ಆವಾಸ್ ಯೋಜನೆ ಅಡಿ ಕರ್ನಾಟಕದಲ್ಲಿ ಮನೆ ನಿರ್ಮಾಣ ಗುರಿ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ವಿಜಯೇಂದ್ರ
ಕರ್ನಾಟಕಕ್ಕೆ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 7,02,731 ಗ್ರಾಮೀಣ ಮನೆಗಳನ್ನು ನಿರ್ಮಿಸುವ ಗುರಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಕುರಿತಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಬೆಂಗಳೂರು, ಜನವರಿ 18: 2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awaas Yojana) ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 7,02,731 ಗ್ರಾಮೀಣ ಮನೆಗಳನ್ನು ನಿರ್ಮಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಬಿ. ವೈ ವಿಜಯೇಂದ್ರ, ಈ ಹಿಂದೆ ನೀಡಲಾಗಿದ್ದ 2,26,175 ಮನೆಗಳ ನಿರ್ಮಾಣದ ಗುರಿಯ ಜೊತೆಗೆ ಹೆಚ್ಚುವರಿ 4,76,556 ಮನೆಗಳನ್ನು ನಿರ್ಮಿಸುವ ಉದ್ದೇಶವನ್ನು ಸಾಧಿಸಲು ಸರ್ವರಿಗೂ ಸೂರು ಕಲ್ಪಿಸುವ ಮಹತ್ವದ ಗುರಿ ತಲುಪುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
ಬಿ. ವೈ ವಿಜಯೇಂದ್ರ ಟ್ವೀಟ್
2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 7,02,731 ಗ್ರಾಮೀಣ ಮನೆಗಳನ್ನು ನಿರ್ಮಿಸುವ ಗುರಿ ನೀಡಿರುವ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ಹಾಗೂ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಮಾನ್ಯ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಜೀ ಅವರಿಗೆ ಧನ್ಯವಾದಗಳು.
— Vijayendra Yediyurappa (@BYVijayendra) January 18, 2025
ಈ ನಿರ್ಧಾರದಿಂದ ಗ್ರಾಮೀಣ ಕುಟುಂಬಗಳಿಗೆ ಅಗತ್ಯ ಸೌಕರ್ಯಗಳೊಂದಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಂಡು ನಾಡಿನ ಬಡವರ ಸ್ವಂತ ಸೂರು ಹೊಂದುವ ಕನಸುಗಳನ್ನು ಈಡೇರಿಸುತ್ತದೆ.
ಇದನ್ನೂ ಓದಿ: ಅನುದಾನ ಬಿಡುಗಡೆ ಮಾಡಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಶಾಸಕರಿಗೆ ಉಪಕಾರವೇನೂ ಮಾಡಿಲ್ಲ: ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಈ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಕರ್ನಾಟಕವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸುವಲ್ಲಿ ಶ್ರಮಿಸಲಿ. ಸದರಿ ಯೋಜನೆಯು ನಾಡಿನ 7 ಲಕ್ಷ ಬಡ ಕುಟುಂಬಗಳಿಗೆ ಸದುಪಯೋಗವಾಗಲಿದ್ದು, ಸುಸಜ್ಜಿತ ಮನೆ ಹಾಗೂ ಮೂಲಸೌಕರ್ಯಗಳೊಂದಿಗೆ ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.