ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಂತೂ ಇಲ್ಲ; ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಏನೇನು?

Karnataka BJP: ಮೂಲ ಬಿಜೆಪಿ ಸಚಿವರ ಕೈಬಿಡುವ ಬಗ್ಗೆ ವರಿಷ್ಠರ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಸಂಪುಟ ಪುನಾರಚನೆ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸ್ಥಾನ ಸಿಗುವುದು ಬಹುತೇಕ ನಿಶ್ಚಿತ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಂತೂ ಇಲ್ಲ; ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಏನೇನು?
ಬಿಜೆಪಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on:Jan 10, 2022 | 4:19 PM

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯದಲ್ಲಂತೂ ನಡೆಯುವುದಿಲ್ಲ ಎಂಬ ಬಗ್ಗೆ ತಿಳಿದುಬಂದಿದೆ. ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 5 ರಾಜ್ಯಗಳ ವಿಧಾನಸಭಾ ಚುನಾವಣೆ ಬಳಿಕವೇ ಸಂಪುಟ ಪುನಾರಚನೆಗೆ ಚಾಲನೆ ನೀಡಲಾಗುವುದು. ಪಂಚರಾಜ್ಯಗಳ ಚುನಾವಣೆ ನಡೆದ ಬಳಿಕವಷ್ಟೇ ಕರ್ನಾಟಕ ರಾಜ್ಯದ ಚಟುವಟಿಕೆಗಳಿಗೆ ಚಾಲನೆ ಎಂದು ಹೈಕಮಾಂಡ್ ಹೇಳಿದೆ ಎಂಬ ಬಗ್ಗೆ ತಿಳಿದುಬಂದಿದೆ. ಮಾರ್ಚ್ 10ರವರೆಗೂ ಯಾವುದೇ ಚರ್ಚೆ ಇಲ್ಲ ಎಂದು ತಿಳಿಸಲಾಗಿದೆ.

ರಾಜ್ಯ ಬಿಜೆಪಿ ಘಟಕಕ್ಕೆ ಶುಕ್ರವಾರ ಹೈಕಮಾಂಡ್ ಈ ವಿಚಾರ ಸ್ಪಷ್ಟಪಡಿಸಿದೆ ಎಂದು ತಿಳಿದುಬಂದಿದೆ. ಖಾಲಿ ಇರುವ 4 ಸಚಿವ ಸ್ಥಾನಗಳ ಜೊತೆ, ಹಾಲಿ ಸಚಿವರ ಪೈಕಿ 2-3 ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಲಸಿಗ ಸಚಿವರ ಬದಲಾಗಿ ಮೂಲ ಬಿಜೆಪಿ ಸಚಿವರನ್ನು ಕೈಬಿಡುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಮೂಲ ಬಿಜೆಪಿ ಸಚಿವರ ಕೈಬಿಡುವ ಬಗ್ಗೆ ವರಿಷ್ಠರ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಸಂಪುಟ ಪುನಾರಚನೆ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸ್ಥಾನ ಸಿಗುವುದು ಬಹುತೇಕ ನಿಶ್ಚಿತ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ನಾಳೆಯಿಂದ 3 ದಿನ ಸಿಎಂ ಕಾಮಗಾರಿಗಳ ಪರಿಶೀಲನಾ ಸಭೆ

ನಾಳೆಯಿಂದ 3 ದಿನ ಸಿಎಂ ಬಸವರಾಜ ಬೊಮ್ಮಾಯಿ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬೆಂಗಳೂರು ಜಲ ಮಂಡಳಿಯ ಕಾವೇರಿ ಕಾಮಗಾರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಯಶವಂತಪುರ, ಗೋವಿಂದರಾಜನಗರ, ಬೊಮ್ಮನಹಳ್ಳಿ, ಮಲ್ಲೇಶ್ವರಂ, ಕೆ.ಆರ್. ಪುರಂ, ಮಹದೇವಪುರ, ಬಸವನಗುಡಿ, ಚಿಕ್ಕಪೇಟೆ, ಸಿ.ವಿ. ರಾಮನ್​​ನಗರ ಕ್ಷೇತ್ರದ ಕಾಮಗಾರಿ ಪರಿಶೀಲನೆ ಮಾಡಲಿದ್ದಾರೆ.

ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ‌ಆರೋಗ್ಯ ಸಚಿವ ಡಾ. ಸುಧಾಕರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಯೋಜನಾ ಇಲಾಖೆ ಎಸಿಎಸ್ ಶಾಲಿನಿ ರಜನೀಶ್, ಡಿಪಿಎಆರ್ ಕಾರ್ಯದರ್ಶಿ ಹೇಮಲತಾ, ಡಿಪಿಎಆರ್ (ಆಡಳಿತ ಸುಧಾರಣೆ) ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ತೊರೆದ ಗೋವಾ ಸಚಿವ ಮೈಕೆಲ್ ಲೋಬೊ, ಕಾಂಗ್ರೆಸ್ ಸೇರುವ ನಿರೀಕ್ಷೆ

ಇದನ್ನೂ ಓದಿ: Assembly Elections 2022: ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ: ಪಂಚರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

Published On - 4:19 pm, Mon, 10 January 22

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ