ಬೆಂಗಳೂರು (ಸೆಪ್ಟೆಂಬರ್, 05): ಪ್ರಜ್ವಲ್ ರೇವಣ್ಣ (Prajwal Revanna) ಅವರ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಮುಂದೂಡಿದೆ. ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ಬೇಕಿದೆ. ಹೀಗಾಗಿ ಅಲ್ಲಿಯವರಿಗೆ ಅಸಿಂಧು ತೀರ್ಪು ತಡೆಹಿಡಿಯುವಂತೆ ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ್ ಹೊಳ್ಳ ಅವರು ಹೈಕೋರ್ಟ್ಗೆ ಮನವಿ ಮಾಡಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ. ಅಲ್ಲದೇ ಅಸಿಂದು ಆದೇಶಕ್ಕೆ ತಡೆಕೋರಿ ಸಲ್ಲಿಸಿರುವ ಪ್ರಜ್ವಲ್ ರೇವಣ್ಣ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೇವರಾಜೇಗೌಡ ಪರ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ.
ಜೆಡಿಎಸ್ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 01ರಂದಯ ಆದೇಶ ಹೊರಡಿಸಿತ್ತು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕೋರ್ಟ್ ಈ ಆದೇಶ ನೀಡಿತ್ತು. ಇದೀಗ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿಯವರೆಗೆ ಅಸಿಂಧು ಆದೇಶಕ್ಕೆ ತಡೆಹಿಡಿಯುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಜೆಡಿಎಸ್ MP ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ
ಆದ್ರೆ, ಇದಕ್ಕೆ ಹೈಕೋರ್ಟ್ ಆಕ್ಷೇಪ ಸಲ್ಲಿಸಲು ದೇವರಾಜೇಗೌಡ ಪರ ವಕೀಲರಿಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 3:29 pm, Tue, 5 September 23