ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭಕೋರಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

| Updated By: Rakesh Nayak Manchi

Updated on: Sep 17, 2022 | 2:11 PM

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಕನ್ನಡದಲ್ಲೇ ಶುಭಾಶಯಕೋರಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭಕೋರಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಕನ್ನಡದಲ್ಲೇ ಶುಭಕೋರಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
Follow us on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ (Narendra Modi Birthday)ಕ್ಕೆ ಸ್ವಪಕ್ಷದ ನಾಯಕರು, ದೇಶದರ ಜನರು, ವಿಪಕ್ಷಗಳ ನಾಯಕರು ಸೇರಿದಂತೆ ಗಣ್ಯಾತಿ ಗಣ್ಯರು ಶುಭಕೋರಿದಿದ್ದಾರೆ. ಅದರಂತೆ  ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thawar Chand Gehlot) ಅವರು ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ.

ಪ್ರಧಾನಿಗೆ ಟ್ವೀಟ್ ಮೂಲಕ ಶುಭಕೋರಿದ ರಾಜ್ಯಪಾಲ ಗೆಹ್ಲೋಟ್, “ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ದೇಶವು ಬೆಳೆಯುತ್ತಲೇ ಇರಲಿ. ಇನ್ನೂ ಹಲವು ವರ್ಷಗಳ ಕಾಲ ದೇಶಕ್ಕೆ ಸೇವೆ ಸಲ್ಲಿಸಲು ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

ದೇಶ‌ ಕಂಡ ಅಪ್ರತಿಮ ರಾಜಕಾರಣಿ ಮೋದಿ

ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭಕೋರಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  (Pralhad Joshi), ಪ್ರಧಾನಿ ನರೇಂದ್ರ ಮೋದಿ ದೇಶ‌ ಕಂಡ ಅಪ್ರತಿಮ ರಾಜಕಾರಣಿಯಾಗಿದ್ದಾರೆ. ದೇಶದ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದಾರೆ. ಮೋದಿಯವರು ಸ್ವಚ್ಛ, ಸುಸ್ಥಿರ ಸಮರ್ಥ ಆಡಳಿತ ಕೊಟ್ಟವರು. ಏಕಕಾಲಕ್ಕೆ‌ ಕಠೋರ ನಿರ್ಣಯಗಳನ್ನು ತೆಗೆದುಕೊಂಡವರು. ರಾಜಕೀಯವಾಗಿ ನಮ್ಮ ಹಿತಕ್ಕೆ ಇಲ್ಲದಾಗಲೂ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಭ್ರಷ್ಟಾಚಾರರಹಿತ ಆಡಳಿತ ಕೊಟ್ಟವರು ಎಂದು ಹೇಳಿದರು.

ಧಾರವಾಡದಲ್ಲಿ ಹೇಳಿಕೆ ನೀಡಿದ ಅವರು, ಮೋದಿ ಜನ್ಮದಿನದಂದು ಅನೇಕರು ವಿವಿಧ ಕಾರ್ಯಕ್ರಮ ಮಾಡುತ್ತಿದ್ದಾರೆ. ಜನನಾಯಕನನ್ನ ಜನರು ಹೇಗೆ ಸ್ವೀಕಾರ ಮಾಡುತ್ತಾರೆ ಎಂಬುವುದಕ್ಕೆ ಇದು ಉದಾಹರಣೆಯಾಗಿದೆ. ಕರ್ನಾಟಕದ ಪರವಾಗಿ ಪ್ರಧಾನಿ ಮೋದಿಯವರಿಗೆ ಅಭಿನಂದನೆ. ನೂರು ವರ್ಷಕ್ಕೂ ಹೆಚ್ಚು ಕಾಲ ಮೋದಿಯವರು ಬಾಳಲಿ. ಆ ಮೂಲಕ ದೇಶಕ್ಕೆ ನೇತೃತ್ವ ಕೊಡಲಿ ಎಂದು ಹಾರೈಸುತ್ತೇನೆ ಎಂದರು.

ಹಲವು ವರ್ಷಗಳ ಕಾಲ ಕರ್ತವ್ಯದ ಹಾದಿಯಲ್ಲಿ ನಡೆಯಲಿ

ಮೋದಿ ಜನ್ಮದಿನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ (H.D.Devegowda) ಅವರು ಕೂಡ ಶುಭಕೋರಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ನಾನು ನನ್ನ ಆತ್ಮೀಯ  ಶುಭಾಶಯಗಳನ್ನು ಕಳುಹಿಸುತ್ತೇನೆ. ನಮ್ಮ ಶ್ರೇಷ್ಠ ಮತ್ತು ವೈವಿಧ್ಯಮಯ ರಾಷ್ಟ್ರದ ಸೇವೆಯಲ್ಲಿ ಇನ್ನೂ ಹಲವು ವರ್ಷಗಳ ಕಾಲ ಕರ್ತವ್ಯದ ಹಾದಿಯಲ್ಲಿ ನಡೆಯಲು ದೇವರು ಅವರಿಗೆ ಶಕ್ತಿಯನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:10 pm, Sat, 17 September 22