ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್​ಗೆ ಉನ್ನತ ಸ್ಥಾನಮಾನ; ಉಭಯ ನಾಯಕರನ್ನು ಭೇಟಿಯಾಗಲಿರುವ ಡಿಕೆ ಶಿವಕುಮಾರ್

|

Updated on: May 30, 2023 | 6:29 PM

ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ.

ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್​ಗೆ ಉನ್ನತ ಸ್ಥಾನಮಾನ; ಉಭಯ ನಾಯಕರನ್ನು ಭೇಟಿಯಾಗಲಿರುವ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us on

ಬೆಂಗಳೂರು: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್‌ (Jagadish Shettar) ಹಾಗೂ ಲಕ್ಷ್ಮಣ ಸವದಿಗೆ (Laxman Savadi) ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ಲಕ್ಷ್ಮಣ ಸವದಿಯನ್ನು ಭೇಟಿಯಾಗಿ ಮಾತುಕತೆ ನಡೆಸಲಿರುವ ಡಿಕೆ ಶಿವಕುಮಾರ್ ನಂತರ ಹುಬ್ಬಳ್ಳಿಗೆ ತೆರಳಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಅವರ ಜತೆ ಚರ್ಚಿಸಲಿದ್ದಾರೆ.

ಜಗದೀಶ್ ಶೆಟ್ಟರ್‌ ಅವರಿಗೆ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ಡಿಕೆ ಶಿವಕುಮಾರ್‌ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ಸವದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ. ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಸವದಿಗೆ ಹುದ್ದೆ ನೀಡುವ ಸಾಧ್ಯತೆ ಇದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ್ದರು. ಮತ್ತೊಂದೆಡೆ, ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು. ಚುನಾವಣೆಯಲ್ಲಿ ಸೋಲನುಭವಿಸಿದ್ದರೂ ಶೆಟ್ಟರ್ ಅವರು ಪ್ರಮುಖ ಹುದ್ದೆ ನಿರೀಕ್ಷಿಸಿದ್ದರು.

ಇದನ್ನೂ ಓದಿ: ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಉತ್ತಮ ವ್ಯಕ್ತಿ, ರಾಜ್ಯದ ಕೆಲಸಗಳಿಗೆ ಅವರ ಸಹಕಾರ ಪಡೆಯೋಣ; ಡಿಕೆ ಶಿವಕುಮಾರ್

ಈ ಮಧ್ಯೆ, ಕಾಂಗ್ರೆಸ್ ನೂತನ ಸರ್ಕಾರದ ಸಚಿವ ಸಂಪುಟ ಭರ್ತಿಯಾಗಿದ್ದು, ಶನಿವಾರ ಎಲ್ಲ ಸಚಿವರ ಪ್ರಮಾಣವಚನ ಸ್ವೀಕಾರ ನೆರವೇರಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹೆಚ್ಚು ಖಾತೆಗಳಿದ್ದರೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಳಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಖಾತೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ