ರಾಹುಲ್ ಗಾಂಧಿ ರಾಜ್ಯಕ್ಕೆ ಬಂದರೆ ಕೈ ಮತಗಳಿಗೆ ಹೊಡೆತ, ಹೀಗಾಗಿ ಕೆರೆಯುತ್ತಿಲ್ಲ: ಪ್ರಲ್ಹಾದ್ ಜೋಶಿ

Karnataka Polls 2023: ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕಕ್ಕೆ ಬಿಜೆಪಿ ಕೇಂದ್ರ ನಾಯಕರು ಮೇಲಿಂದ ಮೇಲೆ ಭೇಟಿ ನೀಡುತ್ತಲೇ ಇದ್ದಾರೆ. ಕೇಂದ್ರದ ಬಿಜೆಪಿ ನಾಯಕರ ಭೇಟಿಯನ್ನು ಕಾಂಗ್ರೆಸ್ ಟೀಕಿಸುತ್ತಲೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಲ್ಹಾದ್ ಜೋಶಿ, ರಾಹುಲ್ ಗಾಂಧಿಯನ್ನು ಕರೆತನ್ನಿ, ಯಾರು ಬೇಡ ಎಂದವರು ಎಂದಿದ್ದಾರೆ.

ರಾಹುಲ್ ಗಾಂಧಿ ರಾಜ್ಯಕ್ಕೆ ಬಂದರೆ ಕೈ ಮತಗಳಿಗೆ ಹೊಡೆತ, ಹೀಗಾಗಿ ಕೆರೆಯುತ್ತಿಲ್ಲ: ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Follow us
Rakesh Nayak Manchi
|

Updated on:Feb 26, 2023 | 7:18 PM

ಶಿವಮೊಗ್ಗ: ಕರ್ನಾಟಕ ವೀಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಕೇಂದ್ರದ ಬಿಜೆಪಿ ನಾಯಕರು ರಾಜ್ಯಕ್ಕೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಟೀಕಿಸುತ್ತಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ರಾಹುಲ್ ಗಾಂಧಿಯವರನ್ನು ಕರೆ ತನ್ನಿ, ಬೇಡ ಎಂದವರು ಯಾರು? ಎಂದು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜ್ಯಕ್ಕೆ ಬಂದರೆ ಇರುವ ವೋಟ್​ಗಳು ಕೂಡ ಹೋಗುತ್ತದೆ ಎಂಬ ಭಯ ಕಾಂಗ್ರೆಸ್ ನಾಯಕರಲ್ಲಿದೆ. ಹೀಗಾಗಿ ಅವರು ರಾಹುಲ್ (Rahul Gandhi) ಅವರನ್ನು ಕರ್ನಾಟಕಕ್ಕೆ ಕರೆಯುತ್ತಿಲ್ಲ. ತಮಗೆ ಸಿಗದ್ದು ಬೇರೆಯವರಿಗೆ ಸಿಗಬಾರದು ಎಂಬ ಮನೋಭಾವ ಕಾಂಗ್ರೆಸ್​ನವರದ್ದು ಎಂದು ಹೇಳಿದರು. ಅಲ್ಲದೆ, ಕಾಂಗ್ರೆಸ್​ನಲ್ಲಿ ಸಮರ್ಥ ನಾಯಕರಿಲ್ಲ, ಹಾಗಾಗಿ ಅವರಿಗೆ ತಲೆನೋವಾಗಿದೆ. ಬಿಜೆಪಿಯ ಕೇಂದ್ರ, ರಾಜ್ಯ ನಾಯಕರು ಸಮರ್ಥರಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್​​ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯದಿಂದ ನಿವೃತ್ತಿ ಹೊಂದುವ ಬಗ್ಗೆ ಸುಳಿಸುವ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ವಯಸ್ಸಿನ ಕಾರಣದಿಂದ ಸೋನಿಯಾ ಗಾಂಧಿ ನಿವೃತ್ತಿ ಘೋಷಿಸಿರಬಹುದು. ಸೋನಿಯಾ ಗಾಂಧಿಗೆ ಒಳ್ಳೆಯದಾಗಲಿ, ಬೇರೆ ಏನೂ ನಾನು ಹೇಳುವುದಿಲ್ಲ ಎಂದು ಶಿವಮೊಗ್ಗ ಹೆಲಿಪ್ಯಾಡ್​​ನಲ್ಲಿ ಹೇಳಿಕೆ ನೀಡಿದರು.

ಇದನ್ನೂ ಓದಿ: ಫೆಬ್ರವರಿ 27ರಂದು ಕರ್ನಾಟಕಕ್ಕೆ ಪ್ರಧಾನಿ ನಮೋ ಭೇಟಿ; ಮೋದಿ ಕಾರ್ಯಕ್ರಮದ ಪಟ್ಟಿ ಹೀಗಿದೆ

ಶಿವಮೊಗ್ಗ ಏರ್​ಪೋರ್ಟ್ ಯಡಿಯೂರಪ್ಪ ಅವರ ಕನಸಿನ ಯೋಜನೆ: ಜೋಶಿ

ಶಿವಮೊಗ್ಗ ಏರ್​ಪೋರ್ಟ್ ಯಡಿಯೂರಪ್ಪ ಅವರ ಕನಸಿನ ಯೋಜನೆಯಾಗಿದ್ದು, ಇದನ್ನು ನಾಳೆ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಅದ್ಭುತವಾದ ಕಾರ್ಯಕ್ರಮದ ಮೂಲಕ ರಾಜ್ಯದ ಜನರಿಗೆ ಮೋದಿ ಕೊಡುಗೆ ನೀಡುತ್ತಾರೆ. ಚುನಾವಣಾ ದೃಷ್ಟಿಯಿಂದ ಈ ಕಾರ್ಯಕ್ರಮ ಬಿಜೆಪಿಗೆ ಅನುಕೂಲ ಆಗಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು. ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ ವಿಚಾರವಾಗಿ ಮಾತನಾಡಿದ ಜೋಶಿ, ಈಗಾಗಲೇ ಯಡಿಯೂರಪ್ಪ ಅವರೇ ರಾಜ್ಯ ಪ್ರವಾಸ ಬಗ್ಗೆ ಹೇಳಿದ್ದಾರೆ. ಬಿಜೆಪಿಯಲ್ಲಿ ಯಾವಾಗಲೂ ಅವರು ಗೌರವಯುತ ಸ್ಥಾನದಲ್ಲಿರುತ್ತಾರೆ. ಅವರು ನೀಡುವ ಸಲಹೆಗಳನ್ನು ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Sun, 26 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ