AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election 2023: 150 ಸ್ಥಾನಗಳನ್ನು ನೀವಲ್ಲ ನಾವು ಗೆಲ್ಲುತ್ತೇವೆ: ಸಿದ್ದುಗೆ ಹೇಳಿಕೆಗೆ ಅರುಣ್ ಸಿಂಗ್ ತಿರುಗೇಟು

ಕಾಂಗ್ರೆಸ್​​ ಅಧಿಕಾರದಲ್ಲಿ ಇದ್ದಾಗ ರಾಜ್ಯ, ದೇಶಕ್ಕೆ ಏನೂ ಮಾಡಲಿಲ್ಲ. ಹೀಗಿದ್ದಾಗ 130 ಸ್ಥಾನ ಹೇಗೆ ಗೆಲ್ಲುತ್ತೀರಿ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರಶ್ನಿಸಿದ್ದಾರೆ.

Karnataka Election 2023: 150 ಸ್ಥಾನಗಳನ್ನು ನೀವಲ್ಲ ನಾವು ಗೆಲ್ಲುತ್ತೇವೆ: ಸಿದ್ದುಗೆ ಹೇಳಿಕೆಗೆ ಅರುಣ್ ಸಿಂಗ್ ತಿರುಗೇಟು
ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
TV9 Web
| Updated By: Rakesh Nayak Manchi|

Updated on: Jan 21, 2023 | 6:51 PM

Share

ಚಿಕ್ಕಬಳ್ಳಾಪುರ: ಕಾಂಗ್ರೆಸ್​​ ಅಧಿಕಾರದಲ್ಲಿ ಇದ್ದಾಗ ರಾಜ್ಯ, ದೇಶಕ್ಕೆ ಏನೂ ಮಾಡಲಿಲ್ಲ. ಉದಾಹರಣೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಕೆಲಸ ಮಾಡಿದ್ದೀರಿ ಎಂದು ಹೇಳಿ. ಹೀಗಿದ್ದಾಗ ಅದು ಹೇಗೆ 130 ಸ್ಥಾನ ಗೆಲ್ಲುತ್ತೇವೆ ಅಂತ ಹೇಳುತ್ತೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಪ್ರಶ್ನಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್​ 130ರಿಂದ 150 ಸ್ಥಾನ ಗೆಲ್ಲುತ್ತದೆ ಎಂಬ ಹೇಳಿಕೆಗೆ ಚಿಕ್ಕಬಳ್ಳಾಪುರ (Chikkaballapur) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೆರೇಸಂದ್ರ ಗ್ರಾಮದಲ್ಲಿ ತಿರುಗೇಟು ನೀಡಿದ ಅರುಣ್ ಸಿಂಗ್, . ಬಿಜೆಪಿ ಸರ್ಕಾರ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೋಳಿಸಿದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಾವು 150 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್​ನವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ ಅರುಣ್ ಸಿಂಗ್, PFI ಸಂಘಟನೆಯನ್ನು ರಾಜ್ಯಾದ್ಯಂತ ವಿಸ್ತರಿಸಿದ್ದೇ ಸಿದ್ದರಾಮಯ್ಯ ಅವರ ಸಾಧನೆಯಾಗಿದೆ. 32 ಹಿಂದೂ ಕಾರ್ಯಕರ್ತರ ಕೊಲೆಗಳೇ ಕಾಂಗ್ರೆಸ್​​ ಸಾಧನೆನಾ? ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಹಗರಣಗಳು ನಡೆದಿವೆ. ಶಿಕ್ಷಕರ, ಪೊಲೀಸರ ನೇಮಕಾತಿಯಲ್ಲಿ ದೊಡ್ಡ ಹಗರಣ ನಡೆದಿವೆ. ಸಿದ್ದರಾಮಯ್ಯ ಆಡಳಿತದಲ್ಲಿನ ಹಗರಣಗಳ ಪಟ್ಟಿ ನಮ್ಮ ಬಳಿ ಇದೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಸೋಲಿಸಲು ಅಖಾಡಕ್ಕಿಳಿದ ಸಂಘಟನಾ ಚತುರ, ಕೋಲಾರದಲ್ಲಿ ಬಿಜೆಪಿ ಗೆಲುವಿಗೆ ಸಂತೋಷ್ ‘ಸೂತ್ರ’

ಡಬಲ್ ಇಂಜಿನ್ ಸರ್ಕಾರಕ್ಕೆ ರಾಜ್ಯದ ಜನರ ಮತ

ಡಬಲ್ ಇಂಜಿನ್​ ಸರ್ಕಾರದಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಕಡೆ ಸಂಚರಿಸುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ಮೋದಿ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ರಾಜ್ಯದ ಜನ ಈ ಬಾರಿಯೂ ಡಬಲ್ ಇಂಜಿನ್ ಸರ್ಕಾರಕ್ಕೆ ಮತ ಹಾಕುತ್ತಾರೆ. ಆ ಮೂಲಕ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಹೇಳಿದರು.

ರಾಜಕೀಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ