ಟಿಕೆಟ್ಗಾಗಿ ಹೊರಟ್ಟಿ ಮತ್ತು ಲಿಂಬಿಕಾಯಿ ನಡುವೆ ಪೈಪೋಟಿ |ಯಾರಿಗೆ ಒಲಿಯಲಿದೆ ಹುಬ್ಬಳ್ಳಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಟಿಕೆಟ್
ಹುಬ್ಬಳ್ಳಿ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿ ಬಸವರಾಜ್ ಹೊರಟ್ಟಿ ಮತ್ತು ಮೋಹನ್ ಲಿಂಬಿಕಾಯಿ ನಡುವೆ ಪೈಪೋಟಿ

ಹುಬ್ಬಳ್ಳಿ: ವಿಧಾನ ಪರಿಷತ್ (Karnataka Legislative Council) ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13ಕ್ಕೆ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮೇ 26 ಕೊನೆಯ ದಿನಾಂಕವಾಗಿದೆ. ಈ ಸಂಬಂಧ ಹುಬ್ಬಳ್ಳಿ ಪಶ್ಚಿಮ ಶಿಕ್ಷಕರ ಕ್ಷೇತ್ರ ತೀರ್ವ ಕುತೂಹಲ ಮೂಡಿಸಿದೆ. ಪಶ್ಚಿಮ ಕ್ಷೇತ್ರದಿಂದ ಗೆದ್ದು ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದ ಬಸವರಾಜ್ ಹೊರಟ್ಟಿ (Basavaraj Horatti) ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೇ ನೀಡಿ ಬಿಜೆಪಿ ಸೇರಿದ್ದಾರೆ. ಈಗ ಬಿಜೆಪಿಯಿಂದ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ದಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಈಗ ಇದೇ ಕ್ಷೇತ್ರದಿಂದ ಸ್ಪರ್ಧಿಸಲು ಬಕಪಕ್ಷಿಯಂತೆ ಬಿಜಪಿ ನಾಯಕ ಮೋಹನ್ (Mohan Limbikai)ಲಿಂಬಿಕಾಯಿ ಕಾದು ಕುಳತಿದ್ದಾರೆ. ಇದರಿಂದ ಟಿಕೆಟ್ಗಾಗಿ ಹೊರಟ್ಟಿ, ಮೋಹನ್ ಲಿಂಬಿಕಾಯಿ ಮಧ್ಯೆ ಪೈಪೋಟಿ ಏರ್ಪಟ್ಟಿದೆ.
ಇದನ್ನು ಓದಿ: ದಾವಣಗೆರೆ ಪಾಲಿಕೆಯ 28, 37ನೇ ವಾರ್ಡ್ಗೆ ಉಪ ಚುನಾವಣೆ; ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ದಂಪತಿಗೆ ಭರ್ಜರಿ ಗೆಲುವು
ಈ ಸಂಬಂಧ ಮೋಹನ್ ಲಿಂಬಿಕಾಯಿ ಇನ್ನು ಕಾದು ನೋಡೋ ತಂತ್ರ ಮೊರೆ ಹೊಗಿದ್ದಾರೆ. ಪಕ್ಷದಿಂದ ಅಧಿಕೃತ ಅಭ್ಯರ್ಥಿ ಅಂತ ಘೋಷಣೆ ಆಗೋವರೆಗು ಅವರ ಮುಂದಿನ ನಡೆ ನಿಗೂಢವಾಗಿದೆ. ಹೊರಟ್ಟಿ ಅವರಿಗೆ ಅಧಿಕೃತ ಟಿಕೆಟ್ ಘೋಷಣೆ ಬಳಿಕ ಲಿಂಬಿಕಾಯಿ ತಮ್ಮ ನಿರ್ದಾರ ತಿಳಿಸಲಿದ್ದಾರೆ. ಈಗಾಗಲೇ ತಮ್ಮ ಬೆಂಬಲಿಗತ ಜೊತೆ ಒಂದು ಸುತ್ತು ಸಭೆ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಬೇಕೋ ಬೆಡ್ವೋ ಎನ್ನೋ ಬಗ್ಗೆ ಚರ್ಚೆ ನಡೆಸಲಾಗಿದೆಯಂತೆ. ಇದರಿಂದಾಗಿ ಲಿಂಬಿಕಾಯಿ ನಡೆ ತೀವ್ರ ಕೂತಹಲ ಕೆರಳಿಸಿದೆ.
ಇದನ್ನು ಓದಿ: ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರವಾರು ತಾರತಮ್ಯ ಆರೋಪ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್
ಪರಿಷತ್ ಚುನಾವಣೆಗೆ ವಿಜಯೇಂದ್ರಗೆ ಟಿಕೆಟ್ ನೀಡುವುದು ಬಹುತೇಕ ಫಿಕ್ಸ್ !?
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಸನಿಹದಲ್ಲಿದ್ದು, ಮೊನ್ನೆ (ಮೇ 14) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿ. ವೈ ವಿಜಯೇಂದ್ರ ಅವರಿಗೆ ಪರಿಷತ್ ಟಿಕೆಟ್ ನೀಡುವ ಬಗ್ಗೆ ಹೆಸರು ಪ್ರಸ್ತಾಪಿಸಲಾಗಿತ್ತು. ಸದ್ಯ ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಹೈಕಮಾಂಡ್ಗೆ ಸಿಎಂ ಬೊಮ್ಮಾಯಿ ಬಿಟ್ಟಿದ್ದಾರೆ.
ಪರಿಷತ್ ಚುನಾವಣೆಗೆ ವಿಜಯೇಂದ್ರಗೆ ಟಿಕೆಟ್ ನೀಡುವುದು ಬಹುತೇಕ ಫಿಕ್ಸ್ ಆಗಿದೆ ಎನ್ನುವುತ್ತಿವೆ ಸಿಎಂ ಕಚೇರಿ ಮೂಲಗಳಿಂದ ತಿಳಿದು ಬಂದಿದೆ. ಮಗನಿಗೆ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಚುನಾವಣಾ ವರ್ಷದಲ್ಲಿ ಬಿಎಸ್ ವೈ ಸಿಟ್ಟು ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಅರಿತಿರುವ ಹೈಕಮಾಂಡ್ ವಿಜಯೇಂದ್ರ ಅವರಿಗೆ ಪರಿಷತ್ ಟಿಕೆಟ್ ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ವಿಜಯೇಂದ್ರ ಆಪ್ತರ ಒತ್ತಡ ಹೇರುತ್ತಿರುವ ವಂದತಿಗಳು ಕೇಳಿ ಬರುತ್ತಿವೆ.
ಪದವೀಧರ ಕ್ಷೇತ್ರಗಳ ಎರಡು ಮತ್ತು ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯವ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆಯ ದಿನ. ಜೂನ್ 13ರಂದು ಮತದಾನ ಮತ್ತು ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:20 pm, Sun, 22 May 22