AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಗುತ್ತಿಗೆ ನವೀಕರಣದಲ್ಲಿ ಕಿಕ್​ ಬ್ಯಾಕ್ ಆರೋಪ: ದಾಖಲೆ ಸಮೇತ ವಿರೋಧಿಗಳಿಗೆ ಸಿಎಂ ತಿರುಗೇಟು

ತಮ್ಮ ವಿರುದ್ಧ ಕೇಳಿಬಂದಿರುವ ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋಟಿ ರೂ. ಲಂಚ ಪಡೆದ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ತಿದ್ದುಪಡಿಯಿಂದ 8 ಕಂಪನಿಗಳಿಗೆ ನೀಡಿದ ಅನುಮತಿ ರದ್ದುಗೊಂಡಿದೆ ಎಂದೂ ತಿಳಿಸಿದ್ದಾರೆ. ಯಾವುದೇ ಹಣಕಾಸಿನ ನಷ್ಟ ಅಥವಾ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಆರೋಪಗಳು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಣಿ ಗುತ್ತಿಗೆ ನವೀಕರಣದಲ್ಲಿ ಕಿಕ್​ ಬ್ಯಾಕ್ ಆರೋಪ: ದಾಖಲೆ ಸಮೇತ ವಿರೋಧಿಗಳಿಗೆ ಸಿಎಂ ತಿರುಗೇಟು
ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on: Apr 09, 2025 | 10:04 PM

ಬೆಂಗಳೂರು, ಏಪ್ರಿಲ್​ 09: ಗಣಿ ಗುತ್ತಿಗೆ ನವೀಕರಣ (Mining lease renewal) ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು 500 ಕೋಟಿ ರೂ. ಕಿಕ್​ಬ್ಯಾಕ್​ (Kickback) ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. “ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವಿಟ್​ ಮಾಡಿರುವ ಅವರು, “2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್‌ ಕ್ಲಿಯರೆನ್ಸ್‌ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಲಾಗಿದೆ”ಎದ್ದಿದ್ದಾರೆ.

ಇದನ್ನೂ ಓದಿ
Image
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
Image
ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ಸಿಎಂಗೆ ಟೆನ್ಷನ್​ ಟೆನ್ಷನ್​
Image
17 ಸಾವಿರ ಕೋಟಿ ರೂ ಅನುದಾನ ದುರ್ಬಳಕೆ: ಸರ್ಕಾರದ ವಿರುದ್ಧ ಬೃಹತ್ ಹಗರಣ ಆರೋಪ
Image
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ

“2015ರ ಜನವರಿ 12 ರಂದು ಕೇಂದ್ರ ಸರ್ಕಾರವು ಎಂಎಂಡಿಆರ್‌ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಯನ್ನು ತಂದ ಕಾರಣ, ವಿವಿಧ ಹಂತದ ಪರಿಶೀಲನೆಗಳನ್ನು ನಡೆಸಿ, ಅದೇ ವರ್ಷ ಫೆಬ್ರವರಿ 2 ರಂದು ಗಣಿ ಗುತ್ತಿಗೆ ನವೀಕರಣಕ್ಕಾಗಿ ನೀಡಿದ್ದ ಷರತ್ತುಬದ್ಧ 8 ಕಂಪನಿಗಳ ತಾತ್ವಿಕ ಅನುಮತಿ ಪತ್ರಗಳು ಊರ್ಜಿತವಲ್ಲ ಎಂದು ತೀರ್ಮಾನಿಕಸಿ ಅವುಗಳನ್ನು ರದ್ದುಪಡಿಸಿ ತಿದ್ದುಪಡಿ ಕಾಯ್ದೆಯಂತೆ ಕ್ರಮವಹಿಸಲು ಸೂಚಿಸಲಾಯಿತು” ಎಂದು ತಿಳಿಸಿದರು.

“ನಂತರ, ಗಣಿ ಇಲಾಖೆಯು ಸಲ್ಲಿಸಿದ ಡೀಮ್ಡ್‌ ಅವಧಿ ವಿಸ್ತರಣೆ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರಿಶೀಲಿಸಿ ರಾಜ್ಯ ಸರ್ಕಾರವು ಒಂದು ಪ್ರಕರಣವನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಡೀಮ್ಡ್‌ ಅವಧಿ ವಿಸ್ತರಣೆಗೆ ಪರಿಗಣಿಸದೆ ರದ್ದುಪಡಿಸಲಾಗಿದೆ. ಉಳಿದ 7 ಪ್ರಕರಣಗಳಿಗೆ ಶಾಸನಬದ್ಧವಾದ ಅರಣ್ಯ, ಪರಿಸರ ಮುಂತಾದ ತೀರುವಳಿ ಪತ್ರಗಳನ್ನು ಹಾಜರುಪಡಿಸುವ, ಬೇಬಾಕಿ ಪತ್ರ ಸಲ್ಲಿಸುವ ಹಾಗೂ ಸಿಬಿಐ, ಎಸ್‌ಐಟಿ ಸೇರಿದಂತೆ ವಿವಿಧ ಸಂಸ್ಥೆಗಳ ತನಿಖೆಯ ಅಂತಿಮ ವರದಿಯನ್ನು ಆಧರಿಸಿ ಸರ್ಕಾರದ ಕ್ರಮಕ್ಕೆ ಬದ್ಧರಾಗಲು ಷರತ್ತು ವಿಧಿಸಿ ಡೀಮ್ಡ್‌ ಅವಧಿ ವಿಸ್ತರಣೆ ಪತ್ರ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಆದರೆ, ಈ 7 ಕಂಪನಿಗಳ ಪೈಕಿ 2 ಕಂಪನಿಗಳು ಶಾಸನಬದ್ಧವಾದ ತೀರುವಳಿಗಳನ್ನು ಸಲ್ಲಿಸದ ಕಾರಣ, ಯಾವುದೇ ಗಣಿಗಾರಿಕೆ ಹಕ್ಕುಗಳನ್ನು ನೀಡಿರುವುದಿಲ್ಲ. ಉಳಿದ 5 ಪ್ರಕರಣಗಳಲ್ಲಿ 3 ಪ್ರಕರಣಗಳನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಅಂದರೆ 2020 ಹಾಗೂ 2021 ರಲ್ಲಿ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ. ಉಳಿದ ಎರಡು ಪ್ರಕರಣಗಳನ್ನು 2016 ಮತ್ತು 2018 ರಲ್ಲಿ ಪೂರಕ ಕರಾರು ಪತ್ರದ ಮುಖಾಂತರ ಷರತ್ತುಬದ್ಧ ಡೀಮ್ಡ್‌ ವಿಸ್ತರಣೆಯ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಹಾಗಾಗಿ, ಈ ಎಲ್ಲಾ 8 ಪ್ರಕರಣಗಳಲ್ಲಿ ಸರ್ಕಾರಕ್ಕೆ ನಯಾಪೈಸೆಯಷ್ಟೂ ನಷ್ಟವಾಗಲಿಲ್ಲ. ಈ ಅವಧಿಯಲ್ಲಿ ಒಂದು ಹಿಡಿಯಷ್ಟೂ ಅದಿರು ತೆಗೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಈ ಕುರಿತಂತೆ ಈ ಹಿಂದೆ ಕೂಡ ವಿರೋಧ ಪಕ್ಷಗಳವರು ಹಾಗೂ ಕೆಲವು ವ್ಯಕ್ತಿಗಳು ಹಲವು ಸಂಸ್ಥೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿದ್ದರು. ಈ ದೂರುಗಳಲ್ಲಿ ಯಾವುದೇ ಹುರುಳಿಲ್ಲವೆಂದು ದೂರುಗಳನ್ನು ಮುಕ್ತಾಯಗೊಳಿಸಲಾಗಿದೆ” ಎಂದು ತಿಳಿಸಿದರು.

ಟ್ವಿಟರ್ ಪೋಸ್ಟ್​

“ವಿರೋಧ ಪಕ್ಷಗಳವರು ಸದರಿ ವಿಚಾರವನ್ನು ಸದನದಲ್ಲೂ ಪ್ರಶ್ನಿಸಿದ್ದರು. ಈಗಿನ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಮಂತ್ರಿಯಾಗಿರುವ ಹೆಚ್​ಡಿ ಕುಮಾರಸ್ವಾಮಿಯವರು 2018ರ ಜನವರಿ 1 ರಂದು ಪತ್ರಿಕಾ ಗೋಷ್ಠಿಯನ್ನೂ ಮಾಡಿದರು. ಆದರೆ, ಈ ಯಾವುದೇ ಪ್ರಕರಣಗಳಲ್ಲಿ ಹುರುಳೆ ಇರಲಿಲ್ಲ. ಏಕೆಂದರೆ, ಈ ಎಲ್ಲಾ 8 ಪ್ರಕರಣಗಳನ್ನು ಹೊಸ ಸುಗ್ರೀವಾಜ್ಞೆಯ ನಿಯಮಾವಳಿಗಳಿಗೆ ಅನುಗುಣವಾಗಿ ಕ್ರಮವಹಿಸಲಾಗಿದೆ. ಅವಧಿ ಮುಗಿದ ಗಣಿ ಗುತ್ತಿಗೆಗಳನ್ನು ನಂತರ ನಿಯಮಾನುಸಾರ ಹರಾಜಿಗೆ ಒಳಪಡಿಸಿ ವಿಲೇ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ವಾದ-ಪ್ರತಿವಾದ ವಿವರ ಇಲ್ಲಿದೆ

“ಸುಮಾರು 10 ವರ್ಷಗಳ ನಂತರ ಈ ಪ್ರಕರಣವನ್ನು ರಾಜಕೀಯ ದುರುದ್ದೇಶದಿಂದ ಜಗಿಯಲು ಪ್ರಾರಂಭಿಸಿದ್ದಾರೆ. ಹುರುಳಿಲ್ಲದ ವಿಷಯಕ್ಕೆ ವಿಷ ತುಂಬಿ ನಾಡಿನ ಜನರ ಮೆದುಳನ್ನು ಕಲುಷಿತಗೊಳಿಸಲು ಹೊರಟಿರುವ ದುಷ್ಟ ರಾಜಕೀಯ ಪಿತೂರಿಗಳನ್ನು ನಾಡಿನ ಪ್ರಜ್ಞಾವಂತ ಜನ ನಂಬಬಾರದು” ಎಂದು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ