ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ: ಬೊಮ್ಮಾಯಿ ಭವಿಷ್ಯ

ಲೋಕಸಭಾ ಚುನಾವಣೆ ಕಾವು ಏರ ತೊಡಗಿದೆ. ಅದರಲ್ಲೂ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ನಲ್ಲಿ ರಾಜಕೀಯ ಚಟುವಟಿಕೆಗಳು ಶುರುವಾಗಿದ್ದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ: ಬೊಮ್ಮಾಯಿ ಭವಿಷ್ಯ
ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ
Edited By:

Updated on: Jan 24, 2024 | 6:07 PM

ಬೆಂಗಳೂರು, (ಜನವರಿ 24): ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿಯೂ (Karnataka) ಬಿಜೆಪಿ ಎಲ್ಲ ಸ್ಥಾನವನ್ನು ಪಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ನಿವೃತ್ತ ಅಧಿಕಾರಿ ಆರ್. ರುದ್ರಯ್ಯ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಇಡೀ ದೇಶದ ಜನರು ಇವತ್ತು ಅತ್ಯಂತ ಭರವಸೆಯಿಂದ ನರೇಂದ್ರ ಮೋದಿಯವರ ಕಡೆ ನೋಡುತ್ತಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಬಿಜೆಪಿ, ಮೊದಿ ಅಲೆ ಇದೆ. ಈ ಬಾರಿ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ ಬರುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಇಪ್ಪತೈದು ಕ್ಷೇತ್ರಗಳಿಗಿಂತಲೂ ಹೆಚ್ಚು ಸ್ಥಾನ ಗೆಲ್ಲಲಿದೆ. ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣದಲ್ಲಿಯೂ ಅಚ್ಚರಿಯ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್​ಗೆ ಬಂಪರ್ ಆಫರ್: ಏನದು ಆಫರ್? ಇದಕ್ಕೆ ಮಾಜಿ ಸಿಎಂ ಓಕೆ ಅಂತಾರಾ?

ಎಸ್‌ಸಿ, ಎಸ್‌ಟಿ ಸಮುದಾಯದವರು ಕಾಂಗ್ರೆಸ್ ಬಗ್ಗೆ ಭ್ರಮ ನಿರಸನಗೊಂಡಿದ್ದಾರೆ. ಎಸ್‌ಸಿ, ಎಸ್‌ಟಿ ಮೀಸಲಾತಿಗೆ ಜಾತಿಗಳನ್ನು ಸೇರಿಸಿದರು. ಆದರೆ, ಮೀಸಲಾತಿ ಹೆಚ್ಚಳ ಮಾಡಲಿಲ್ಲ. ನಾನು ಸಿಎಂ ಆಗಿದ್ದಾಗ ಎಸ್‌ಸಿ ಮೀಸಲಾತಿ ಶೇ. 15 ರಿಂದ ಶೇ. 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ. 3ರಿಂದ ಶೇ. 4ಕ್ಕೆ ಹೆಚ್ಚಳ ಮಾಡಿದ್ದೇವೆ. ಇದರಿಂದ ಎಂಜಿನಿಯರಿಂಗ್ ಸೀಟ್‌ನಲ್ಲಿ ಐದು ಸಾವಿರ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ ಸಿಕ್ಕಿದೆ. ಮೆಡಿಕಲ್‌ನಲ್ಲಿಯೂ ನೂರು ವಿದ್ಯಾರ್ಥಿಗಳಿಗೆ ಹೆಚ್ಚಿಗೆ ಅವಕಾಶ ಸಿಕ್ಕಿದೆ. ಅದೇ ರೀತಿ ಕೆಪಿಎಸ್‌ಸಿಯಲ್ಲಿ ನಡೆಯುವ ನೇಮಕಾತಿಯಲ್ಲೂ ಮೀಸಲಾತಿ ಹೆಚ್ಚಳವಾಗಲಿದೆ. ಏಕೆಂದರೆ ನಮ್ಮ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಎಸ್ಸಿಪಿ, ಟಿಎಸ್‌ಪಿಯ 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಹಣ ನೀಡಿ, ದಲಿತರಿಗೆ ಅನ್ಯಾಯ ಮಾಡಿ ರಾಜಕೀಯ ಯೋಜನೆಗಳನ್ನು ಜಾರಿಗೆ ತಂದಿದೆ. ದಲಿತರ. ಹಣ ಅವರಿಗೆ ಇದ್ದಿದ್ದರೆ, ಆ ಸಮುದಾಯಗಳ ಕಾಲೋನಿಗಳು, ರಸ್ತೆಗಳ ಅಭಿವೃದ್ಧಿಗೆ ಬಳಕೆಯಾಗುತ್ತಿತ್ತು. ಕಾಂಗ್ರೆಸ್‌ನಿಂದ ದಲಿತರಿಗೆ ಆಗಿರುವ ಅನ್ಯಾಯ ಸಾಕಷ್ಟಿದೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ