AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಗ್ರೀನ್ ಸಿಗ್ನಲ್

ಯೋಗೇಶ್ ಗೌಡ ಹತ್ಯೆ ಕೇಸ್​ನಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.

ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಗ್ರೀನ್ ಸಿಗ್ನಲ್
ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧೆ
Rakesh Nayak Manchi
|

Updated on:Mar 17, 2023 | 6:26 PM

Share

ದೆಹಲಿ: ಸಮೀಪಿಸುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ಸಜ್ಜಾಗುತ್ತಿದೆ. ಈ ನಡುವೆ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda Murder Case) ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (Congress Central Election Committee) ಒಪ್ಪಿಗೆ ಸೂಚಿಸಿದೆ. ಬೊಮ್ಮಾಯಿ ಸ್ಪರ್ಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದಲೇ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದರು ಎನ್ನಲಾಗಿದೆ.

ಎಐಸಿಸಿ ಕಚೇರಿಯಲ್ಲಿ ಇಂದು ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕುಲಕರ್ಣಿ ಅವರನ್ನು ಬೊಮ್ಮಾಯಿ ವಿರುದ್ಧ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತಿತರರಿದ್ದರು.

ಇದನ್ನೂ ಓದಿ: ಚುನಾವಣೆಗೋಸ್ಕರ ರಾಜಕಾರಣ ಮಾಡುವವರು ಬೆಕಾದಷ್ಟಿದ್ದಾರೆ ಎಂದು ಸಿಎಂ ಬೊಮ್ಮಾಯಿ, ಇದಕ್ಕೆ ‘ಅವರು ಕಳ್ಳರು ಕಳ್ಳರು’ ಎಂದ ಸಭಿಕ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಆರೋಪದಲ್ಲಿ ಜೈಲು ಸೇರಿ ಜಾಮೀನು ಮೇಲೆ ಹೊರಬಂದಿರುವ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ವಿನಯ್ ಆರ್ ಕುಲಕರ್ಣಿಯವರನ್ನು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾಗಿರುವ ಶಿಗ್ಗಾವಿ ಸ್ಪರ್ಧಿಸುವಂತೆ ಒತ್ತಡ ಹೇರಲಾಗುತ್ತಿದೆ. ಕೆಪಿಸಿಸಿ ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕುಲಕರ್ಣಿಗೆ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲವಾಗಿದೆ ಮತ್ತು ಬಸವರಾಜ ಬೊಮ್ಮಾಯಿ, ಕುಲಕರ್ಣಿ ಇಬ್ಬರೂ ಲಿಂಗಾಯತರು. ಕಾಂಗ್ರೆಸ್ ಆಂತರಿಕ ಸಮೀಕ್ಷೆಯ ಪ್ರಕಾರ ವಿನಯ್ ಕುಲಕರ್ಣಿ ಬೊಮ್ಮಾಯಿಗೆ ಪ್ರಬಲ ಸ್ಪರ್ಧಿಯಾಗಲಿದ್ದಾರೆ ಎಂಬುದು ರಾಜ್ಯ ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ಹಿನ್ನಲೆ

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಅವರನ್ನು 2016ರ ಜೂನ್‌ 15ರಂದು ಜಿಮ್‌ನಲ್ಲಿ ಪತ್ರಿಕೆ ಓದುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದು, ಕುಲಕರ್ಣಿ ಸೇರಿ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. 2019ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಅದರಂತೆ ತನಿಖೆ ಆರಂಬಿಸಿದ್ದ ಸಿಬಿಐ 2020ರ ನವೆಂಬರ್​ನಲ್ಲಿ ವಿನಯ್ ಕುಲಕರ್ಣಿಯನ್ನು ಬಂಧಿಸಿತ್ತು.

ನಂತರ ವಿನಯ್ ಕುಲಕರ್ಣಿ ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಸಿಬಿಐ ಆಕ್ಷೇಪಣೆ ನಡುವೆಯೂ ಧಾರವಾಡಕ್ಕೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ, ಸಾಕ್ಷ್ಯ ನಾಶಪಡಿಸಿದರೆ ಜಾಮೀನು ರದ್ದುಪಡಿಸುವ ಎಚ್ಚರಿಕೆನ್ನೂ ನೀಡಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Fri, 17 March 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ