ಜಿಗಣಿಯ ಒಟ್ಟು 23 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 16 ವಾರ್ಡ್‌ಗಳಲ್ಲಿ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿಗಳು ಕೇವಲ 7 ವಾರ್ಡ್‌ಗಳಲ್ಲಿ ಜಯಗಳಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಚಂದಾಪುರ ಪುರಸಭೆಯು ಬಿಜೆಪಿ ತೆಕ್ಕೆಗೆ ಬಿದ್ದಿದೆ. 23 ವಾರ್ಡ್‌ಗಳ ಪೈಕಿ ಬಿಜೆಪಿಯು 15 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 5, ಪಕ್ಷೇತರ ಅಭ್ಯರ್ಥಿಗಳು 3 ವಾರ್ಡ್‌ಗಳಲ್ಲಿ ಜಯಗಳಿಸಿದ್ದಾರೆ.
ಮತ ಎಣಿಕೆ ನಡೆಯುತ್ತಿದ್ದ ರಾಜ್ಯದ ಐದು ನಗರಸಭೆಗಳ ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಮೂರರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದರೆ, ಎರಡು ನಗರಸಭೆಗಳಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಸಿಕ್ಕಿಲ್ಲ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಹೆಬ್ಬಗೋಡಿ, ಗದಗ-ಬೆಟಗೇರಿ ನಗರಸಭೆ, ಚಿಕ್ಕಮಗಳೂರು ನಗರಸಭೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿವೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ, ತುಮಕೂರು ಜಿಲ್ಲೆಯ ಶಿರಾ ನಗರಸಭೆ ಫಲಿತಾಂಶ ಅತಂತ್ರವಾಗಿದೆ.
ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ 18, ಕಾಂಗ್ರೆಸ್ 12, ಇತರರು 3, ಜೆಡಿಎಸ್ ಎರಡು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿ 18, ಕಾಂಗ್ರೆಸ್ 15, ಪಕ್ಷೇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 16, ಕಾಂಗ್ರೆಸ್ 12, ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದೆ. ತುಮಕೂರು ಜಿಲ್ಲೆಯ ಶಿರಾ ನಗರಸಭೆಯಲ್ಲಿ ಕಾಂಗ್ರೆಸ್ 11, ಜೆಡಿಎಸ್ 7, ಬಿಜೆಪಿ 4 ವಾರ್ಡ್‌ಗಳಲ್ಲಿ ಜಯಗಳಿಸಿದೆ. ಪಕ್ಷೇತರ ಅಭ್ಯರ್ಥಿಗಳು 8 ವಾರ್ಡ್‌ಗಳಲ್ಲಿ ಗೆದ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆಯಲ್ಲಿ ಕಾಂಗ್ರೆಸ್ 12, ಬಿಜೆಪಿ 10, ಪಕ್ಷೇತರರು 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಒಟ್ಟು ಐದು ನಗರಸಭೆಗಳ 166 ವಾರ್ಡ್‌ಗಳ ಪೈಕಿ ಬಿಜೆಪಿ 67ರಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 61, ಜೆಡಿಎಸ್ 12 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. 26 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳಿಗೆ ಗೆಲುವು ಸಿಕ್ಕಿದೆ.
ಇದನ್ನೂ ಓದಿ: ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣಾ ಫಲಿತಾಂಶದಲ್ಲಿ ಕಮಾಲ್ ಮಾಡಿದ ಕಾಂಗ್ರೆಸ್; ನಗರಸಭೆ ಫಲಿತಾಂಶದಲ್ಲಿ ಬಿಜೆಪಿಗೆ ಮೂರೇ ಮೂರು!
ಇದನ್ನೂ ಓದಿ: Local Bodies Election Result: ಬಿಡದಿ ಪುರಸಭೆ ಜೆಡಿಎಸ್ ತೆಕ್ಕೆಗೆ, ನಾಯಕನಹಟ್ಟಿ ಪ.ಪಂ.ನಲ್ಲಿ ಬಿ.ಶ್ರೀರಾಮುಲುಗೆ ಭಾರಿ ಮುಖಭಂಗ