ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೇಕಾರರಿಗೆ 10 ಹೆಚ್‌ಪಿವರೆಗೆ ಉಚಿತ ವಿದ್ಯುತ್‌: ಸಿದ್ದರಾಮಯ್ಯ ಘೋಷಣೆ

Karnataka Election 2023: ಶತಾಯ ಗತಾಯವಾಗಿ ಮತ್ತೆ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಇನ್ನಿಲ್ಲದ ಉಚಿತ ಘೊಷಣೆಗಳನ್ನು ಮಾಡುತ್ತಿರುವ ಕಾಂಗ್ರೆಸ್, ಇದೀಗ ಮತ್ತೊಂದು ಉಚಿತ ಘೋಷಣೆ ಮಾಡಿದೆ. ‘ಕೈ’ ಸರ್ಕಾರ ಬಂದರೆ ನೇಕಾರರಿಗೆ 10 ಹೆಚ್‌ಪಿವರೆಗೆ ಉಚಿತ ವಿದ್ಯುತ್‌ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೇಕಾರರಿಗೆ 10 ಹೆಚ್‌ಪಿವರೆಗೆ ಉಚಿತ ವಿದ್ಯುತ್‌: ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ
Follow us
Rakesh Nayak Manchi
|

Updated on:Feb 27, 2023 | 10:20 PM

ಬಾಗಲಕೋಟೆ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದು, ಕಾಂಗ್ರೆಸ್​ನ ಉಚಿತ ಘೋಷಣೆ ಮುಂದುವರಿದಿದೆ. ಶತಾಯ ಗತಾಯವಾಗಿ ಮತ್ತೆ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಉಚಿತ ಘೋಷಣೆಗಳನ್ನು ಮಾಡುತ್ತಿರುವ ಕಾಂಗ್ರೆಸ್, ಇದೀಗ ನೇಕಾರರಿಗೆ 10 ಹೆಚ್‌ಪಿವರೆಗೆ ಉಚಿತ ವಿದ್ಯುತ್‌ (Free electricity up to 10 HP for weavers) ನೀಡುವುದಾಗಿ ಘೋಷಿಸಿದೆ. ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ (Congress Praja Dhwani Yatra) ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್ ಸರ್ಕಾರ ಬಂದ ನಂತರ ನೇಕಾರರಿಗೆ 10 ಹೆಚ್‌ಪಿವರೆಗೆ ಉಚಿತ ವಿದ್ಯುತ್‌ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಹೇಳಿ ಕೇಳೀ ತೇರದಾಳ ನೇಕಾರರ ಪ್ರಭಲ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ನಿಂತು ಭಾಷಣ ಮಾಡಿದ ಸಿದ್ದರಾಮಯ್ಯ ಅವರು, ನೇಕಾರರಿಗೆ 10 ಹೆಚ್‌ಪಿವರೆಗೆ ಉಚಿತ ವಿದ್ಯುತ್‌ ಘೋಷಣೆ ಮಾಡುವ ಮೂಲಕ ನೇಕಾರರ ಮತಗಳಿಗೆ ಗಾಳ ಹಾಕಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೇಕಾರ ಸಂಘದ ಪ್ರಮುಖರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ 5 ಹೆಚ್​ಪಿವರೆಗೆ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ಒದಗಿಸಲು ಆದೇಶಿದ್ದರು.

ಇದನ್ನೂ ಓದಿ: ಹೆಚ್ಚು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುವವರಿಗೆ ಟಿವಿ ಉಡುಗೊರೆ: ಡಿ.ಕೆ.ಶಿವಕುಮಾರ್ ಘೋಷಣೆ

ಈಗಾಗಲೇ ಕಾಂಗ್ರೆಸ್ ನಾಯಕರು ಹಲವು ಉಚಿತ ಘೋಷಣೆಗಳನ್ನು ಮಾಡಿದ್ದಾರೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್​ ವಿದ್ಯುತ್ ನೀಡುವುದಾಗಿ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶಿಸುತ್ತೇವೆ ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಕುಟುಂಬ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಪ್ರತಿ ಮಹಿಳೆಗೆ ಮಾಸಿಕ 2,000 ಧನಸಹಾಯ ನೀಡುವ ಬಗ್ಗೆ ಪ್ರಿಯಾಂಕಾ ಅವರೆದುರು ಪ್ರಮಾಣಮಾಡುತ್ತೇವೆ ಅಂತ ಶಿವಕುಮಾರ್ ಘೋಷಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Mon, 27 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ