Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸ್ತಾರೋ? ಸಂಚಲನ ಮೂಡಿಸಿದ ಪ್ರಧಾನಿ ಮೋದಿ ಹೇಳಿಕೆ

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಆದ್ರೆ, ಇದೀಗ ಸ್ವತಃ ಮೋದಿಯವರೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಹಾಗಾದ್ರೆ, ಮೋದಿ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸ್ತಾರೋ? ಸಂಚಲನ ಮೂಡಿಸಿದ ಪ್ರಧಾನಿ ಮೋದಿ ಹೇಳಿಕೆ
(ಮೋದಿ-ಸಿದ್ದರಾಮಯ್ಯ) ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Nov 06, 2023 | 12:39 PM

ಖಂಡವಾ(ಮಧ್ಯಪ್ರದೇಶ), (ನವೆಂಬರ್ 06) : ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ (Karnataka) ಹಾಳಾಗಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಗೊತ್ತಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅಚ್ಚರಿ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಖಂಡವಾದಲ್ಲಿ ನಿನ್ನೆ(ನವೆಂಬರ್ 05) ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ.. ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಎಂದು ಗೊತ್ತಿಲ್ಲ ಎಂದಿದ್ದಾರೆ. ಮೋದಿ ಅವರ ಈ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ ಮೋದಿ, ಕಾಂಗ್ರೆಸ್‌ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿದ ರಾಜ್ಯವನ್ನು ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ. ಅಂತಹ ಸುದ್ದಿ ಇದೀಗ ಕರ್ನಾಟಕದಿಂದ ನಿಯಮಿತವಾಗಿ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಸಿಎಂ ಅಧಿಕಾರ ಹಂಚಿಕೆ ಚರ್ಚೆ ಬೆನ್ನಲ್ಲೇ ದಲಿತ ಮುಖ್ಯಮಂತ್ರಿ ಕೂಗು ಎಬ್ಬಿಸಿದ ಸ್ವಾಮೀಜಿ!

ರಾಜ್ಯ ಬಿಜೆಪಿ ನಾಯಕರು ಮೊದಲಿನಿಂದಲೂ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಹೇಳುತ್ತಾ ಬರುತ್ತಿದ್ದಾರೆ. ಅದರಲ್ಲೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರುತ್ತೇವೆ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಸಿದರಾಮಯ್ಯ ಮುಖ್ಯಮಂತ್ರಿ ಹುದ್ದೆಯಲ್ಲಿ ಎಷ್ಟು ದಿನ ಮುಂದುವರೆಯುತ್ತಾರೆ ಎಂಬ ಅನುಮಾನ ವ್ಯಕ್ತಪಡಿಸಿದ್ದು ಅಚ್ಚರಿಗೆ ಕಾರಣವಾಗಿದೆ.

ಮೊದಲೇ ಕಾಂಗ್ರೆಸ್​ನಲ್ಲಿ ಸಿಎಂ ಅಧಿಕಾರಿ ಹಂಚಿಕೆ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇದರ ಮಧ್ಯೆ ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ. ಇವೆಲ್ಲದರ ಮಧ್ಯೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಅಂದರೆ ಜೆಡಿಎಸ್ ಶಾಸಕರು ಬೆಂಬಲ ಕೊಡಲಿದ್ದಾರೆ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಕಾಂಗ್ರೆಸ್​ಅನ್ನು ಒಡೆಯು ಅಸ್ತ್ರ ಪ್ರಯೋಗಿಸಿದ್ದಾರೆ.

ಇತ್ತ ಬಿಜೆಪಿ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಈ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೇರೆ ನಾಯಕರು ಈ ರೀತಿ ಹೇಳಿಕೆ ನೀಡಿದರೆ ಅಷ್ಟು ಏನು ಅನ್ನಿಸುವುದಿಲ್ಲ. ಆದ್ರೆ, ಪ್ರಧಾನಮಂತ್ರಿಗಳ ಬಾಯಲ್ಲೇ ಈ ರೀತಿ ಮಾತುಗಳು ಬಂದಿರುವುದು ಅಚ್ಚರಿ ಮೂಡಿಸಿದೆ.

ಹಾಗಾದ್ರೆ, ಲೋಕಸಭೆ ಚುನಾವನೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮಾಹಾರಾಷ್ಟ್ರದ ರೀತಿಯ ರಾಜಕೀಯ ಬೆಳವಣಿಗೆಗಳು ಕರ್ನಾಟಕದಲ್ಲಿ ಆಗಲಿದ್ಯಾ? ಇಲ್ಲ ರಾಷ್ಟ್ರಪತಿ ಆಡಳಿ ಬರುತ್ತಾ? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 am, Mon, 6 November 23