AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನಪರಿಷತ್ ಸಭಾಪತಿ ಚುನಾವಣೆಗೆ ದಿನಾಂಕ ನಿಗದಿ: ಇಲ್ಲಿದೆ ಪಕ್ಷಗಳ ಬಲಾಬಲ

ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇನ್ನು ಪಕ್ಷಗಳ ಬಲಾಬಲ ಹೇಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಕರ್ನಾಟಕ ವಿಧಾನಪರಿಷತ್ ಸಭಾಪತಿ ಚುನಾವಣೆಗೆ ದಿನಾಂಕ ನಿಗದಿ: ಇಲ್ಲಿದೆ ಪಕ್ಷಗಳ ಬಲಾಬಲ
Karnataka Legislative Council
TV9 Web
| Edited By: |

Updated on:Dec 08, 2022 | 5:31 PM

Share

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ (ಮೇಲ್ಮನೆ) ಸಭಾಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇದೇ ಡಿಸೆಂಬರ್ 21ರಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ (Karnataka Legislative Council Chairman Election) ನಡೆಸಲು ತೀರ್ಮಾನಿಸಲಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ(Belagavi winter session) ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇಂದು (ಡಿಸೆಂಬರ್ 008) ನಡೆದ ಸಚಿವ ಸಂಪುಟದಲ್ಲಿ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನವಾಗಿದೆ. ಅದರಂತೆ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ಸ್ಥಾನಕ್ಕೆ ಎಲೆಕ್ಷನ್​ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅಧಿಕಾರ ಸ್ವೀಕಾರ

ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ?

ಈ ಹಿಂದೆ ಬಸವರಾಜ ಹೊರಟ್ಟಿ ಅವರು ಜೆಡಿಎಸ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ವಿಧಾನಪರಿಷತ್ ಸಭಾಪತಿ ಸ್ಥಾನ ತೆರವಾಗಿತ್ತು. ಬಳಿಕ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಲಾಗಿತ್ತು. ನಂತರ ಬದಲಾದ ರಾಜಕೀಯ ವಿದ್ಯಾಮಾನಗಳಿಂದ ಬಸವರಾಜ ಹೊರಟ್ಟಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಬಿಜೆಪಿ ಅಭ್ಯರ್ಥಿಯಾಗಿ ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದು, ಇದೀಗ ಅವರು ಬಿಜೆಪಿಯಿಂದ ವಿಧಾನಪರಿಷತ್ ಸಭಾಪತಿ ಚುನಾವಣೆ ಅಭ್ಯರ್ಥಿಯಾಗಿ ಸಾಧ್ಯತೆಗಳು ಹೆಚ್ಚಿವೆ. ಯಾಕಂದ್ರೆ ಜೆಡಿಎಸ್​ ಬಿಟ್ಟು ಬಿಜೆಪಿಗೆ ಸೇರ್ಪಡೆಗೂ ಮುಂಚೆಯೇ ಪರಿಷತ್ ಸಭಾಪತಿ ಮಾಡುವ ಒಪ್ಪಂದವಾಗಿತ್ತು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ರಘುನಾಥ್ ಮಲ್ಕಾಪುರೆ ಮುಂದುವರಿಸುವಂತೆ ಆಗ್ರಹ

ಮಾತುಕೊಟ್ಟಂತೆ  ಹೊರಟ್ಟಿ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಆದ್ರೆ, ಇತ್ತ ಕುರುಬ ಸಮುದಾಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನೇ ಸಭಾಪತಿ ಹುದ್ದೆಯಲ್ಲಿ ಮುಂದುವರಿಸಬೇಕು ಆಗ್ರಹಿಸುತ್ತಿದೆ. ಈ ಬಗ್ಗೆ ಈಗಾಗಲೇ ಕುರುಬ ಸಮಾಜ ಮುಖಂಡರುಗಳು ಸುದ್ದಿಗೋಷ್ಟಿ ಮೂಲಕ ಬಿಜೆಪಿ ನಾಯಕರಿಗೆ ಹಾಗೂ ಮುಖ್ಯಮಮತ್ರಿ ಗಮನಕ್ಕೆ ತಂದಿದ್ದಾರೆ.

ಪಕ್ಷಗಳ ಬಲಾಬಲ

ಇನ್ನು ಪಕ್ಷಗಳ ಬಲಾಬಲ ನೋಡುವುದಾದರೆ ಆಡಳಿತರೂಢ ಬಿಜೆಪಿ 39, ವಿರೋಧ ಪಕ್ಷ ಕಾಂಗ್ರೆಸ್ 26 ಹಾಗೂ ಜೆಡಿಎಸ್ 08 ವಿಧಾನಪರಿಷತ್ ಸ್ಥಾನಗಳನ್ನು ಹೊಂದಿದೆ. ಇನ್ನು ಪಕ್ಷೇತರ 1. ​ ಒಟ್ಟು 75 ಸ್ಥಾನಗಳನ್ನು ಒಳಗೊಂಡಿರು ವಿಧಾನಪರಿಷತ್, ಸಭಾಪತಿಯಾಗಲು 38 ಮತಗಳ ಪಡೆಯಬೇಕಾಗುತ್ತದೆ.

ಇನ್ನು 26 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್, ಒಂದು ಪಕ್ಷೇತರ ಹಾಗೂ ಜೆಡಿಎಸ್​ನ​​ 08 ಸದಸ್ಯರ ಬೆಂಬಲದೊಂದಿಗೆ ವಿಧಾನಪರಿಷತ್ ಸಭಾಪತಿ ಚುನಾವಣೆ ಅಖಾಡಕ್ಕಿಳಿಯು ಸಾಧ್ಯತೆಗಳಿವೆ. ಆದರೂ ಈಗಾಗಲೇ ಬಿಜೆಪಿ 39 ಸ್ಥಾನಗಳನ್ನು ಹೊಂದಿದ್ದು, ಬಹುತೇಕ ಪರಿಷತ್ ಸಭಾಪತಿ ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆಗಳು ಹೆಚ್ಚಿದ್ದು, ಕಾಂಗ್ರೆಸ್​ ಗೆಲುವು ಕಷ್ಟಸಾಧ್ಯ. ಹಿನ್ನಲೆಯಲ್ಲಿ ಕಾಂಗ್ರೆಸ್ ಸಭಾಪತಿ ಚುನಾವಣೆಯಲ್ಲಿ ಭಾಗವಹಿಸುತ್ತೋ ಇಲ್ಲ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:56 pm, Thu, 8 December 22

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?