Karnataka Ministers to meet Rahul Gandhi: ಇಂದು ದಿಲ್ಲಿಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರ ಜೊತೆ ಹೈಕಮಾಂಡ್ ಹೈಲೆವೆಲ್ ಮೀಟಿಂಗ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳಿಗೆ ಮಣ್ಣು ಮುಕ್ಕಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್ , ಲೋಕಸಭಾ ಚುನಾವಣೆ ಗೆಲ್ಲುವತ್ತ ಚಿತ್ತ ಹರಿಸಿದೆ. ಹೀಗಾಗಿ ಇಂದು ರಾಜ್ಯ ನಾಯಕರ ಜೊತೆ ಹೈಕಮಾಂಡ್ ನಾಯಕರು ಹೈಲೆವೆಲ್ ಮೀಟಿಂಗ್ ನಡೆಸಲಿದ್ದಾರೆ.

Karnataka Ministers to meet Rahul Gandhi: ಇಂದು ದಿಲ್ಲಿಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರ ಜೊತೆ ಹೈಕಮಾಂಡ್ ಹೈಲೆವೆಲ್ ಮೀಟಿಂಗ್
ಸಂಗ್ರಹ ಚಿತ್ರ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on: Aug 02, 2023 | 6:56 AM

ಬೆಂಗಳೂರು.ನವದೆಹಲಿ, (ಆಗಸ್ಟ್ 02): ಲೋಕಸಭಾ ಚುನಾವಣೆಗೆ(Loksabha Elections 2024) ಕಾಂಗ್ರೆಸ್ (Congress) ಸಜ್ಜುಗೊಳ್ಳತ್ತಿದೆ. ಕರ್ನಾಟಕದಲ್ಲಿ (Karnataka) 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ಫಿಕ್ಸ್ ಮಾಡಿದೆ. ಹೀಗಾಗಿ ಇಂದು (ಆಗಸ್ಟ್ 02) ರಾಜ್ಯ ನಾಯಕರ ಜೊತೆ ಹೈಕಮಾಂಡ್ ನಾಯಕರು ಮಹತ್ವದ ಸಭೆ ನಡೆಸಲಿದ್ದಾರೆ. ಜೊತೆಗೆ ರಾಜ್ಯ ನಾಯಕರ ನಡುವಿನ ಅಸಮಧಾನದ ಬೇಗುದಿಗೂ ಹೈಕಮಾಂಡ್ ಮದ್ದು ಅರೆಯಲಿದೆ. ಹೈಕಮಾಂಡ್ ಒಟ್ಟು ಎರಡು ಸಭೆ ಮಾಡಲಿದೆ. ಮೊದಲ ಸಭೆಗೆ ರಾಜ್ಯ ಕಾಂಗ್ರೆಸ್‌ನ ಒಟ್ಟು 37 ನಾಯಕರಿಗೆ ಆಹ್ವಾನ ನೀಡಲಾಗಿದ್ದು, 2ನೇ ಸಭೆ ಕೇವಲ ಸಚಿವರ ಜೊತೆ ಮಾತ್ರ ನಡೆಸಲಿದೆ. ಈ ಪೈಕಿ ಮೊದಲ ಸಭೆಗೆ ರಾಜ್ಯ ಕಾಂಗ್ರೆಸ್‌ನ ಒಟ್ಟು 37 ನಾಯಕರಿಗೆ ಆಹ್ವಾನ ನೀಡಲಾಗಿದೆ. 37 ನಾಯಕರಲ್ಲಿ ಸಿಎಂ, ಡಿಸಿಎಂ ಸೇರಿದಂತೆ 19 ಸಚಿವರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ಸಜ್ಜು: ಜಗದೀಶ್ ಶೆಟ್ಟರ್​ಗೆ ಹೈಕಮಾಂಡ್ ಬುಲಾವ್, ಕುತೂಹಲ ಮೂಡಿಸಿದ ಕೈ ನಡೆ

ಇಂದು ದೆಹಲಿಯಲ್ಲಿ ನಡೆಯಲಿದೆ ಹೈಲೆವೆಲ್ ಮೀಟಿಂಗ್

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳಿಗೆ ಮಣ್ಣು ಮುಕ್ಕಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್ , ಲೋಕಸಭಾ ಚುನಾವಣೆ ಗೆಲ್ಲುವತ್ತ ಚಿತ್ತ ಹರಿಸಿದೆ.  ಹೀಗಾಗಿ ಇಂದು ಸಂಜೆ ರಾಜ್ಯ ನಾಯಕರ ಜೊತೆ ಹೈಕಮಾಂಡ್ ನಾಯಕರು ಹೈಲೆವೆಲ್ ಮೀಟಿಂಗ್ ನಡೆಸಲಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್, ಬಿ.ಕೆ ಹರಿಪ್ರಸಾದ್, ಚೆಲುವರಾಯಸ್ವಾಮಿ, ಮುನಿಯಪ್ಪ, ಆರ್. ಬಿ ತಿಮ್ಮಾಪುರ ಸೇರಿ ಹಲವು ನಾಯಕರು ದೆಹಲಿಯಲ್ಲಿದ್ದಾರೆ. ಬೆಳಗ್ಗೆ 9ಕ್ಕೆ ಸಿಎಂ ಸಿದ್ದರಾಮಯ್ಯ ನವರು ಬೆಂಗಳೂರಿನಿಂದ ಹೊರಡಲಿದ್ದು ಮಧ್ಯಾಹ್ನ 12 ಗಂಟೆ ವೇಳೆ‌ಗೆ ದೆಹಲಿಗೆ ತಲುಪಲಿದ್ದಾರೆ.

2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ವರಿಷ್ಠರ ಕರೆ ಹಿನ್ನಲೆ ರಾಜ್ಯದ ಐವತ್ತಕ್ಕೂ ಅಧಿಕ ನಾಯಕರು ದೆಹಲಿಗೆ ಆಗಮಿಸಿದ್ದು ಇಂದು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಎರಡು ಹಂತದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಭಾಗಿಯಾಗಲಿದ್ದಾರೆ.

ರಾಜ್ಯದಲ್ಲಿ 20ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ

ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸ್ಥಾನಗಳನ್ನು ಗೆಲ್ಲುವ ಲೆಕ್ಕಚಾರ ಮಾಡಿದೆ. ಈ ಕುರಿತ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಲಿದೆ. ಬಿಜೆಪಿ, ಜೆಡಿಎಸ್ ಮೈತ್ರಿಯಾದರೆ ಅದರಿಂದ ಉಂಟಾಗಬಹುದಾದ ಪರಿಣಾಮ, 20 ಸ್ಥಾನಗಳ ಗೆಲುವಿಗೆ ಮಾಡಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ.

ಇಂದಿನ ಸಭೆಗೆ ಒಟ್ಟು 37ನಾಯಕರಿಗೆ ಆಹ್ವಾನ

ಇಂದು ನಡೆಯಲಿರುವ ಮೊದಲ ಸಭೆಗೆ ರಾಜ್ಯ ಕಾಂಗ್ರೆಸ್‌ನ ಒಟ್ಟು 37 ನಾಯಕರಿಗೆ ಆಹ್ವಾನ ನೀಡಲಾಗಿದೆ. 37 ನಾಯಕರಲ್ಲಿ ಸಿಎಂ, ಡಿಸಿಎಂ ಸೇರಿದಂತೆ 19 ಸಚಿವರು ಭಾಗಿಯಾಗಲಿದ್ದಾರೆ. ಜೊತೆಗೆ ಸಂಸದರಾದ ಡಿ.ಕೆ‌ ಸುರೇಶ್, ಜಿ.ಸಿ‌ ಚಂದ್ರಶೇಖರ್, ಎಲ್‌. ಹನುಮಂತಯ್ಯ ಭಾಗಿಯಾಗಲಿದ್ದು ಸಭೆಗೆ ಹಿರಿಯ ಶಾಸಕರಿಗೂ ಆಹ್ವಾನ ನೀಡಲಾಗಿದೆ. ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್, ರಾಘವೇಂದ್ರ ಹಿಟ್ನಾಳ್, ತುಕಾರಾಂ, ವಿನಯ್ ಕುಲಕರ್ಣಿ‌ ಭಾಗಿಯಾಲಿದ್ದಾರೆ. ಅಷ್ಟೇ ಅಲ್ಲದೆ ರಮೇಶ್‌ ಕುಮಾರ್ ಹಾಗೂ ಆರ್.‌ವಿ ದೇಶಪಾಂಡೆ ಸಭೆಯಲ್ಲಿ‌ ಭಾಗಿಯಾಗಲಿದ್ದಾರೆ. ಇತ್ತೀಚೆಗೆ ಈಡಿಗರ ಸಮಾವೇಶದಲ್ಲಿ ಪರೋಕ್ಷವಾಗಿ ಪಕ್ಷದ. ನಾಯಕರ ವಿರುದ್ಧ ಅಸಮಧಾನ ಹೊರಹಾಕಿದ್ದ ಬಿ.ಕೆ ಹರಿಪ್ರಸಾದ್ ಅವರಿಗೂ ಆಹ್ವಾನ ನೀಡಲಾಗಿದೆ.

ಇನ್ನು ಎರಡನೇ ಸಭೆಯಲ್ಲಿ ಕೇವಲ ಸಚಿವರಷ್ಟೇ ಭಾಗಿಯಾಗಲಿದ್ದು, ಇಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಸಚಿವರ ನಡುವೆ ಇರುವ ಮನಸ್ತಾಪ ಬಗೆಹರಿಸುವ ಕೆಲಸ ಹೈಕಮಾಂಡ್ ಮಾಡಲಿದೆ. ಅಲ್ಲದೆ ಕಾಂಗ್ರೆಸ್ ಗ್ಯಾರಂಟಿಗಳನ್ನು ಲೋಪವಿಲ್ಲದಂತೆ ಅನುಷ್ಠಾನ ಗೊಳಿಸುವ ಬಗ್ಗೆಯೂ ಸಚಿವರೊಂದಿಗೆ ಹೈಕಮಾಂಡ್ ನಾಯಕರು ಸಲಹೆ ನೀಡಲಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ