ಸಭೆ ರದ್ದಾಗಿರಬಹುದು, ಆದರೆ ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ನನ್ನ ನಿಲುವು ಬದಲಾಗಲ್ಲ: ಕುಮಾರಸ್ವಾಮಿ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​.ಡಿ.ಕುಮಾರಸ್ವಾಮಿ ಅವರು ಹಾಸನ ಕ್ಷೇತ್ರದ ಸುಮಾರು 300 ಪ್ರಮುಖ ಮುಖಂಡರ ಸಭೆಯನ್ನು ನಾಳೆ ಸಂಜೆ 4-30ಕ್ಕೆ ಬೆಂಗಳೂರಿನ ಜೆಪಿ ಭವನದಲ್ಲಿ ಆಯೋಜಿಸಿದ್ದರು. ಆದರೆ ಈ ಸಭೆಯನ್ನು ಪಕ್ಷದ ವರಿಷ್ಠ ದೇವೇಗೌಡ ಅವರು ರದ್ದುಗೊಳಿಸಿದ್ದಾರೆ.

ಸಭೆ ರದ್ದಾಗಿರಬಹುದು, ಆದರೆ ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ನನ್ನ ನಿಲುವು ಬದಲಾಗಲ್ಲ: ಕುಮಾರಸ್ವಾಮಿ
ಹೆಚ್.ಡಿ.ಕುಮಾರಸ್ವಾಮಿ
Follow us
Rakesh Nayak Manchi
|

Updated on:Feb 25, 2023 | 10:44 PM

ಹಾಸನ: ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಫೆಬ್ರವರಿ 26ರಂದು ನಿಗದಿಯಾಗಿದ್ದ ಸಭೆ ರದ್ದಾಗಿರಬಹುದು. ಆದರೆ ಹಾಸನ ಕ್ಷೇತ್ರದ ಟಿಕೆಟ್ (Hassan JDS Ticket Fight) ವಿಚಾರದಲ್ಲಿ ನನ್ನ ನಿಲುವು ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​.ಡಿ.ಕುಮಾರಸ್ವಾಮಿ (H.D.Kumaraswamy) ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಹೇಳಿಕೆ ನೀಡಿದ ಅವರು, ಕಳೆದ 18-20 ವರ್ಷದಲ್ಲಿ ನನಗೆ ಇಷ್ಟವಿಲ್ಲದಿದ್ದರೂ ಕೆಲವು ತಪ್ಪಾಗಿದೆ. ಈಗ ಮತ್ತೆ ಅದೇ ತಪ್ಪು ಆಗಲು ಬಿಡುವುದಿಲ್ಲ. ಈವರೆಗೆ ಹಾಸನ ಕ್ಷೇತ್ರದ ವಿಚಾರದಲ್ಲಿ ಮಧ್ಯಪ್ರವೇಶಿಸಿರಲಿಲ್ಲ. ಈಗ ಮಧ್ಯಪ್ರವೇಶಿಸಿದ್ದೇನೆ, ನನ್ನ ನಿಲುವು ಬದಲಿಸುವುದಿಲ್ಲ ಎಂದು ಖಡಕ್ ಆಗಿಯೇ ಹೇಳಿದ್ದಾರೆ.

ಸಾಮಾನ್ಯ ಕಾರ್ಯಕರ್ತರಿಗೆ ಗೌರವ ಕೊಡಿಸುವ ನನ್ನ ನಿಲುವಿನಲ್ಲಿ ಬದಲಾಗುವುದಿಲ್ಲ. ಬಿಜೆಪಿ ದುರಾಂಕರದ ಅಭ್ಯರ್ಥಿ ವಿರುದ್ಧ ಕಾರ್ಯಕರ್ತನನ್ನ ನಿಲ್ಲಿಸಬೇಕು. ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸಬೇಕಿದೆ. ಈ ಸಾಮರ್ಥ್ಯ ಪಕ್ಷಕ್ಕಿದೆ ಅನ್ನೋದ ಸಾಬೀತುಪಡಿಸಬೇಕಿದೆ. ಹೀಗಾಗಿ ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ನನ್ನ ನಿಲುವು ಬದಲಿಸಲ್ಲ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಕೊನೆಗೂ ಗೊಂದಲ ನಿವಾರಣೆಗೆ ಮಧ್ಯಪ್ರವೇಶಿಸಿದ ದಳಪತಿ

ಸ್ವರೂಪ್ ಪರವಾಗಿ ಬ್ಯಾಟ್ ಬೀಸುತ್ತಾ ಕುಮಾರಸ್ವಾಮಿ ಸಭೆ ಕರೆದ ಹಿನ್ನಲೆಯಲ್ಲಿ ಮತ್ತೊಂದು ಗುಂಪಿನಲ್ಲಿ ಆತಂಕ ಸೃಷ್ಟಿಯಾಗಿತ್ತು. ಹಾಗಾಗಿಯೇ ಎಲ್ಲಾ ಗೊಂದಲಕ್ಕೆ ತೆರೆ ಎಳೆಯರು ಎಂಟ್ರಿಯಾದ ದೇವೇಗೌಡರು, ಸಭೆಯನ್ನ ರದ್ದುಮಾಡಿ ಟಿಕೇಟ್ ಗೊಂದಲ ನಿವಾರಣೆ ಅಖಾಡಕ್ಕೆ ಇಳಿದಿದ್ದಾರೆ. ಒಂದು ವಾರದ ಬಳಿಕ ತಾವೇ ಹಾಸನಕ್ಕೆ ಬಂದು ಟಿಕೇಟ್ ಗೊಂದಲಕ್ಕೆ ತೆರೆ ಎಳೆಯುವುದಾಗಿ ದೇವೇಗೌಡರು ಹೇಳಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಹಾಸನ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎಚ್.ಎಸ್ ಪ್ರಕಾಶ್ ಕಳೆದ 2018ರ ಚುನಾವಣೆಯಲ್ಲಿ ಬಿಜೆಪಿಯ ಪ್ರೀತಂಗೌಡ ವಿರುದ್ದ ಸೋಲುಂಡಿದ್ದರು. ಸೋಲಿನ ಬಳಿಕ ಮೃತಪಡುವ ಮುನ್ನ ಕುಮಾರಸ್ವಾಮಿ ಅವರನ್ನ ಪ್ರಕಾಶ್ ಕೊನೆಯಬಾರಿ ಭೇಟಿಯಾದಾಗ ನಿನ್ನ ಮಗನ ರಾಜಕೀಯ ಭವಿಷ್ಯ ನನಗೆ ಬಿಟ್ಟುಬಿಡು ಎಂದು ಮಾತು ಕೊಟ್ಟಿದ್ದರು. ಇದೇ ಮಾತಿಕೆ ಕಟ್ಟುಬಿದ್ದಿರುವ ಕುಮಾರಸ್ವಾಮಿ, ನಾಲ್ಕು ತಿಂಗಳ ಹಿಂದೆ ಎಚ್.ಎಸ್ ಪ್ರಕಾಶ್ ಸ್ಮರಣೆ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಸ್ವರೂಪ್ ಹಾಸನದ ಜೆಡಿಎಸ್ ಅಭ್ಯರ್ಥಿ ಎಂದು ಪರೋಕ್ಷವಾಗಿ ಹೇಳಿದ್ದರು. ಆದರೆ ಸ್ವರೂಪ್ ಬದಲು ತಾನೇ ಅಭ್ಯರ್ಥಿ ಎಂದು ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿಕೊಂಡಾಗ ಇಕ್ಕಟ್ಟಿಗೆ ಸಿಲುಕಿದ್ದ ಕುಮಾರಸ್ವಾಮಿ, ಹಾಸನಕ್ಕೆ ನಮಗೆ ಸೂಕ್ತ ಅಭ್ಯರ್ಥಿ ಇದ್ದಾರೆ ಭವಾನಿಯವರು ಸದ್ಯಕ್ಕೆ ಅವಶ್ಯಕತೆ ಇಲ್ಲಾ ಎನ್ನೋ ಸಂದೇಶ ಕೊಟ್ಟಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Sat, 25 February 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ