ವಕ್ಫ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್​ ಹಿಂಪಡೆಯಲು ಡಿಸಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದ ಪರಮೇಶ್ವರ್​

ಕರ್ನಾಟಕದ ಮುಖ್ಯಮಂತ್ರಿಗಳು ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡದಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ನೀಡಲಾಗಿರುವ ನೋಟಿಸ್‌ಗಳನ್ನು ವಾಪಸ್ ಪಡೆಯುವಂತೆ ಸೂಚಿಸಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಕಂದಾಯ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಭೂ ವಿವಾದಗಳನ್ನು ಬಗೆಹರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

ವಕ್ಫ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್​ ಹಿಂಪಡೆಯಲು ಡಿಸಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದ ಪರಮೇಶ್ವರ್​
ಜಿ ಪರಮೇಶ್ವರ್​
Follow us
ವಿವೇಕ ಬಿರಾದಾರ
|

Updated on:Nov 02, 2024 | 11:40 AM

ಬೆಂಗಳೂರು, ನವೆಂಬರ್​ 02: ವಕ್ಫ್​ ಬೋರ್ಡ್ (Waqf Board) ಆಸ್ತಿ ವಿಚಾರವಾಗಿ ರೈತರಿಗೆ (Farmers) ನೋಟಿಸ್ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್​​ ವಾಪಸ್ ಪಡೆಯಿರಿ ಎಂದಿದ್ದಾರೆ. ತುಮಕೂರಿನಲ್ಲಿ ಯಾರಿಗೂ ವಕ್ಫ್​​​ ನೋಟಿಸ್ ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಇದು ಮುಗಿದು ಹೋದ ಅಧ್ಯಾಯ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತೆ ಗೊತ್ತಿಲ್ಲ. ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ ವಕ್ಫ್ ದಾಖಲಾತಿಯಲ್ಲಿ ಒಂದೇ ಇದ್ದರೆ ಮಾತ್ರ ಯಾವುದೇ ಗೊಂದಲ ಆಗುವುದಿಲ್ಲ. ಅಂತಿಮವಾಗಿ ಕಂದಾಯ ದಾಖಲಾತಿ ಮುಖ್ಯ. ಅದರಲ್ಲಿ ಏನಿದೆಯೋ ಅದರಂತೆ ದಾಖಲಾಗಲಿದೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವ ಕೆಲಸ ಮಾಡಲ್ಲ ಎಂದು ಭರವಸೆ ನೀಡಿದರು.

ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ರಾಜಕೀಯ ಪುಡಾರಿ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಪುಡಾರಿ ಅಂದಿದ್ದು ಗೊತ್ತಿಲ್ಲ. ಪುಡಾರಿ ಅನ್ನೋದು ಸರಿನಾ? ತಪ್ಪಾ ಎಂದು ನನಗೆ ಗೊತ್ತಿಲ್ಲ. ನಮ್ಮನ್ನೂ ಪುಡಾರಿ ಅನ್ನುತ್ತಾರೆ. ಪುಡಾರಿ ಶಬ್ದ ಬಳಸುವುದು ಸರಿನಾ? ಎಂದು ಪ್ರಶ್ನಿಸಿದರು.

ಶಕ್ತಿ ಯೋಜನೆ ಪರಿಷ್ಕರಣೆ ಮಾಡುತ್ತೇವೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲ‌ ಇಲ್ಲ, ಅನುಷ್ಠಾನ ಆಗುತ್ತಿದೆ. ಆ ಕುರಿತು ಏನೇ ಚರ್ಚೆ ಆದರೂ ಸಚಿವ ಸಂಪುಟಕ್ಕೆ ಬರಬೇಕು. ನಾವು ಈ ಬಗ್ಗೆ ಕ್ಯಾಬಿನೆಟ್​ನಲ್ಲಿ ಯಾವುದೇ ಚರ್ಚೆ ಮಾಡಿಲ್ಲ. ಗ್ಯಾರಂಟಿ ಮುಂದುವರಿಸುತ್ತೇವೆ ಎಂದು ಪದೇಪದೆ ಹೇಳಿದ್ದಾರೆ. ಮಲ್ಲಿಕಾರ್ಜುನ್​ ಖರ್ಗೆ ಅವರು ಡಿಕೆ ಶಿವಕುಮಾರ್​ ಅವರ ಮಾತು ಉಲ್ಲೇಖಿಸಿ ಹೇಳಿದ್ದಾರೆ. ಅದಕ್ಕೆ‌ ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ ಎಂದರು.

ಪ್ರಧಾನಿ ಮೋದಿ ಅವರೇ ನೀವು ಕೊಟ್ಟ ಭರವಸೆ ಅನುಷ್ಠಾನ ಆಯಿತಾ? 2 ಕೋಟಿ ಉದ್ಯೋಗ ಕೊಡುತ್ತೇನೆ ಅಂದಿದ್ರಿ, ಜಾರಿ ಆಯ್ತಾ? ಪ್ರತಿಯೊಬ್ಬರ ವರಮಾನ ದ್ವಿಗುಣವಾಯ್ತಾ? ತಾವು ಕೊಟ್ಟ ಭರವಸೆ ಅನುಷ್ಠಾನ ಮಾಡಿಲ್ಲ. ನಾವು ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆ ಇಲ್ಲ. ಡಿಕೆ ಶಿವಕುಮಾರ್​ ಅವರು ಸಹ ಗ್ಯಾರಂಟಿಗಳನ್ನು ನಿಲ್ಲಿಸ್ತೇವೆ ಅಂದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸೂಚನೆ ಮೇರೆಗೆ ವಕ್ಫ್​ ಅದಾಲತ್ ಮಾಡಿದ್ದೇನೆ: ಜಮೀರ್ ಸ್ಪಷ್ಟನೆ

ಒಂದು ವೇಳೆ ಆರೀತಿ ಏನಾದರು ತೀರ್ಮಾನಗಳನ್ನು ತೆಗೆದುಕೊಳ್ಳುವುದಾದರೆ, ಸಿಎಂ, ಡಿಸಿಎಂ ಆಗಲಿ ಒಬ್ಬೊಬ್ಬರೇ ತೀರ್ಮಾನ ತಗೊಳ್ಳಲ್ಲ. ಅದನ್ನು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ, ಸಾಧಕ‌-ಬಾಧಕ ಚರ್ಚೆ ಮಾಡಿ ತೀರ್ಮಾನ ಆಗುತ್ತೆ. ಆದರೆ, ಗ್ಯಾರಂಟಿಗಳನ್ನು ನಿಲ್ಲಿಸುವ ಸ್ಥಿತಿಗೆ ನಾವು ಬಂದಿಲ್ಲ. ಗ್ಯಾರಂಟಿಗಳನ್ನು ನಿಲ್ಲಿಸುವ ಬಗ್ಗೆ ಪಕ್ಷದ ವೇದಿಕೆ, ಸಂಪುಟ ಸಭೆ, ಹೊರಗಡೆ ಎಲ್ಲೂ ಈ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಗ್ಯಾರಂಟಿಗಳ ಬಗ್ಗೆ ಸಚಿವರು, ಶಾಸಕರು ಸಲಹೆ ಕೊಡುತ್ತಾರೆ. ಹಣದ ಹೊರೆ ಜಾಸ್ತಿಯಾಯ್ತು ಕಮ್ಮಿ‌ ಮಾಡಿ ಅಂತಾರೆ. 2 ಸಾವಿರ ರೂ .ಎಲ್ಲರಿಗೂ ಕೊಟ್ಟಿರುವ ಬಗ್ಗೆನೂ ಶಾಸಕರು ಮಾತಾಡುತ್ತಾರೆ. ಗ್ಯಾರಂಟಿಗಳ ಪರಿಣಾಮ, ಆರ್ಥಿಕ ಹೊರೆ ಬಗ್ಗೆ ನಮಗೂ ಅರಿವಿದೆ. ಸಚಿವರು, ಶಾಸಕರ ಸಲಹೆಗಳನ್ನು ಹಾಗೇ ಇಟ್ಕೊಂಡಿದ್ದೇವೆ. ಆದರೆ ಬಿಜೆಪಿಯವರು ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆಗೆ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಕಾಶ್ಮೀರದಲ್ಲೂ ಹೋಗಿ ಮೋದಿಯವರು ಸಿದ್ದರಾಮಯ್ಯ ಬಗ್ಗೆ, ಮುಡಾ ಬಗ್ಗೆ ಮಾತಾಡುತ್ತಾರೆ. ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:39 am, Sat, 2 November 24

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ