AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಯಡಿಯೂರಪ್ಪಗೆ ದಿಢೀರ್ ಝಡ್ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ, ಕಾರಣವೇನು?

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ ನೀಡಿದೆ. ಏಕಾಏಕಿ ಕೇಂದ್ರ ಗೃಹ ಇಲಾಖೆಯೇ ಭದ್ರತೆ ಹೆಚ್ಚಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಯಡಿಯೂರಪ್ಪನವರಿಗೆ ಏನಾದರೂ ಬೆದರಿಕೆಗಳು ಇವೆಯೇ? ಯಡಿಯೂರಪ್ಪನವರೇ ಭದ್ರತೆ ನೀಡುವಂತೆ ಕೇಂದ್ರ ಗೃಹ ಇಲಾಖೆಗೆ ಮನವಿ ಮಾಡಿದ್ರಾ? ಎನ್ನುವ ಪ್ರಶ್ನಿಗಳು ಉದ್ಭವಿಸಿವೆ.

ಮಾಜಿ ಸಿಎಂ ಯಡಿಯೂರಪ್ಪಗೆ ದಿಢೀರ್ ಝಡ್ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ, ಕಾರಣವೇನು?
ಬಿಎಸ್ ಯಡಿಯೂರಪ್ಪ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 26, 2023 | 12:38 PM

Share

ಬೆಂಗಳೂರು, (ಅಕ್ಟೋಬರ್ 26): ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (Karnataka Ex CM BS Yediyurappa ) ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ(Z category security) ನೀಡಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ಇದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯವೇ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಕೆ ಕಾರಣವಾಗಿದೆ.

ಮೂಲಗಳ ಪ್ರಕಾರ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಕೇಂದ್ರ ಗೃಹ ಇಲಾಖೆಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ  ಕೇಂದ್ರ ಗೃಹ ಸಚಿವಾಲಯ ಈ  ಭದ್ರತೆ ಒದಗಿಸಿದೆ ಎನ್ನಲಾಗಿದೆ. ಗೃಹ ಸಚಿವಾಲಯ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರ ಉನ್ನತ ಶ್ರೇಣಿಯ  ಭದ್ರತೆ ನೀಡಿದೆ ಎನ್ನಲಾಗಿದೆ.

ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಶೀಘ್ರವೇ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಲಿದ್ದು,  ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‌ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ಹಗಲು-ರಾತ್ರಿ ದಿನದ 24 ಗಂಟೆ ಕಾಯುತ್ತಿರುತ್ತಾರೆ. ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುವುದು. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು ಇಬ್ಬರು ವೀಕ್ಷಕರನ್ನು ಶಿಫ್ಟ್‌ಗಳಲ್ಲಿ ನಿಯೋಜಿಸಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ