AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Bill ವಿದ್ಯುತ್​ ಬಿಲ್​ ದುಪ್ಪಟ್ಟು ಬರುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಕೆಜೆ ಜಾರ್ಜ್

ವಿದ್ಯುತ್​ ಬಿಲ್​ ದುಪ್ಪಟ್ಟು ಬಂದಿರುವ ಬಗ್ಗೆ ಸಾರ್ವಜನಿಕರು ಸರ್ಕಾರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಇಂಧನ ಸಚಿವ ಸ್ಪಷ್ಟನೆ ನೀಡಿದ್ದಾರೆ.

Electricity Bill ವಿದ್ಯುತ್​ ಬಿಲ್​ ದುಪ್ಪಟ್ಟು ಬರುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಕೆಜೆ ಜಾರ್ಜ್
ಇಂಧನ ಸಚಿವ ಕೆಜೆ ಜಾರ್ಜ್
Follow us
ರಮೇಶ್ ಬಿ. ಜವಳಗೇರಾ
|

Updated on: Jun 22, 2023 | 3:10 PM

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಿಲ್​ ದುಪ್ಪಟ್ಟು ಬರುತ್ತಿರುವುದರಿಂದ ಸಾರ್ಜಜನಿಕರು ರಾಜ್ಯ ಸರ್ಕಾರದ ಕಿಡಿಕಾರುತ್ತಿದ್ದಾರೆ. ಏಕಾಏಕಿ ಏಕೆ ಕರೆಂಟ್​ ಬಿಲ್​ ಡಬಲ್​ ಬಂದಿದೆ ಎಂದು ಸಾಮಾನ್ಯ ಜನರಿಗೆ ಅರ್ಥವಾಗದೇ ತಲೆಕೆಡಿಸಿಕೊಂಡಿದ್ದಾರೆ. ಕೆಲ ಕೆಲವೆಡೆ ವಿದ್ಯುತ್ ಬಿಲ್ ಲಕ್ಷಾನುಗಟ್ಟಲೇ ಬಂದಿರುವುದು ವರದಿಯಾಗುತ್ತಿವೆ. ಇನ್ನು ಬಗ್ಗೆ ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯಿಸಿದ್ದು, ​ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ ಆಗಿದ್ದಕ್ಕೆ ಕಾರಣ ನಾವಲ್ಲ. ಹಿಂದಿನ ಸರ್ಕಾರವಿದ್ದಾಗ KERC ವಿದ್ಯುತ್​ ದರ ಏರಿಕೆ ಮಾಡಿದೆ. ಏಪ್ರಿಲ್, ಮೇ ತಿಂಗಳಿನ ಬಿಲ್​ ಕಲೆಕ್ಟ್​​ ಮಾಡಲು ಹೇಳಿದ್ದಾರೆ. ಹೀಗಾಗಿ ಒಂದೇ ಬಾರಿ ಎರಡು ತಿಂಗಳ ವಿದ್ಯುತ್​ ಏರಿಕೆ ಹಿನ್ನೆಲೆಯಲ್ಲಿ ಬಿಲ್ ಜಾಸ್ತಿ ಬರುತ್ತಿದೆ.​ ಇನ್ನು ಕೆಲವೆಡೆ ಮೀಟರ್​ ಸಮಸ್ಯೆಯಿಂದ ವಿದ್ಯುತ್​ ದರ ಹೆಚ್ಚಳ ಆಗಿದೆ. ನಮ್ಮ ಸಾಫ್ಟ್​​ವೇರ್ ಹಳೆಯದು, ಹೊಸ ಸಾಫ್ಟ್​​ವೇರ್​​​ ಹಾಕಬೇಕು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಣ್ಣ ತಗಡಿನ ಶೆಡ್​, ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಲಕ್ಷಗಟ್ಟಲೇ ವಿದ್ಯುತ್ ಬಿಲ್: ಕಣ್ಣೀರಿಟ್ಟ ಅಜ್ಜಿ

ಕೆಲ ಮನೆಗಳಲ್ಲಿ ಮೀಟರ್ ಪ್ರಾಬ್ಲಮ್​ ಆಗಿದೆ. ಒಂದೇ ಬಾರಿ ಎರಡು ತಿಂಗಳಗಳ ಬಿಲ್ ಬಂದಿದೆ. ನಮ್ಮ ಸರ್ಕಾರದಿಂದ ಪ್ರಾಬ್ಲಮ್ ಆಗಿಲ್ಲ. ನಮ್ಮ ಸಾಫ್ಟವೇರ್ ಕೂಡ 12 ವರ್ಷ ಹಳೆಯದು. ತಕ್ಷಣ ಬದಲಾವಣೆ ಮಾಡುವುದು ಕಷ್ಟ. ಕೊಪ್ಪಳದಲ್ಲೂ ಕೂಡ ಇದೇ ಸಮಸ್ಯೆ ಆಗಿದೆ. ಕೊಪ್ಪಳದ ಅಜ್ಜಿ ಮನೆಗೆ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ ಮೀಟರ್ ಬಿಲ್ ಸಮಸ್ಯೆಯಿಂದ ಬಿಲ್​ ಹೆಚ್ಚಿಗೆ ಬಂದಿದೆ. ಆ ಅಜ್ಜಿ‌ ಕರೆಂಟ್ ಬಿಲ್ ಅಷ್ಟು ಕಟ್ಟಬೇಕಿಲ್ಲ. ಕರೆಂಟ್ ಬಿಲ್ಲ ಹೆಚ್ಚಳ ಆಗಿರೋದಕ್ಕೆ ಕಾರಣ ನಾವಲ್ಲ ಎಂದು ತಿಳಿಸಿದರು.

ವಿದ್ಯುತ್​ ದರ ಹೆಚ್ಚಳ ಕಾರಣ ನಾವಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೇ ವಿದ್ಯುತ್​ ದರ ಹೆಚ್ಚಳಕ್ಕೆ ಆದೇಶಿಸಿತ್ತು. ಆದ್ರೆ ಚುನಾವಣೆ ಇದ್ದದ್ದರಿಂದ ಅದನ್ನು ತಡೆಹಿಡಿಯಲಾಗಿತ್ತು ಎನ್ನುವುದು ಕಾಂಗ್ರೆಸ್ ನಾಯಕರ ವಾದ.

ಇನ್ನು ಇದಕ್ಕೆ ಬಿಜೆಪಿ ನಾಯಕರು ಸಹ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡುತ್ತಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಹಣ ಕ್ರೂಢೀಕರಣಕ್ಕೆ ಕಾಂಗ್ರೆಸ್​ ದರ ಹೆಚ್ಚಳ ಮಾಡಿದೆ ಎನ್ನುತ್ತಿದ್ದಾರೆ. ಅಲ್ಲದೇ ನಮ್ಮ ಸರ್ಕಾರ ಅವಧಿಯಲ್ಲಿನ ಎಲ್ಲಾ ಅನುದಾನ ತಡೆಹಿಡಿದಂತೆ ಈ ವಿದ್ಯುತ್ ದರ ಏರಿಕೆ ಆದೇಶವನ್ನು ತಡೆಹಿಡಿಯಬಹುದಿತ್ತು ಅಲ್ವಾ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ