ವೀರ ಸಾವರ್ಕರ್ ವಿಚಾರದಲ್ಲಿ ದ್ವಂದ್ವ ನಿಲುವು ತಾಳಿದ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ
ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ವೀರ ಸಾವರ್ಕರ್ ವಿಚಾರದಲ್ಲಿ ಮಾತಿನ ಚಕಾಮಕಿ ನಡೆಯುತ್ತಿದ್ದು, ಕೈ ನಾಯಕರ ದ್ವಂದ್ವ ನಿಲುವಿನ ಬಗ್ಗೆ ಬಿಜೆಪಿ ಟ್ವಿಟರ್ನಲ್ಲಿ ಟೀಕಾ ಪ್ರಹಾರ ನಡೆಸಿದೆ.
ಬೆಂಗಳೂರು: ರಾಜ್ಯದಲ್ಲಿ ವೀರ ಸಾವರ್ಕರ್ (Veer Savarkar) ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಆಡಳಿತ ಪಕ್ಷ ಬಿಜೆಪಿ (BJP) ಮತ್ತು ವಿಪಕ್ಷ ಕಾಂಗ್ರೆಸ್ (Congress) ನಡುವೆ ಮಾತಿನ ಚಕಾಮಕಿ ನಡೆಯುತ್ತಿದೆ. ಇದರ ಬೆನ್ನಲ್ಲೆ ಸಾವರ್ಕರ್ ವಿಚಾರದಲ್ಲಿ ಕೈ ನಾಯಕರ ದ್ವಂದ್ವ ನಿಲುವಿನ ಬಗ್ಗೆ ಬಿಜೆಪಿ ಟೀಕಿಸಿದೆ. 1970 ರಲ್ಲಿ ಇಂದಿರಾ ಗಾಂಧಿ (Indira Gandhi) ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ (Veer Savarkar Postage Stamp) ಬಿಡುಗಡೆ ಮಾಡಿತ್ತು. ಸಾವರ್ಕರ್ ಕುರಿತು ಡಾಕ್ಯುಮೆಂಟರಿ (Savarkar Documentary) ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು. ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ? ಎಂದು ಬಿಜೆಪಿ ಟ್ವೀಟ್ ಮಾಡಿ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿದ್ದ ಸಾವರ್ಕರ್ ಅಂಚೆ ಚೀಟಿ ಫೋಟೋವನ್ನು ಹಂಚಿಕೊಂಡಿದೆ.
1970 ರಲ್ಲಿ ಇಂದಿರಾ ಗಾಂಧಿ ಸರ್ಕಾರ ವೀರ ಸಾವರ್ಕರ್ ಅಂಚೆ ಚೀಟಿ ಬಿಡುಗಡೆ ಮಾಡಿತ್ತು.
ಸಾವರ್ಕರ್ ಕುರಿತು ಡಾಕ್ಯುಮೆಂಟರಿ ನಿರ್ಮಾಣಕ್ಕಾಗಿ ಸಾವರ್ಕರ್ ಸ್ಮಾರಕ ಸಮಿತಿಗೆ ಸ್ವತಃ ಇಂದಿರಾ ಗಾಂಧಿ ದೇಣಿಗೆ ನೀಡಿದ್ದರು.
ಕಾಂಗ್ರೆಸಿನ ಇತಿಹಾಸ ಪ್ರಜ್ಞೆ ಪ್ರಧಾನಮಂತ್ರಿ ಬದಲಾದಂತೆ ಬದಲಾಗುವುದೇ?
1/n#AntiNationalCongress pic.twitter.com/QVgeH2zBDp
— BJP Karnataka (@BJP4Karnataka) December 19, 2022
ಸಾವರ್ಕರ್ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಖುದ್ದು ಸಾವರ್ಕರ್ ಹೋರಾಟವನ್ನು ಕೊಂಡಾಡಿ ಅವರೊಬ್ಬ ಅದ್ಭುತ ಸ್ವಾತಂತ್ರ್ಯ ಹೋರಾಟಗಾರ ಎಂದು ಶ್ಲಾಘಿಸಿ ಪತ್ರ ಬರೆದಿದ್ದರು. ಇದರ ಜೊತೆಗೆ ವೀರ ಸಾವರ್ಕರ್ ಸ್ಮಾರಕ ನಿಧಿಗೆ ವೈಯುಕ್ತಿಕವಾಗಿ 11,000 ರೂಪಾಯಿ ದೇಣಿಗೆ ಕೂಡಾ ನೀಡಿದ್ದರು ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸಾವರ್ಕರ್ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ಖುದ್ದು ಸಾವರ್ಕರ್ ಹೋರಾಟವನ್ನು ಕೊಂಡಾಡಿ ಅವರೊಬ್ಬ ಅದ್ಭುತ ಸ್ವಾತಂತ್ರ್ಯ ಹೋರಾಟಗಾರ ಎಂದು ಶ್ಲಾಘಿಸಿ ಪತ್ರ ಬರೆದಿದ್ದರು.
ಇದರ ಜೊತೆಗೆ #VeerSavarkar ಸ್ಮಾರಕ ನಿಧಿಗೆ ವೈಯುಕ್ತಿಕವಾಗಿ 11,000 ರೂಪಾಯಿ ದೇಣಿಗೆ ಕೂಡಾ ನೀಡಿದ್ದರು.
2/n pic.twitter.com/JxPcv8Rb1h
— BJP Karnataka (@BJP4Karnataka) December 19, 2022
ಇದನ್ನೂ ಓದಿ: ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ? ಪಟ್ಟು ಬಿಡದ ಬಿಜೆಪಿ: ಸರ್ಕಾರವನ್ನು ಹಣಿಯಲು ಸಿದ್ದವಾದ ಕಾಂಗ್ರೆಸ್
ಸಾವರ್ಕರ್ ಅಸ್ಪೃಶ್ಯತಾ ನಿವಾರಣೋಪಾಯಗಳು ಅಂಬೇಡ್ಕರ್ ಅವರಿಗೆ ಪ್ರೇರಣೆಯಾಗಿತ್ತು, ಆದರೆ ಕಾಂಗ್ರೆಸ್ಸಿಗರಿಗೆ ಆಗಲೇ ಇಲ್ಲ! ʼಅಸ್ಪೃಶ್ಯತೆ ನಿವಾರಿಸಲು ನನ್ನ ಆಶಯಕ್ಕನುಗುಣವಾಗಿ ಸಮಾಜದೊಳಗಿದ್ದು ಶ್ರಮಿಸುತ್ತಿರುವ ಕೆಲವೇ ಕೆಲವು ಮಂದಿಯಲ್ಲಿ ಸಾವರ್ಕರ್ ಕೂಡಾ ಒಬ್ಬರುʼ ಎಂದು ಅಂಬೇಡ್ಕರ್ ಕೊಂಡಾಡಿದ್ದರು ಎಂದು ಬಿಜೆಪಿ ಟ್ವಿಟರ್ನಲ್ಲಿ ಹೇಳಿಕೊಂಡಿದೆ.
ತಾಯಿ ಭಾರತಿಗೆ ಕನ್ನಡದಾರತಿ ಎತ್ತುವೆ ಎಂದ ಆಲೂರು ವೆಂಕಟರಾಯರಿಗೆ, ಭಾರತ ಜನನಿಯ ತನುಜಾತೆ ಎಂದ ಕುವೆಂಪುರವರಿಗೆ, ಭಾಷೆಯಲ್ಲ, ಕಾವ್ಯವೇ ನವಮೇಘರೂಪ ಎಂದ ಬೇಂದ್ರೆಯವರಿಗೆ ಪ್ರೇರಣೆಯಾದವರು ಸಾವರ್ಕರ್. ಅಂಥಹ ವೀರ ಸಾವರ್ಕರ್ ಅವರು ಕಾಂಗ್ರೆಸ್ಸಿಗೆ ಮಾತ್ರ ವರ್ಜ್ಯವಾಗುವುದೇಕೆ? ಎಂದು ಪ್ರಶ್ನಿಸಿದೆ.
ಸಿಂಗಾಪುರದ “ಫ್ರೀ ಇಂಡಿಯಾ ರೇಡಿಯೋ” ಭಾಷಣದಲ್ಲಿ ನೇತಾಜಿ, “ರಾಜಕೀಯ ಪ್ರಬುದ್ಧತೆಯಿಲ್ಲದ ಕಾಂಗ್ರೆಸ್ ಸೈನಿಕರನ್ನು ಹಣಕ್ಕಾಗಿ ಮಾರಿಕೊಂಡವರು ಎಂದು ಹೀಗಳೆಯುತ್ತಿರುವಾಗ ಸಾವರ್ಕರ್ ಸೇನೆಗೆ ಸೇರಿ ಎನ್ನುತ್ತಿರುವುದು ಸ್ಫೂರ್ತಿದಾಯಕ” ಎಂದಿದ್ದರು. ಸಾವರ್ಕರ್ ನಿಂದಕರೆಲ್ಲರೂ ನೇತಾಜಿ ನಿಂದಕರೂ ಆಗಿದ್ದಾರೇಕೆಂದು ಈಗ ತಿಳಿಯಿತೇ? ಎಂದು ಬಿಜೆಪಿ ಹೇಳಿದೆ.
ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ; ಎಲ್ಲೆಡೆ ಸಾವರ್ಕರ್ ಬ್ಯಾನರ್ ಅಳವಡಿಕೆ
ಕಾಂಗ್ರೆಸ್ ಇಂದು ಸಾವರ್ಕರ್‌ರನ್ನು ವಿರೋಧಿಸಬಹುದು. ಆದರೆ ಸಾವರ್ಕರ್‌ರನ್ನು ಅಪಾರವಾಗಿ ಪ್ರೀತಿಸುವವರು, ಗೌರವಿಸುವವರ ಸಾಲಲ್ಲಿ ಗಾಂಧೀಜಿಯೂ ನಿಲ್ಲುತ್ತಾರೆ. ಗಾಂಧೀಜಿ ಪತ್ರಗಳಲ್ಲಿ ಸಾವರ್ಕರ್‌ರನ್ನು ಪ್ರೀತಿಯಿಂದ ʼಭಾಯ್ʼ ಎಂದು ಸಂಬೋಧಿಸುತ್ತಿದ್ದರು. ಕರ್ನಾಟಕ ಕಾಂಗ್ರೆಸ್ ಗಾಂಧೀಜಿಯನ್ನೂ ವಿರೋಧಿಸುವುದೇ? ಎಂದು ಪ್ರಶ್ನಿಸಿದೆ.
ಒಂದು ಸಮುದಾಯದ ಓಲೈಕೆಯಲ್ಲೇ ನಿರತರಾಗಿರುವ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ಗೆ ಟಿಪ್ಪು, ಶಾರಿಕ್‌ನಂಥವರೇ ದೇವರಾಗಿದ್ದಾರೆಯೇ ವಿನಃ ದಲಿತರಿಗೂ ಪತಿತ ಪಾವನ ಮಂದಿರ ಕೊಟ್ಟ ಸಾವರ್ಕರ್ ದೇವರಾಗಲಿಲ್ಲ. ಸಮಾಜವಾದಿ ಸಿದ್ದರಾಮಯ್ಯ ಈಗೆಲ್ಲಿ ಹೋದರು? ಎಂದು ಪ್ರಶ್ನಿಸಿದೆ.
ಮಾನ್ಯ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರೇ, ಸಾವರ್ಕರ್ ಅವರನ್ನು ಓದುವುದು ಬೇಡ. ಕೇವಲ ನಿಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಮಾತನ್ನು ನೀವು ಅರ್ಥ ಮಾಡಿಕೊಂಡಿದ್ದರೂ ಸಾವರ್ಕರ್ ಅವರ ಭಾವಚಿತ್ರಕ್ಕೆ ನೀವೇ ಹಾರ ಹಾಕುತ್ತಿದ್ದಿರೇನೋ! ಮಸ್ತಕದಲ್ಲೂ ಏನಿಲ್ಲ, ಪುಸ್ತಕವೂ ಓದಲ್ಲ ಎನ್ನುವವರಿಗೆ ಏನೆನ್ನೋಣ? ಎಂದು ವ್ಯಂಗ್ಯವಾಡಿದೆ.
ಅಂಡಮಾನಿನ ಕತ್ತಲ ಕೋಣೆಯಲ್ಲಿ ವೀರ ಸಾವರ್ಕರ್ ಕಾಲ ಕಳೆಯದಿರುತ್ತಿದ್ದರೆ, ಅವರ ಚಿಂತನೆಗಳು ರಾಷ್ಟ್ರದಲ್ಲಿ ಹರಿಯದಿರುತ್ತಿದ್ದರೆ ಭಾರತ 1947 ರಲ್ಲಿ ಸ್ವತಂತ್ರವಾಗುತ್ತಲೂ ಇರಲಿಲ್ಲ, ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಲೂ ಇರಲಿಲ್ಲ! ಅಂದು ವೀರ ಸಾವರ್ಕರ್ ಕತ್ತಲ ಕೋಣೆಯಲ್ಲಿ ಕಾಲ ಕಳೆಯದಿರುತ್ತಿದ್ದರೆ, ಇಂದು ವಿರೋಧಿಸುವವರಿಗೆ ಧ್ವನಿಯೇ ಇರುತ್ತಿರಲಿಲ್ಲ. ಇಂದಿನ ಆಡಳಿತದ ಯಾವ ಸಂಕೇತಗಳೂ ಇರುತ್ತಿರಲಿಲ್ಲ. ಅರ್ಜುನನನ್ನು ಶಂಕಿಸಬಹುದು. ಆದರೆ ಗಾಂಢೀವವನ್ನು ಶಂಕಿಸಬಹುದೇ? ಸಾವರ್ಕರ್ ಎಂದರೆ ಗಾಂಢೀವ! ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ