ದೇವೇಗೌಡರನ್ನು ಹೊಗಳಿದ ಯಡಿಯೂರಪ್ಪ, ಅಮಿತ್ ಶಾ ಟೀಕೆಗೆ ಉತ್ತರ ಎಂದ ಕುಮಾರಸ್ವಾಮಿ

ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆ ವಿಧಾನಸಭೆಯಲ್ಲಿಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಹೊಗಳಿಕೆಯ ಮಾತುಗಳನ್ನಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಇದು ಅಮಿತ್ ಶಾ ಅವರು ಜೆಡಿಎಸ್ ಪಕ್ಷವನ್ನು ಟೀಕಿಸಿದ್ದಕ್ಕೆ ಉತ್ತರ ಎಂದರು.

ದೇವೇಗೌಡರನ್ನು ಹೊಗಳಿದ ಯಡಿಯೂರಪ್ಪ, ಅಮಿತ್ ಶಾ ಟೀಕೆಗೆ ಉತ್ತರ ಎಂದ ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿ.ಎಸ್.ಯಡಿಯೂರಪ್ಪ
Follow us
|

Updated on:Feb 24, 2023 | 5:18 PM

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ (B.S.Yediyurappa) ಅವರು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ (H.D.Deve Gowda) ಅವರನ್ನು ಹೊಗಳಿರುವುದು ಜೆಡಿಸ್ ಪಕ್ಷವನ್ನು ಟೀಕಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಉತ್ತರ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಅಧಿವೇಶನದಲ್ಲಿ ತಮ್ಮ ವಿದಾಯ ಭಾಷಣವನ್ನು ಯಡಿಯೂರಪ್ಪ ಅವರು ಮಾಡಿದ್ದಾರೆ. ಅವರ ಈ ವಿಚಾರವನ್ನು ನಾನು ಸ್ವಾಗತ ಮಾಡುತ್ತೇನೆ. ಇದು ಯಡಿಯೂರಪ್ಪ ಅವರ ದೊಡ್ಡತನವೂ ಹೌದು. ದೇವೇಗೌಡರ ವ್ಯಕ್ತಿತ್ವ ಹಾಗೇ ಇದೆ. ಅವರು ರಾಜಕೀಯ ಅನುಭವ ರಾಜ್ಯದ ಸಮಸ್ಯೆಗಳಿಗೆ ಸ್ಷಂಧಿಸಿದ್ದಾರೆ ಎಂದು ಹೇಳುವ ಮೂಲಕ ತಂದೆಯ ಕಾರ್ಯ ವೈಖರಿಯನ್ನು ಕೊಂಡಾಡಿದರು.

ಹಾಸನ ಕ್ಷೇತ್ರದ​ ಟಿಕೆಟ್​ಗಾಗಿ ಜೆಡಿಎಸ್ ಪಕ್ಷದೊಳಗೆ ನಡೆಯುತ್ತಿರುವ ಮುಸುಕಿನ ಗುದ್ದಾಟದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕುಟುಂಬ ಸದಸ್ಯರ ಸ್ಪರ್ಧೆ ಬಗ್ಗೆ ಈಗಾಗಲೇ ನಾನು ಹೇಳಿದ್ದೇನೆ. ನಾನು 120 ಸೀಟ್ ಗುರಿ ಇಟ್ಟುಕೊಂಡು ಯಾತ್ರೆ ಆರಂಭಿಸಿದ್ದೇನೆ. ನಾನೇ ಮುಖ್ಯಮಂತ್ರಿ ಆಗಬೇಕೆಂದು ಕರ್ನಾಟಕದ ಜನರ ಕೂಗು ಇದೆ. ಹೀಗಾಗಿ ಯಾರಿಗೆ ಟಿಕೆಟ್ ಕೊಡಬೇಕೆಂದು ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ. ಹಾಸನ ಕ್ಷೇತ್ರದ ಟಿಕೆಟ್ ಬಗ್ಗೆಯೂ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇನ್ನೊಂದು ವಾರದಲ್ಲಿ ಜೆಡಿಎಸ್​ 2ನೇ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಯಡಿಯೂರಪ್ಪ ನಿರ್ಧಾರ ಸ್ವಾಗತಿಸಿದ ಮಾಜಿ ಸಿಎಂ ಎಸ್​.ಎಂ.ಕೃಷ್ಣ

ತಮ್ಮ ಸಾರ್ಥಕ ರಾಜಕೀಯ ಬದುಕಿನಲ್ಲಿ ಕೊನೆಯಬಾರಿಗೆ ಅಧಿವೇಶನದಲ್ಲಿ ಮಾತಾಡಿದ ಹಿರಿಯ ಮುತ್ಸದ್ದಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜೆಡಿಎಸ್ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡರ ಬಗ್ಗೆ ತಮಗಿರುವ ಗೌರವಾದರಗಳನ್ನು ವ್ಯಕ್ತಪಡಿಸಿದರು. ಮಾಜಿ ಪ್ರಧಾನಿಗಳು ತಮ್ಮ ಈ ಇಳಿವಯಸ್ಸಿನಲ್ಲೂ ರಾಜಕೀಯವಾಗಿ ಸಕ್ರಿಯರಾಗಿ ರಾಜ್ಯದ ಹಲವಾರು ಸಮಸ್ಯೆಗಳಿಗೆ ಸಲಹೆಗಳನ್ನು ನೀಡುತ್ತಿರುತ್ತಾರೆ, ಅವರಿಂದ ನಾವು ಸಾಕಷ್ಟು ಕಲಿಯಬೇಕಿದೆ ಎಂದು ಹೇಳಿದರು.

ಎರಡು ದಿನ ಶೃಂಗೇರಿ ಪ್ರವಾಸ ಇದೆ: ಹೆಚ್​ಡಿಕೆ

ಶೃಂಗೇರಿ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡುವ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ ಅವರು, ಎರಡು ದಿನ ಶೃಂಗೇರಿ ಪ್ರವಾಸ ಇದೆ. ಮೂರು ಕ್ಷೇತ್ರಗಳಲ್ಲಿ ನಾನು ಪ್ರಚಾರ ಮಾಡುತ್ತೇನೆ. ಈ ನಡುವೆ ಶೃಂಗೇರಿಯ ದೇವಿಯ ಭಕ್ತ ಆಗಿದ್ದರಿಂದ ದರ್ಶನ ಪಡೆಯುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Fri, 24 February 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ