೆ ಎಂದು ಭಾವಿಸಿಕೊಂಡಿದ್ದೇನೆ. ಸುಮಾರು 200ಕ್ಕೂ ಹೆಚ್ಚು ತಾಲೂಕುಗಳು ಬರಗಾಲ ಎಂದು ಘೋಷಿಸಲ್ಪಟ್ಟಿವೆ. ಭವಿಷ್ಯದಲ್ಲಿ ಇಂಥದ್ದೊಂದು ಸ್ಥಿತಿ ಮತ್ತೆ ಬರುವುದಿಲ್ಲ ಮತ್ತು ಬರಬಾರದು. ರೈತರ ಬದುಕು ಹಸನಾಗಲಿ ಎಂದು ನಾವೆಲ್ಲರೂ ಭಗವಂತನಲ್ಲಿ ಪ್ರಾರ್ಥನೆ ಮಾಡೋಣ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ