AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಬ್ಯಾಂಕ್​ಗೆ ಹೆದರಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಬಾರದ ಕಾಂಗ್ರೆಸ್ ನಾಯಕರು: ಅಮಿತ್ ಶಾ ವಾಗ್ದಾಳಿ

ಲೋಕಸಭೆ ಚುನಾವಣೆ ಸಿದ್ಧತೆಗೆ ಚುರುಕುಮುಟ್ಟಿಸಲು ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜತೆ ಸಭೆ ನಡೆಸಿದರು. ನಂತರ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮತಬ್ಯಾಂಕ್​ಗೆ ಹೆದರಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಬಾರದ ಕಾಂಗ್ರೆಸ್ ನಾಯಕರು: ಅಮಿತ್ ಶಾ ವಾಗ್ದಾಳಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಅಮಿತ್ ಶಾ
ಕಿರಣ್​ ಹನಿಯಡ್ಕ
| Edited By: |

Updated on:Apr 02, 2024 | 4:48 PM

Share

ಬೆಂಗಳೂರು, ಏಪ್ರಿಲ್ 2: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಾಂಗ್ರೆಸ್ (Congress) ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರಿಗೂ ಆಹ್ವಾನವಿತ್ತು. ಆದರೆ, ಮತ ಬ್ಯಾಂಕ್ ಹೋಗಿ ಬಿಡುತ್ತದೆ ಎಂಬ ಭಯದಿಂದ ಅವರು ಬರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ (BJP) ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಹಾಗೂ ಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯುಪಿಎ ಅಧಿಕಾರದಲ್ಲಿದ್ದಾಗ ದೇಶದ ಆರ್ಥಿಕತೆ 11 ನೇ ಸ್ಥಾನದಲ್ಲಿ ಇತ್ತು, ಈಗ 5 ನೇ ಸ್ಥಾನಕ್ಕೆ ಬಂದಿದೆ. ಈಗ ಮತ್ತೆ ಮೋದಿ ಗೆಲ್ಲಿಸಿದರೆ ದೇಶ 3 ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅವರು ಪ್ರತಿಪಾದಿಸಿದರು.

ಯುಪಿಎ ಇದ್ದಾಗ ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗುತ್ತಿದ್ದರು: ಶಾ

ದೇಶದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗುತ್ತಿದ್ದರು. ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ಮೌನವಾಗಿ ಇರುತ್ತಿದ್ದರು. ಆಗ ಏನಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಲಿ ಎಂದು ಅಮಿತ್ ಶಾ ಸವಾಲು ಹಾಕಿದರು. ಈಗ ಕಾಶ್ಮೀರದಲ್ಲಿ ಒಂದು ಸಣ್ಣ ಕಲ್ಲು ಸಹ ಬಿಸಾಡುವುದಿಲ್ಲ. ಹತ್ತು ವರ್ಷ ಯುಪಿಎ ಅಧಿಕಾರದಲ್ಲಿದ್ದಾಗ ಏನಾಗುತ್ತಿತ್ತು ಎಂಬುದರ ಬಗ್ಗೆ ಸಿದ್ದರಾಮಯ್ಯ ಉತ್ತರಿಸಲಿ. ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋದಾಗ ಮನಮೋಹನ್ ಸಿಂಗ್ ಮೌನವಾಗಿರುತ್ತಿದ್ದರು. ಮೋದಿ ಪಾಕಿಸ್ತಾನದ ಒಳಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿಸಿದರು. ಇದು ನಮಗೂ ಅವರಿಗೂ ಇರುವ ವ್ಯತ್ಯಾಸ ಎಂದು ಗೃಹ ಸಚಿವರು ಹೇಳಿದರು.

ಭ್ರಷ್ಟಾಚಾರ ಮಾಡುವವರು ಜನಸೇವೆ ಮಾಡುವುದಿಲ್ಲ. ಬಡವರಿಗೆ ಹೊಸ ಜೀವನೋತ್ಸಾಹ ತುಂಬಿದವರು ಪ್ರಧಾನಿ ನರೇಂದ್ರ ಮೋದಿ ಎಂದು ಶಾ ಹೇಳಿದರು.

ಭರವಸೆ ಈಡೇರಿಸಿ ಮತ ಕೇಳುತ್ತಿದ್ದೇವೆ: ಶಾ

ಮೋದಿ ಸರ್ಕಾರದಲ್ಲಿ ಎಲ್ಲ ವರ್ಗದವರಿಗೂ ಅನುಕೂಲವಾಗಿದೆ. ಹಿಂದಿನ ಪ್ರಣಾಳಿಕೆಯ ಭರವಸೆ ಈಡೇರಿಸಿ ಮತ ಕೇಳಲು ಬಂದಿದ್ದೇವೆ. ಆರ್ಟಿಕಲ್ 370 ರದ್ದಾದರೆ ರಕ್ತ ಹರಿಯಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿಯವರೇ, ಇದು ಮೋದಿ ಸರ್ಕಾರ. ಆ ರೀತಿ ಏನೂ ನಡೆಯಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿದ್ದೇವೆ. ಮತ ಬ್ಯಾಂಕ್​ಗಾಗಿ ಕಾಂಗ್ರೆಸ್​​ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ: ಲೋಕಸಭೆ ಗೆಲ್ಲಲು ಅಮಿತ್ ಶಾ ಮಾಸ್ಟರ್ ಪ್ಲ್ಯಾನ್, ಬಿಜೆಪಿ ನಾಯಕರಿಗೆ ಕೊಟ್ಟ ಸಲಹೆಗಳು ಇಲ್ಲಿವೆ

ಇದಕ್ಕೂ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜತೆ ಸಭೆ ನಡೆಸಿದ್ದ ಅಮಿತ್ ಶಾ, ಲೋಕಸಭೆ ಚುನಾವಣೆ ಗೆಲ್ಲುವುದಕ್ಕಾಗಿ ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಹಿಂದುಳಿದ ವರ್ಗಗಳ ಮತ ಕ್ರೂಡೀಕರಣ ಸೇರಿ ಹಲವು ಸಲಹೆಗಳನ್ನು ಹಾಗೂ ನಿರ್ದೇಶನಗಳನ್ನು ಶಾ ರಾಜ್ಯ ಬಿಜೆಪಿ, ಜೆಡಿಎಸ್ ನಾಯಕರಿಗೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:40 pm, Tue, 2 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ