AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ

ಜೂನ್​ನಲ್ಲಿ ವಿಧಾನ ಪರಿಷತ್​ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಸಂಬಂಧ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Feb 05, 2022 | 7:57 AM

Share

ಬೆಂಗಳೂರು: ರಾಜ್ಯದಲ್ಲಿ ಜೂನ್‌ ವೇಳೆಗೆ ವಿಧಾನ ಪರಿಷತ್ ಚುನಾವಣೆ (MLC Elections) ನಡೆಯಲಿದೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿವೆ. ಈ ಸಂಬಂಧ ಭಾರತೀಯ ಜನತಾ ಪಕ್ಷ- ಬಿಜೆಪಿ (BJP) ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿದೆ. ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅರುಣ್ ಶಹಾಪುರ್ ಬಿಜೆಪಿ ಟಿಕೆಟ್ ಪಡೆಯುವ ನಿರೀಕ್ಷೆ ಇದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಘೋಷಿಸುವ ನಿರೀಕ್ಷೆ ಇದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಗೋ.‌ಮಧುಸೂದನ್ ಹಾಗೂ ಕಳೆದ ಬಾರಿ ಸೋತಿದ್ದ ಮೈ.ವಿ.ರವಿಶಂಕರ ಹೆಸರುಗಳು ರೇಸ್​ನಲ್ಲಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಬಸವರಾಜ ಹೊರಟ್ಟಿಗೆ ಹಿನ್ನೆಡೆ?

ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಅಭ್ಯರ್ಥಿ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಬಸವರಾಜ ಹೊರಟ್ಟಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಬಿಜೆಪಿ ಬೆಂಬಲದೊಂದಿಗೆ ಹೊರಟ್ಟಿಯವರು ಸ್ಪರ್ಧೆಗೆ ಒಲವು ತೋರಿದ್ದರು. ಇದೀಗ ಹೊರಟ್ಟಿಗೆ ಬಿಜೆಪಿಯ ಬೆಂಬಲ ಅಥವಾ ಟಿಕೆಟ್ ಅನುಮಾನ ಎನ್ನಲಾಗಿದೆ. ಹೊರಟ್ಟಿ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿಸುವ ಅಥವಾ ಬೆಂಬಲಿಸುವ ಕುರಿತು ತೆರೆಮರೆಯ ಚಟುವಟಿಕೆಗಳು ನಡೆದಿದ್ದವು.

ಆದರೆ ಹೊರಟ್ಟಿಗೆ 75 ವರ್ಷ ತುಂಬಿದೆ. ಬಿಜೆಪಿ ಸೇರಲು ಅವರಿಗೆ ವಯಸ್ಸಿನ ಅಡ್ಡಿಯಾಗಿದೆ ಎನ್ನುವ ಮಾತು ಕೇಳಿಬಂದಿದೆ. ಈ ಕುರಿತು ಕೆಲ ಬಿಜೆಪಿಗರು ವರಿಷ್ಠರ ಗಮನಕ್ಕೆ ತಂದಿದ್ದರು ಎನ್ನಲಾಗಿದ್ದು, ಹೀಗಾಗಿ ಹೊರಟ್ಟಿ ಬಿಜೆಪಿ ಸೇರಿದರೂ ಟಿಕೆಟ್​ ನಿರಾಕರಿಸುವ ಸಾಧ್ಯತೆ ಇದೆ. ಜೂನ್ ವೇಳೆಗೆ ಹೊರಟ್ಟಿ ಅವರ ಸದಸ್ಯತ್ವ ಅವಧಿ ಮುಕ್ತಾಯವಾಗಲಿದೆ.

ಕಾಂಗ್ರೆಸ್​ನಲ್ಲಿ ಇಬ್ಬರು ಅಭ್ಯರ್ಥಿಗಳ ಹೆಸರು ಘೋಷಣೆ: ಡಿಕೆ ಶಿವಕುಮಾರ್

ಇತ್ತ ಕಾಂಗ್ರೆಸ್​ನಲ್ಲಿ ಪರಿಷತ್​ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಧುಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಇನ್ನೆರಡು ಕ್ಷೇತ್ರಗಳಿಗೆ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

ಶ್ರೀನಗರದಲ್ಲಿ ಪೊಲೀಸರಿಂದ ಎನ್‌ಕೌಂಟರ್: ಕಾನ್ಸ್‌ಟೇಬಲ್‌ ಹತ್ಯೆ ಮಾಡಿದ್ದ ಉಗ್ರ ಸಾವು

ನಮಗೆ ಶಿಕ್ಷಣ ಬೇಕು ಮತ್ತು ಹಿಜಾಬ್ ಸಹ ಬೇಕು ಎನ್ನುತ್ತಾರೆ ಕುಂದಾಪುರ ಸರ್ಕಾರಿ ಕಾಲೇಜಿನಿಂದ ಹೊರದೂಡಲ್ಪಟ್ಟಿರುವ ವಿದ್ಯಾರ್ಥಿನಿಯರು!

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?