AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್​: ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಫಿರ್ಯಾದಿ ಕೇಶವ ಪ್ರಸಾದ್ ಅವರಿಗೆ ನೋಟಿಸ್ ಜಾರಿ ಮಾಡಲು ಕೋರ್ಟ್ ಆದೇಶಿಸಿದೆ. ಸುದ್ದಿ ವರದಿಗಳನ್ನು ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್​: ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್
ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್​: ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್
Ramesha M
| Edited By: |

Updated on: Jan 17, 2025 | 6:06 PM

Share

ಬೆಂಗಳೂರು, ಜನವರಿ 17: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಕರ್ನಾಟಕ ಹೈಕೋರ್ಟ್​ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ. ಆ ಮೂಲಕ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮಧ್ಯಂತರ ತಡೆ ನೀಡಿ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಪೀಠ ಶುಕ್ರವಾರ ಆದೇಶ ಹೊರಡಿಸಿದೆ.

ರಾಹುಲ್ ಗಾಂಧಿ ತಮ್ಮ ವಿರುದ್ಧದ ಕೇಸ್ ರದ್ದು ಕೋರಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸುದ್ದಿ ಪತ್ರಿಕೆಗಳಲ್ಲಿ ಬಂದಿದ್ದನ್ನೇ ಷೇರ್ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಿದ್ದ ಬಿಜೆಪಿಯ ಕೇಶವ ಪ್ರಸಾದ್​​ರಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣ: ರಾಹುಲ್​ ಗಾಂಧಿಗೆ ಜಾಮೀನು

ಬಿಜೆಪಿ ಸರ್ಕಾರದ ವಿರುದ್ಧ ಕರಪ್ಶನ್ ರೇಟ್ ಕಾರ್ಡ್ ಜಾಹೀರಾತನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.  ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಸಮರ ಸಾರಿತ್ತು. ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು. 2024 ರ ಜೂನ್ 1ರಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ಗೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್​ ನಾಯಕರು ವಿಚಾರಣೆ ಎದುರಿಸಿದ್ದರು.

ಇದನ್ನೂ ಓದಿ: ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್: ಸಿಎಂ, ಡಿಸಿಎಂಗೆ ಜಾಮೀನು ನೀಡಿದ 42ನೇ ಎಸಿಎಂಎಂ ಕೋರ್ಟ್

ಬಳಿಕ ರಾಹುಲ್ ಗಾಂಧಿ ಅರ್ಜಿಯನ್ನ ಪುರಸ್ಕರಿಸಿದ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ವಿಚಾರಣೆ ಮುಂದೂಡಿತ್ತು. ಮಾಜಿ ಸಂಸದ ಡಿ.ಕೆ ಸುರೇಶ್‌, ರಾಹುಲ್‌ ಗಾಂಧಿಗೆ 50 ಸಾವಿರ ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿ, ಜಾಮೀನು ಕೊಡಿಸಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯವು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಜಾಮೀನು ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?