AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSSಗೆ ಅಂಕುಶಕ್ಕೆ ಹೊಸ ವಿಧೇಯಕದ ಡ್ರಾಫ್ಟ್​ ರೆಡಿ: ನಿಯಮ ಮೀರಿದ್ರೆ ಏನೆಲ್ಲ ಶಿಕ್ಷೆ?

ರಾಜ್ಯದಲ್ಲಿ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರುವ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ನಡುವೆ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್ - 2025ರ ಡ್ರಾಫ್ಟ್ ಸಿದ್ಧವಾಗಿದ್ದು, ನಿಯಮ ಮೀರಿದ್ರೆ ಶಿಕ್ಷೆ ವಿಧಿಸಲು ಚಿಂತನೆ ನಡೆಸಲಾಗಿದೆ.

RSSಗೆ ಅಂಕುಶಕ್ಕೆ ಹೊಸ ವಿಧೇಯಕದ ಡ್ರಾಫ್ಟ್​ ರೆಡಿ: ನಿಯಮ ಮೀರಿದ್ರೆ ಏನೆಲ್ಲ ಶಿಕ್ಷೆ?
RSSಗೆ ಅಂಕುಶ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 16, 2025 | 1:04 PM

Share

ಬೆಂಗಳೂರು, ಅಕ್ಟೋಬರ್​ 16: ತೀವ್ರ ಆಕ್ಷೇಪದ ನಡುವೆಯೂ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರುವ ವಿಚಾರ ಸಂಬಂಧ ಹೊಸ ವಿಧೇಯಕ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಕಾನೂನು ಇಲಾಖೆಯಿಂದ ಈಗಾಗಲೇ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್ – 2025ರ ಡ್ರಾಫ್ಟ್ ಸಿದ್ಧವಾಗಿದ್ದು, ನಿಯಮ ಮೀರಿ RSS ಚಟುವಟಿಕೆಗಳನ್ನು ನಡೆಸಿದರೆ ಶಿಕ್ಷೆ ವಿಧಿಸಲು ಚಿಂತನೆ ನಡೆದಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರ ಚರ್ಚೆಯಾಗಲಿದೆ.

ಹೊಸ ವಿಧೇಯಕದಲ್ಲಿ ಏನಿದೆ?

  • ಯಾವುದೇ ಧಾರ್ಮಿಕ, ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂಬ ನಿಯಮ
  • ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ ನೀಡುವ ಅಧಿಕಾರ
  • ನಿಯಮ ಮೀರಿ ಚಟುವಟಿಕೆ ನಡೆಸಿದರೆ ಎರಡು ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ
  • ಎರಡನೇ ಬಾರಿ ನಿಯಮ ಮೀರಿದ್ರೆ ಮೂರು ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
  • ಇದಕ್ಕೂ ಮೀರಿ ಮುಂದುವರೆದರೆ ಪ್ರತೀ ದಿನ 5 ಸಾವಿರ ರೂ. ದಂಡ ವಿಧಿಸುವ ನಿಯಮ

ಇದನ್ನೂ ಓದಿ: ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ನೌಕರರಿಗೆ ಕಡಿವಾಣ ಹಾಕಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ

‘ಪ್ರಿಯಾಂಕ್ ಖರ್ಗೆ ಬಲಿಪಶು’

RSS ಚಟುವಟಿಕೆಯಲ್ಲಿ ಭಾಗಿಯಾಗುವ ನೌಕರರಿಗೆ ಕಡಿವಾಣ ವಿಚಾರವಾಗಿ ವಿಪಕ್ಷ ನಾಯಕ ಆರ್​.ಅಶೋಕ್​ ಕಿಡಿ ಕಾರಿದ್ದಾರೆ. ಈ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಯನ್ನು ಬಲಿಪಶು ಮಾಡಲಾಗುತ್ತಿದ್ದು, ಇದು ಸಿಎಂ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ನಾಟಕ. ಪ್ರಿಯಾಂಕ್ ಪತ್ರದ ಆಧಾರದಲ್ಲಿ ನಾನು ಕೂಡ ಸರ್ಕಾರಿ ನೌಕರ. ಮೊನ್ನೆಯಷ್ಟೇ ನಾನು ಗಣವೇಷಧಾರಿಯಾಗಿ ಹೋಗಿದ್ದೇನೆ. ನನ್ನನ್ನು ಯಾವಾಗ ಕಳುಹಿಸುತ್ತೀಯಪ್ಪ, ಆ ತಾಕತ್ ಇದೆಯಾ? ಎಂದು ಅಶೋಕ್​ ಪ್ರಶ್ನಿಸಿದ್ದಾರೆ.

‘ಐ ಲವ್ RSS’ ಅಭಿಯಾನ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ನಿರ್ಬಂಧ ವಿಧಿಸುವ ಸರ್ಕಾರದ ಚಿಂತನ ವಿರೋಧಿಸಿ ಹಿಂದೂ ಪರ ಕಾರ್ಯಕರ್ತರಿಂದ ಮೈಸೂರಿನ ಚೆಲುವಾಂಬ ಪಾರ್ಕ್​ ನಲ್ಲಿ ‘ಐ ಲವ್ RSS’ ಅಭಿಯಾನ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Thu, 16 October 25

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!