ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಕೊಲೆಗಳಾಗಿವೆ: ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಹತ್ಯೆಯಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ ನಡುವೆಯೇ ಸಿದ್ದರಾಮಯ್ಯ ಅವರು ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಕೊಲೆಗಳಾಗಿವೆ ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಕೊಲೆಗಳಾಗಿವೆ: ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
TV9 Web
| Updated By: Rakesh Nayak Manchi

Updated on:Feb 07, 2023 | 2:21 PM

ಕಲಬುರಗಿ: ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಕೊಲೆಗಳಾಗಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಹತ್ಯೆಯಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ ನಡುವೆಯೇ ಸಿದ್ದರಾಮಯ್ಯ ಅವರು ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ಸರ್ಕಾರದ (BJP Govt) ಅವಧಿಯಲ್ಲೇ ಹೆಚ್ಚು ಹಿಂದೂಗಳ ಕೊಲೆಗಳಾಗಿವೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಕಾಲದಲ್ಲಿ ಹಿಂದೂಗಳಷ್ಟೇ ಅಲ್ಲ, ಅಲ್ಪಸಂಖ್ಯಾತರ ಕೊಲೆ ಆಗಿವೆ. ಅವುಗಳೆಲ್ಲ ಬೇರೆ ಬೇರೆ ವಿಚಾರಕ್ಕೆ ಆಗಿರುವ ಕೊಲೆಗಳಾಗಿವೆ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಹಿಂದೂಗಳ ಹತ್ಯೆಯಾಗಲು ಆರ್​ಎಸ್​ಎಸ್​​, ಬಿಜೆಪಿಯವರೇ ಕಾರಣರಾಗಿದ್ದಾರೆ. ಪರೇಶ್​ ಮೇಸ್ತ ಕೊಲೆಯಾದಾಗ ದೊಡ್ಡ ಗಲಾಟೆ ಮಾಡಿದ್ದರು. ಆಗ ಮೇಸ್ತ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದೆ, ಆಮೇಲೆ ಏನಾಯ್ತು ಎಂದು ವಿಪಕ್ಷ ನಾಯಕರು ಪ್ರಶ್ನಿಸಿದರು. ಸಿ.ಟಿ.ರವಿ ಆರ್​ಎಸ್​ಎಸ್​ ಗಿರಾಕಿ, ಅವರಿಗೆ ಬರೀ ಸುಳ್ಳು ಹೇಳುವುದೇ ಕೆಲಸ. ನಾನು ಹಿಂದು ಧರ್ಮದವನು. ಹಿಂದೂ ಧರ್ಮದ ಬಗ್ಗೆ ನಾನು ಮಾತನಾಡಿಯೇ ಇಲ್ಲಾ, ವಿರೋದವು ಮಾಡಿಲ್ಲ. ಯಾವುದೇ ಧರ್ಮ, ಹಿಂಸೆಗೆ ಪ್ರಚೋದನೆ ಮಾಡಿದರೆ ಅದಕ್ಕೆ ಧರ್ಮದ ಚೌಕಟ್ಟು ಕೊಡಕ್ಕೆ ಮಾಡಿದರೆ ಅದು ಸರಿಯಲ್ಲ. ಸಾಮರಸ್ಯವನ್ನು ಹಾಳು ಮಾಡುವುದೇ ಬಿಜೆಪಿ ನಾಯಕರ ಕೆಲಸ ಎಂದರು.

ಇದನ್ನೂ ಓದಿ: ಹಿಂದೂ ಆದವ ಹಿಂದುತ್ವ ಗೌರವಿಸಲೇಬೇಕು: ಸಿದ್ದರಾಮಯ್ಯ ಹೇಳಿಕೆಗೆ ಸುಬುಧೇಂದ್ರ ತೀರ್ಥ ಶ್ರೀ ತಿರುಗೇಟು

ಇನ್ನು, ಕಾಂಗ್ರೆಸ್ ಪಾಕಿಸ್ತಾನದಲ್ಲಿ ಸ್ಪರ್ಧೆ ಮಾಡಿದರಷ್ಟೇ 150 ಸ್ಥಾನ ಗೆಲ್ಲುತ್ತದೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕರ್ನಾಟಕ ಪಾಕಿಸ್ತಾನದಲ್ಲಿ ಇದೆಯಾ?ಭಾರತದಲ್ಲಿದೆಯಾ? ಚುನಾವಣೆ ನಡೆಯುತ್ತಿರುವುದು ಪಾಕಿಸ್ತಾನದಲ್ಲಾ? ಕರ್ನಾಟಕದಲ್ಲಾ? ಪೆದ್ದು ಪೆದ್ದಾಗಿ ಮಾತನಾಡುತ್ತೀರಲ್ಲಾ ಅಂತಾ ಸಿ.ಟಿ.ರವಿಯನ್ನೇ ಕಿಚಾಯಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Tue, 7 February 23

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ