ಎಸ್​ಎಂ ಕೃಷ್ಣ ಭೇಟಿಯಾದ ಸಂಸದೆ ಸುಮಲತಾ; ಬಿಜೆಪಿ ಸೇರ್ಪಡೆ ಬಗ್ಗೆ ಏನಂದ್ರು ನೋಡಿ

ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿ ಸೇರುತ್ತಾರೆ ಎಂಬುದು ಸದ್ಯದ ಚುನಾವಣೆ ಹೊಸ್ತಿಲಲ್ಲಿ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಅವರು ಬಿಜೆಪಿ ಜೊತೆ ಕಾಣಿಸಿಕೊಳ್ಳುತ್ತಿರುವುದು ಇದಕ್ಕೆ ಕನ್ನಡಿ ಹಿಡಿದಂತಿದೆ. ಬಿಜೆಪಿ ಹಿರಿಯ ನಾಯಕ ಎಸ್​ಎಂ ಕೃಷ್ಣಾರನ್ನು ಭೇಟಿಯಾದ ಅವರು ಕೇಸರಿ ಪಡೆ ಸೇರುವ ಬಗ್ಗೆ ಹೇಳಿದ್ದೇನು ಎಂಬುದು ಇಲ್ಲಿದೆ.

ಎಸ್​ಎಂ ಕೃಷ್ಣ ಭೇಟಿಯಾದ ಸಂಸದೆ ಸುಮಲತಾ; ಬಿಜೆಪಿ ಸೇರ್ಪಡೆ ಬಗ್ಗೆ ಏನಂದ್ರು ನೋಡಿ
Follow us
Rakesh Nayak Manchi
|

Updated on:Mar 04, 2023 | 3:29 PM

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್ (Sumalatha Ambareesh) ಬಿಜೆಪಿ ಸೇರುತ್ತಾರೆ ಎಂಬ ವಿಚಾರವಾಗಿ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿರುವ ಸಂದರ್ಭದಲ್ಲಿ ಚರ್ಚೆ ಜೋರಾಗುತ್ತಿದೆ. ಅವರು ಬಿಜೆಪಿ ಜೊತೆ ಹೆಚ್ಚು ಕಾಣಿಸಿಕೊಳ್ಳುತ್ತಿರುವುದು ಇದಕ್ಕೆ ಪುಷ್ಟಿ ನೀಡಿದೆ. ಈಗಾಗಲೇ ಕೆಲವೊಂದು ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿದ್ದ ಸುಮಲತಾ ಅವರು ಇಂದು (ಮಾರ್ಚ್ 4) ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಹಿರಿಯ ನಾಯಕ ಎಸ್​.ಎಂ.ಕೃಷ್ಣ (S.M.Krishna) ಅವರನ್ನು ಭೇಟಿಯಾಗಿದ್ದು, ಕೇಸರಿ ಪಡೆ ಸೇರುವ ಬಗ್ಗೆ ಇದ್ದ ಕುತೂಹಲ ಇನ್ನಷ್ಟು ಹೆಚ್ಚಿಸಿದಂತಾಗಿದೆ. ಆದರೆ ಈ ಬಗ್ಗೆ ಸ್ವತಃ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದು, ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವ ಹಿನ್ನಲೆ ಅವರಿಗೆ ಅಭಿನಂದನೆ ಸಲ್ಲಿಸಲು ಭೇಟಿಯಾಗಿದ್ದೆ. ಭೇಟಿ ವೇಳೆ ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚಿಸಿಲ್ಲ ಎಂದಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಎಸ್​ಎಂ ಕೃಷ್ಣ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ, ಕೃಷ್ಣ ಅವರು ನಮ್ಮ ಜಿಲ್ಲೆಯ ಹಿರಿಯ ನಾಯಕರು. ಅವರಿಗೆ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಬಂದಿದೆ. ನಾನು ಅವರನ್ನು ಭೇಟಿ ಮಾಡಿರಲಿಲ್ಲ. ಹೀಗಾಗಿ ಇವತ್ತು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಈ ವೇಳೆ ಯಾವುದೇ ರಾಜಕೀಯ ವಿಚಾರ ಮಾತಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು, ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ನಾನು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಮಂಡ್ಯದಿಂದ ಹಲವರು ಬಂದಿದ್ದಾರೆ, ಎಲ್ಲರ ಜತೆ ಚರ್ಚೆ ಮಾಡುತ್ತೇನೆ. ನನ್ನ ಲಾಭ ನಷ್ಟ ನೋಡಿ ನಿರ್ಧಾರ ಮಾಡಲ್ಲ. ನನ್ನ ಜತೆ ಇರುವವರ ಬಗ್ಗೆ ನೋಡಿಕೊಂಡೇ ನಿರ್ಧಾರ ಮಾಡಬೇಕಿದೆ. ಇನ್ನೂ ಹಲವರ ಜೊತೆ ಚರ್ಚೆ ಮಾಡಬೇಕು. ಹಿರಿಯರು, ಹಿತೈಷಿಗಳು, ಕುಟುಂಬಸ್ಥರು, ವರಿಷ್ಠರ ಜೊತೆ, ಪಕ್ಷೇತರವಾಗಿ ಸ್ಪರ್ಧಿಸುವಂತೆ ಹೇಳಿ ಬೆಂಬಲಿಸಿದ ನಾಯಕರ ಜೊತೆ ಚರ್ಚೆ ನಡೆಸಿಯೇ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ಇದನ್ನೂ ಓದಿ: ಮೋದಿ ಸಮ್ಮುಖದಲ್ಲಿ ಸುಮಲತಾ ಅಂಬರೀಶ್ ಬಿಜೆಪಿಗೆ? ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಿಯಾಕ್ಷನ್ ಇಲ್ಲಿದೆ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗೆ ಮಾರ್ಚ್ 12ರಂದು ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದು, ಅಂದು ನಡೆಯುವ ಸಮಾವೇಶದಲ್ಲಿಯೇ ಸುಮಲತಾ ಅವರು ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ನಿನ್ನೆ ಸ್ಪಷ್ಟನೆ ನೀಡಿದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಧಾನಿ ಕಾರ್ಯಕ್ರಮದಲ್ಲಿ ಯಾರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮ ಇರುವುದಿಲ್ಲ. ಸೂಕ್ತ ಸಮಯದಲ್ಲಿ ನಿಮಗೆ ಎಲ್ಲಾ ವಿಷಯ ತಿಳಿಸಲಾಗತ್ತದೆ ಎಂದು ಹೇಳಿದ್ದರು.

ಇನ್ನು ಹೆದ್ದಾರಿ ಸಿದ್ಧತೆಗಳ ಪರಿಶೀಲನೆ ನಂತರ ಪೂರ್ವಭಾವಿ ಸಭೆ ನಡೆಸಲಾಯಿತು. ನಂತರ ಮಾತನಾಡಿದ್ದ ಸುಮಲತಾ ಅವರು, ಯಾವ ಪಕ್ಷ ಸೇರಬೇಕೆಂಬ ಬಗ್ಗೆ ಜನಾಭಿಪ್ರಾಯ ಕೇಳಿ ನಂತರ ತೀರ್ಮಾನಿಸುವುದಾಗಿ ಹೇಳಿದ್ದರು. ಇದಕ್ಕೂ ಮುನ್ನ ಸುಮಲತಾ ಅವರಿಗೆ ಕಾರ್ಯಕರ್ತರು ಕೇಸರಿ ಶಾಲು ನೀಡಿ ಸ್ವಾಗತಿಸಿದರು. ಇದನ್ನು ಸುಮಲತಾ ಅವರು ಕೈಯಲ್ಲೇ ಹಿಡಿದುಕೊಂಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Sat, 4 March 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ