ಬೆಂಗಳೂರು: ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಚಿವ ಎಂಬಿ ಪಾಟೀಲ್ (MB Patil) ನೀಡಿದ್ದ ಹೇಳಿಕೆಯೀಗ ಅವರ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಯತ್ನಾಳ್ ಟ್ವೀಟ್ಗೆ ಕಟುವಾಗಿ ಪ್ರತಿಕ್ರಿಯಿಸಿರುವ ಪಾಟೀಲ್, ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ಕಲಿಯಬೇಕಿಲ್ಲ ಎಂದು ಉಲ್ಲೇಖಿಸಿದ್ದಾರೆ. ಇದು ತಾಲಿಬಾನ್ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು. ಜೈಲಿಗೆ ಕಳಿಸುತ್ತೇನೆ ಅನ್ನೋದಕ್ಕೆ ಇವರೇನು ನ್ಯಾಯಾಧೀಶರೇ ಎಂದು ಯತ್ನಾಳ್ ಟ್ವೀಟ್ ಮಾಡಿದ್ದರು.
ಯತ್ನಾಳ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪಾಟೀಲ್, ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು. ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು ಎಂದಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು? ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ಕಲಿಯಬೇಕಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ; ಎಂಬಿ ಪಾಟೀಲ್ಗೆ ಯತ್ನಾಳ್ ತಿರುಗೇಟು
ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು…
ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು…
ಎಂದಿರುವ @BasanagoudaBJP ಅವರೇ ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು… https://t.co/pWSm3H9yuK— M B Patil (@MBPatil) June 6, 2023
ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿದ್ದ ಚಕ್ರವರ್ತಿ ಸೂಲಿಬೆಲೆಗೆ ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದರು. ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದ ಹಾಗೆ ಈಗ ನಾಟಕ ಮಾಡಿದರೆ ಅದಕ್ಕೆ ತಡೆಯೊಡ್ಡಲಿದ್ದೇವೆ. ಇನ್ನು ಮುಂದೆ ಅಂಥದ್ದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದರು.
ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಯತ್ನಾಳ್, ಯಾರೇ ಮಾತನಾಡಿದರೂ ಜೈಲಿಗೆ ಹಾಕ್ತೀವಿ ಎನ್ನಲು ಇದು ತಾಲಿಬಾನ್ ಆಡಳಿತ ಅಲ್ಲ ಎಂದು ಹೇಳಿದ್ದರು.
ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ