ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು: ಆದೇಶ ತಡೆಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಆಯ್ಕೆ ಅಸಿಂಧು ಪ್ರಶ್ನಿಸಿ ಪ್ರಜ್ವಲ್​ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದು, ಅದಕ್ಕೂ ಮುನ್ನ ಪ್ರಜ್ವಲ್​ ರೇವಣ್ಣ ಆಯ್ಕೆ ಅಸಿಂಧು ಆದೇಶವನ್ನು ತಡೆಹಿಡಿಯುವಂತೆ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ಆದ್ರೆ, ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.

ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು: ಆದೇಶ ತಡೆಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್, ಪ್ರಜ್ವಲ್ ರೇವಣ್ಣ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Sep 05, 2023 | 3:36 PM

ಬೆಂಗಳೂರು (ಸೆಪ್ಟೆಂಬರ್, 05): ಪ್ರಜ್ವಲ್ ರೇವಣ್ಣ (Prajwal Revanna) ಅವರ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಮುಂದೂಡಿದೆ. ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಬೇಕಿದೆ. ಹೀಗಾಗಿ ಅಲ್ಲಿಯವರಿಗೆ ಅಸಿಂಧು ತೀರ್ಪು ತಡೆಹಿಡಿಯುವಂತೆ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರು  ಹೈಕೋರ್ಟ್​ಗೆ ಮನವಿ ಮಾಡಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ. ಅಲ್ಲದೇ ಅಸಿಂದು ಆದೇಶಕ್ಕೆ ತಡೆಕೋರಿ ಸಲ್ಲಿಸಿರುವ ಪ್ರಜ್ವಲ್​ ರೇವಣ್ಣ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೇವರಾಜೇಗೌಡ ಪರ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ.

ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 01ರಂದಯ ಆದೇಶ ಹೊರಡಿಸಿತ್ತು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕೋರ್ಟ್ ಈ ಆದೇಶ ನೀಡಿತ್ತು. ಇದೀಗ ಪ್ರಜ್ವಲ್​ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆಹಿಡಿಯುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್ MP ಪ್ರಜ್ವಲ್​ ರೇವಣ್ಣಗೆ ಬಿಗ್ ಶಾಕ್​​​, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

ಆದ್ರೆ, ಇದಕ್ಕೆ ಹೈಕೋರ್ಟ್ ಆಕ್ಷೇಪ ಸಲ್ಲಿಸಲು ದೇವರಾಜೇಗೌಡ ಪರ ವಕೀಲರಿಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:29 pm, Tue, 5 September 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್