Amit Shah: ಧಾರವಾಡದಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ, ಜನ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ
ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾದರು. ಗೋಡೆ ಬರಹ ಮೂಲಕ ಅಭಿಯಾನದಲ್ಲಿ ಭಾಗಿಯಾದ ಅಮಿತ್ ಶಾ, ಭರ್ಜರಿ ರೋಡ್ ಶೋ ಕೂಡ ನಡೆಸಿದ್ದಾರೆ.
ಧಾರವಾಡ: ಜೆಡಿಎಸ್ ಹಾಗೂ ಕಾಂಗ್ರೆಸ್ ಕರ್ನಾಟಕವನ್ನು ಲೂಟಿ ಮಾಡಿದ್ದು, ಸಿದ್ದರಾಮಯ್ಯ (Siddaramaiah) ಅವರು ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಆರೋಪಿಸಿದ್ದಾರೆ. ಧಾರವಾಡದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದ ಅಮಿತ್ ಶಾ (Amit Shah Road Show In Dharwad), ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ದೇಶದಲ್ಲಿ ಭಯೋತ್ಪಾದನೆ ಮಟ್ಟಹಾಕಿದೆ. ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ. ರಾಜ್ಯದಲ್ಲಿ ಬಹುಮತದಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಗುರಿ ಹೊಂದಬೇಕಿದೆ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿಗೆ ಬೆಂಬಲ ನೀಡುವಂತೆ ಮನವಿ ರಾಜ್ಯದ ಜನರಿಗೆ ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದರು.
ಜಿಲ್ಲೆಯ ಕುಂದಗೋಳದಲ್ಲಿ ಕಾರ್ಯಕರ್ತ ಬಸವರಾಜ್ ಹಂಚಿನಮನಿ ಅವರ ಮನೆ ಗೋಡೆ ಮೇಲೆ ಕಮಲ ಚಿತ್ರ ಬಿಡಿಸುವ ಮೂಲಕ ಅಮಿತ್ ಶಾ ಅವರು ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು. ತಮ್ಮ ಮನೆಗೆ ಆಗಮಿಸಿದ ಅಮಿತ್ ಶಾ ಅವರಿಗೆ ಬಸವರಾಜ್ ಹಂಚಿನಮನಿ ಕುಟುಂಬಸ್ಥರು ಆರತಿ ಬೆಳಗಿದರು. ಈ ವೇಳೆ ಅಮಿತ್ ಶಾ ಮನೆಯ ಪುಟ್ಟ ಬಾಲಕಿಗೆ ಹಾರ ಹಾಕಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಸಾಥ್ ನೀಡಿದರು.
ಕುಂದಗೋಳದಿಂದ ಬೆಳಗಾವಿಯತ್ತ ಹೊರಟ ಶಾ, ಒಂದೇ ಹೆಲಿಕಾಪ್ಟರ್ನಲ್ಲಿ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಪ್ರಯಾಣ ಮಾಡಿದರು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕಾರ್ನಲ್ಲಿ ತೆರಳಿದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:17 pm, Sat, 28 January 23