ಕಾಂಗ್ರೆಸ್​​ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ 15 ಕೆಜಿ ಅಕ್ಕಿ ನೀಡಲಿ: ಬಿವೈ ವಿಜಯೇಂದ್ರ

|

Updated on: Jun 18, 2023 | 3:02 PM

ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಅಕ್ಕಿ ವಿಚಾರದಲ್ಲಿ ಜಟಾಪಟಿ ನಡೆಯುತ್ತಿದ್ದು, ಪರಸ್ಪರ ಟೀಕೆಗಳನ್ನು ನಡೆಸುತ್ತಿವೆ. ಇದೀಗ, ಕಾಂಗ್ರೆಸ್ ಆರೋಪಕ್ಕೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್​​ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ 15 ಕೆಜಿ ಅಕ್ಕಿ ನೀಡಲಿ: ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ ಮತ್ತು ಸಿದ್ದರಾಮಯ್ಯ
Follow us on

ಶಿವಮೊಗ್ಗ: ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ ಯೋಜನೆಯಡಿ 5 ಕೆಜಿ ಅಕ್ಕಿ ನೀಡುತ್ತಿದೆ. ಕಾಂಗ್ರೆಸ್​​ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ 15 ಕೆಜಿ ಅಕ್ಕಿ ನೀಡಲಿ ಎಂದು ಶಿಕಾರಿಪುರ ಬಿಜೆಪಿ ಶಾಸಕರೂ ಆಗಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನೀವು ಕೊಟ್ಟ ಭರವಸೆಯನ್ನು ಮೊದಲು ಈಡೇರಿಸಿ ಎಂದರು.

ರಾಜ್ಯದಲ್ಲಿ ರೈತರು ಸಾಕಷ್ಟು ಗೋದಿ, ರಾಗಿ, ಭತ್ತ ಬೆಳೆಯುತ್ತಾರೆ. ಕಾಂಗ್ರೆಸ್ ನಾಯಕರಿಗೆ ಬೇರೆ ರಾಜ್ಯದ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ ವಿಜಯೇಂದ್ರ, ನಮ್ಮ ರಾಜ್ಯದಲ್ಲಿ ಬೆಳೆಯುವ ಅಕ್ಕಿ ಸಿಗಲಿಲ್ಲ ಅಂದರೆ ಬೇರೆ ರಾಜ್ಯದಿಂದ ಖರೀದಿ ಮಾಡಿ ಎಂದರು. ಅಲ್ಲದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ತನಿಖೆ ನಡೆಸಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಅಂತಾ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಯಾವುದೇ ತನಿಖೆಯಾದರೂ ಮಾಡಿಸಿ, ತಪ್ಪಾಗಿದ್ದರೆ ಜೈಲಿಗೆ ಕಳುಹಿಸಿ ಎಂದು ಸವಾಲು ಹಾಕಿದರು. ಇದರ ಜೊತೆಗೆ ಮೊದಲು ರಾಜ್ಯದಲ್ಲಿ ಕುಡಿಯುವ ನೀರಿನ‌ ಸಮಸ್ಯೆ ಇದೆ ಅದನ್ನು ಬಗೆಹರಿಸಿ ಅಂತ ಹೇಳಿದರು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಛತ್ತೀಸ್‌ಗಢ ಸರ್ಕಾರ ಒಪ್ಪಿದೆ: ಆಹಾರ ಇಲಾಖೆ ಸಚಿವ ಮುನಿಯಪ್ಪ

ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಈ ಬಗ್ಗೆ ಉಪದೇಶ ಮಾಡುವಷ್ಟು ದೊಡ್ಡವನಲ್ಲ. ಸಂಸದ ಪ್ರತಾಪ್ ಸಿಂಹ ಅವರು ಸೋಲಿಲ್ಲದ ಸರದಾರರು, ವಾಗ್ಮಿಗಳು. ನಾನು ಸೇರಿ ನಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು ಎಂದರು.

ರಾಜ್ಯದ ಜನರಿಗೆ ತಪ್ಪು ಕಲ್ಪನೆ ಕೊಡುವುದರಲ್ಲಿ ಕಾಂಗ್ರೆಸ್ ನಾಯಕರು ನಿಸ್ಸೀಮರು. ಹೀಗಾಗಿ ಅವರು ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಸಚಿವ ಮಹದೇವಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಆಗಲಿ. ಇದು ಡಬಲ್ ಸ್ಟೇರಿಂಗ್ ಸರಕಾರ, ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಪಡೆದ ನಂತರ ಅವರ ಪರಿಸ್ಥಿತಿ ಏನಾಗುತ್ತದೆ ಕಾದು ನೋಡಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Sun, 18 June 23